ಮೈಸೂರು: ಚಿತ್ರದುರ್ಗ ಮುರುಘಾ ಮಠದ (Murugha Mutt) ಮುರುಘಾ ಶ್ರೀಗಳಿಗೆ (Murugha Shri) ಮತ್ತೊಂದು ಸಂಕಷ್ಟ ಎದುರಾಗಿದೆ. ಮಠದಲ್ಲಿ ಕೆಲಸ ಮಾಡುತ್ತಿದ್ದ ನೌಕರರ ಮಕ್ಕಳಿಗೆ ಲೈಂಗಿಕ ಕಿರುಕುಳ ನೀಡಿದ್ದಾರೆಂದು ಆರೋಪಿಸಿ ನಗರದ ನಜರಾಬಾದ್ ಠಾಣೆಯಲ್ಲಿ ಎಫ್ಐಆರ್ ದಾಖಲಿಸಲಾಗಿದೆ.
ಮೈಸೂರಿನ ನಜರಾಬಾದ್ ಠಾಣೆಯಲ್ಲಿ ಶ್ರೀಗಳ ವಿರುದ್ಧ ತಡರಾತ್ರಿ ಎಫ್ಐಆರ್ (FIR) ದಾಖಲಾಗಿದೆ. ಒಡನಾಡಿ ಸಂಸ್ಥೆಯ ನೆರವಿನಿಂದ ದೂರು ದಾಖಲಿಸಲಾಗಿದೆ. ಈ ಪ್ರಕರಣ ಕೂಡ ಚಿತ್ರದುರ್ಗ ಗ್ರಾಮಾಂತರ ಠಾಣೆಗೆ ವರ್ಗಾವಣೆಯಾಗುವ ಸಾಧ್ಯತೆ ಇದೆ. ಇದನ್ನೂ ಓದಿ: ಪ್ರಹ್ಲಾದ್ ಜೋಶಿ ಕಾರ್ಯವೈಖರಿ ಹೊಗಳಿದ ಕಾಂಗ್ರೆಸ್ ನಾಯಕ, ರಾಜಸ್ಥಾನ ಸಿಎಂ ಗೆಹ್ಲೋಟ್
ಮಠದ ವಿದ್ಯಾರ್ಥಿನಿಯರಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದಡಿ ಶ್ರೀಗಳ ವಿರುದ್ಧ ಪೋಕ್ಸೋ ಪ್ರಕರಣ ದಾಖಲಾಗಿತ್ತು. ಸದ್ಯ ಶ್ರೀಗಳಿಗೆ ನ್ಯಾಯಾಂಗ ಬಂಧನ ವಿಧಿಸಲಾಗಿದ್ದು, ಜೈಲಿನಲ್ಲಿದ್ದಾರೆ.
ಶ್ರೀಗಳು ಜಾಮೀನು ಕೋರಿ ಸಲ್ಲಿಸಿದ್ದ ಅರ್ಜಿಯನ್ನು ಚಿತ್ರದುರ್ಗ ನ್ಯಾಯಾಲಯ ವಜಾಗೊಳಿಸಿತ್ತು. ಬಳಿಕ ಮಠದ ಹಣಕಾಸು ವಿಚಾರ ಹಾಗೂ ಸಿಬ್ಬಂದಿಗೆ ಸಂಬಳ ನೀಡಲು ಜೈಲಿನಲ್ಲೇ ಸಹಿ ಹಾಕುವುದಕ್ಕೆ ಅವಕಾಶ ನೀಡುವಂತೆಯೂ ಮನವಿ ಮಾಡಲಾಗಿತ್ತು. ಆದರೆ ಮನವಿಯನ್ನು ನ್ಯಾಯಾಧೀಶರು ತಿರಸ್ಕರಿಸಿದ್ದರು. ಇದನ್ನೂ ಓದಿ: ಬೆಂಗಳೂರು ಸೇರಿದಂತೆ ರಾಜ್ಯಾದ್ಯಂತ 5 ದಿನ ಭಾರೀ ಮಳೆ – ಕರಾವಳಿಗೆ ಯೆಲ್ಲೋ ಅಲರ್ಟ್