ಶಾಸಕ ಹರೀಶ್‌ ಪೂಂಜಾ ವಿರುದ್ಧ ಎಫ್‌ಐಆರ್‌!

Public TV
1 Min Read
HARISH POONJA 1

ಮಂಗಳೂರು: ಬಿಜೆಪಿ ಶಾಸಕ ಹರೀಶ್‌ ಪೂಂಜಾ (Harish Poonja) ಮೇಲೆ ಎಫ್‌ಐಆರ್‌ ದಾಖಲಾಗಿದೆ.

ಶಾಸಕರು ತನ್ನ ಬೆಂಬಲಿಗರ ಪರ ಪೊಲೀಸ್ ಠಾಣೆಯಲ್ಲಿ ಧರಣಿ ನಡೆಸಿದ್ದರು. ಅಲ್ಲದೇ ಪೊಲೀಸ್ ಠಾಣೆ ನಿಮ್ಮ‌ ಅಪ್ಪಂದಾ ಎಂದು ಬೆಳ್ತಂಗಡಿ PSI ಮುರುಳಿಧರ್ ನಾಯ್ಕ್ ಗೆ ಧಮ್ಕಿ ಹಾಕಿದ್ದಾರೆ. ಈ ಹಿನ್ನೆಲೆಯಲ್ಲಿ ದಕ್ಷಿಣ ಕನ್ನಡ ಜಿಲ್ಲೆ ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ (Belthangaday Police Station)  ಶಾಸಕರ ವಿರುದ್ಧ ಪ್ರಕರಣ ದಾಖಲಾಗಿದೆ.

ನಡೆದಿದ್ದೇನು..?: ಶಾಸಕ ಪೂಂಜಾ ಆಪ್ತರು ಅಕ್ರಮ ಕಲ್ಲುಗಣಿಕಾರಿಕೆ ನಡೆಸುತ್ತಿದ್ದ ಎಂಬ ಆರೋಪದ ಮೇಲೆ ಬೆಳ್ತಂಗಡಿಯ ಮೆಲಂತಬೆಟ್ಟುವಿನ ಕಲ್ಲಿನ ಕೋರೆಗೆ ತಹಶೀಲ್ದಾರ್ ನೇತೃತ್ವದ ಪೊಲೀಸ್ ತಂಡ ದಾಳಿ ನಡೆಸಿತ್ತು. ಈ ವೇಳೆ ಗುರುವಾಯನಕೆರೆಯ ಬಿಜೆಪಿಯ ಯುವಮೋರ್ಚಾದ ತಾಲೂಕು ಅಧ್ಯಕ್ಷ, ರೌಡಿಶೀಟರ್ ಶಶಿರಾಜ್ ಶೆಟ್ಟಿಯನ್ನು ಬಂಧಿಸಲಾಗಿತ್ತು. ಇದಕ್ಕೆ ಕೆರಳಿದ್ದ ಶಾಸಕರು ಹಾಗೂ ಬಿಜೆಪಿ ಕಾರ್ಯಕರ್ತರು ಬೆಳ್ತಂಗಡಿ ಠಾಣೆಯೆದುರು ರಾತ್ರೋರಾತ್ರಿ ಪ್ರತಿಭಟನೆ ನಡೆಸಿ ಪೊಲೀಸರ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದರು. ಇದನ್ನೂ ಓದಿ: ಕಾನ್ಸ್ ಚಿತ್ರೋತ್ಸವ ಮುಗಿದ ನಂತರ ಐಶ್ವರ್ಯಾ ರೈ ಕೈಗೆ ಶಸ್ತ್ರ ಚಿಕಿತ್ಸೆ

SHASHIRAJ SHETTY

ಪ್ರತಿಭಟನೆಯ ವೇಳೆ ಅಮಾಯಕನ ಬಂಧನವಾಗಿದ್ದು, ಕೂಡಲೇ ಆತನನ್ನು ಬಿಡುಗಡೆಗೊಳಿಸಬೇಕೆಂದು ಆಗ್ರಹಿಸಿದರು. ಅಲ್ಲದೇ ಪ್ರತಿಭಟನೆ ವೇಳೆ ಪೊಲೀಸ್ ಹಾಗೂ ಇಲಾಖೆ ವಿರುದ್ಧ ಶಾಸಕರು ಅವಹೇಳನ ಮಾಡಿದ್ದರು. ಈ ಹಿನ್ನೆಲೆಯಲ್ಲಿ ಶಾಸಕ ಪೂಂಜಾ ವಿರುದ್ಧ ಬೆಳ್ತಂಗಡಿ ಪೊಲೀಸರು ಎಫ್ ಐಆರ್ ದಾಖಲಿಸಿಕೊಂಡರು.

Share This Article