ಬೆಳಗಾವಿ: ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ (Lakshmi Hebbalkar) ವಿರುದ್ಧ ವಿಧಾನ ಪರಿಷತ್‌ನಲ್ಲಿ ಗುರುವಾರ ಅಶ್ಲೀಲ ಪದಬಳಕೆ ಮಾಡಿದ ಆರೋಪ ಮೇಲೆ ಬಿಜೆಪಿಯ ವಿಧಾನ ಪರಿಷತ್ ಸದಸ್ಯ ಸಿ.ಟಿ ರವಿ (CT Ravi) ವಿರುದ್ಧ ಹಿರೇಬಾಗೇವಾಡಿ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದೆ.
Advertisement
ಲಕ್ಷ್ಮಿ ಹೆಬ್ಬಾಳ್ಕರ್ ಅವರು ನೀಡಿದ ದೂರಿನ್ವಯ ಭಾರತೀಯ ನ್ಯಾಯ ಸಂಹಿತೆ ಸೆಕ್ಷನ್ 75, 79ರ ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ. ಕೇಂದ್ರ ಗೃಹ ಸಚಿವ ಅಮಿತ್ ಶಾ (Amit Shah) ಅವರು ಅಂಬೇಡ್ಕರ್ ಕುರಿತು ನೀಡಿದ್ದಾರೆ ಎನ್ನಲಾದ ಹೇಳಿಕೆ ಸಂಬಂಧ ವಿಧಾನ ಪರಿಷತ್‌ನಲ್ಲಿ ಗುರುವಾರ ಬೆಳಗ್ಗೆ ಕಾಂಗ್ರೆಸ್ ಪ್ರತಿಭಟನೆ (Congress Protest) ನಡೆಸುತ್ತಿದ್ದ ವೇಳೆ ಸಿ.ಟಿ ರವಿ, ಲಕ್ಷ್ಮಿ ಹೆಬ್ಬಾಳ್ಕರ್ ಅವರ ಕುರಿತು ಅವಹೇಳನಕಾರಿ ಪದಬಳಸಿ ನಿಂದಿಸಿದ್ದಾರೆ ಎಂದು ಆರೋಪಿಸಲಾಗಿದೆ. ಇದನ್ನೂ ಓದಿ: ಹೆಬ್ಬಾಳ್ಕರ್ ವಿರುದ್ಧ ಸಿಟಿ ರವಿ ಅಸಂವಿಧಾನಿಕ ಪದ ಬಳಸಿ ನಿಂದಿಸಿದ್ರಾ?
Advertisement
Advertisement
ಪ್ರಕರಣದ ಸಂಬಂಧ ಕಾಂಗ್ರೆಸ್ ಮುಖಂಡರು ಈಗಾಗಲೇ ಸಭಾಪತಿ ಬಸವರಾಜ ಹೊರಟ್ಟಿ ಅವರಿಗೆ ದೂರು ನೀಡಿದ್ದಾರೆ. ಸಿ.ಟಿ ರವಿ ಅವರನ್ನು ಸದನದಿಂದ ಅಮಾನತುಗೊಳಿಸಬೇಕು. ಅವರ ವಿರುದ್ಧ ಕ್ರಿಮಿನಲ್ ಪ್ರಕರಣ ದಾಖಲಿಸಿ ಬಂಧಿಸಬೇಕು ಎಂದು ಆಗ್ರಹಿಸಿದ್ದಾರೆ. ಇದನ್ನೂ ಓದಿ: ಸುವರ್ಣ ಸೌಧದಲ್ಲಿ ಹೈಡ್ರಾಮಾ – ಹೆಬ್ಬಾಳ್ಕರ್ ಬೆಂಬಲಿಗರಿಂದ ಸಿ.ಟಿ ರವಿ ಮೇಲೆ ಹಲ್ಲೆಗೆ ಯತ್ನ, ಏಕವಚನದಲ್ಲೇ ಆವಾಜ್!
Advertisement
ಸಿ.ಟಿ ರವಿ ಅವರು ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ವಿರುದ್ಧ ಅಶ್ಲೀಲ ಪದ ಬಳಕೆ ಮಾಡಿರುವುದು ಕ್ರಿಮಿನಲ್ ಅಪರಾಧ ಮತ್ತು ಲೈಂಗಿಕ ದೌರ್ಜನ್ಯಕ್ಕೆ ಸಮನಾದುದು ಎಂದು ಸಿಎಂ ಸಿದ್ದರಾಮಯ್ಯ ಪ್ರತಿಕ್ರಿಯಿಸಿದ್ದಾರೆ. ಇದನ್ನೂ ಓದಿ: Kolar| ಅಪಘಾತದಲ್ಲಿ ಐವರು ಸಾವು – ಮುಳಬಾಗಿಲು ಶಾಸಕನಿಂದ ತಲಾ 20,000 ರೂ. ಆರ್ಥಿಕ ನೆರವು
ಬಸವರಾಜ ಹೊರಟ್ಟಿ ಭೇಟಿಯಾದ ಡಿಸಿಎಂ, ಸಚಿವರು
ಸಚಿವರ ವಿರುದ್ಧ ಸಿ.ಟಿ ರವಿ ಅಸಂವಿಧಾನಿಕ ಪದ ಬಳಕೆ ಆರೋಪ ಪ್ರಕರಣ ಸದ್ದು ಮಾಡ್ತಿದ್ದಂತೆ ಉಪ ಮುಖ್ಯಮಂತ್ರಿ ಹಾಗೂ ಕೆಪಿಸಿಸಿ ಅಧ್ಯಕ್ಷರಾದ ಡಿ.ಕೆ ಶಿವಕುಮಾರ್, ಕಾನೂನು ಸಚಿವ ಹೆಚ್.ಕೆ ಪಾಟೀಲ್, ಸಚಿವ ಹಾಗೂ ಪರಿಷತ್‌ನ ಕಾಂಗ್ರೆಸ್ ಸಭಾ ನಾಯಕ ಎನ್.ಎಸ್ ಬೋಸರಾಜು, ಸಚಿವರಾದ ಈಶ್ವರ್ ಖಂಡ್ರೆ, ಪ್ರಿಯಾಂಕ್ ಖರ್ಗೆ, ಶಿವರಾಜ್ ತಂಡಗಡಿ, ಡಾ.ಶರಣಪ್ರಕಾಶ್ ಪಾಟೀಲ್, ಹಿರಿಯ ಸದಸ್ಯರಾದ ಬಿ.ಕೆ ಹರಿಪ್ರಸಾದ್, ನಾಗರಾಜ್ ಯಾದವ್, ಉಮಾಶ್ರೀ, ಶಾಸಕಿಯರಾದ ನಯನ ಮೋಟಮ್ಮ, ರೂಪಾ ಶಶಿಧರ್, ಲತಾ ಮಲ್ಲಿಕಾರ್ಜುನ್, ಅನ್ನಪೂರ್ಣ ತುಕಾರಂ ಸೇರಿದಂತೆ ಕಾಂಗ್ರೆಸ್ ಶಾಸಕರು ಸಭಾಪತಿ ಬಸವರಾಜ ಹೊರಟ್ಟಿ ಅವರನ್ನು ಭೇಟಿಯಾಗಿ ಸಿ.ಟಿ ರವಿ ವಿರುದ್ಧ ಕ್ರಮಕ್ಕೆ ಒತ್ತಾಯಿಸಿದರು.