ಲಕ್ನೋ: ಸನಾತನ ಧರ್ಮವನ್ನು ಟೀಕೆ ಮಾಡಿದ್ದ ಸಚಿವ ಪ್ರಿಯಾಂಕ್ ಖರ್ಗೆ (Priyank Kharge) ವಿರುದ್ಧ ಉತ್ತರಪ್ರದೇಶದಲ್ಲಿ (Uttarpradesh) ಎಫ್‍ಐಆರ್ ದಾಖಲಾಗಿದೆ.
ಡಿಎಂಕೆ ನಾಯಕ ಉದಯನಿಧಿ ಸ್ಟಾಲಿನ್ (Udayanidhi Stalin) ಸನಾತನ ಧರ್ಮವನ್ನು ನಿರ್ಮೂಲನೆ ಮಾಡುವ ಕುರಿತು ಕರೆ ನೀಡಿದ್ದರು. ಇವರ ಹೇಳಿಕೆಯನ್ನು ಖರ್ಗೆ ಬೆಂಬಲಿಸಿದ್ದರು. ಹೀಗಾಗಿ ವಕೀಲರಾದ ಹರ್ಷಗುಪ್ತಾ ಮತ್ತು ರಾಮ್ ಸಿಂಗ್ ಲೋಧಿ ಅವರ ದೂರಿನ ಮೇರೆಗೆ ಪ್ರಕರಣ ದಾಖಲಿಸಲಾಗಿದೆ.
ಈ ಹಿನ್ನೆಲೆಯಲ್ಲಿ ಉತ್ತರ ಪ್ರದೇಶದ ರಾಂಪುರದ ಸಿವಿಲ್ ಲೈನ್ಸ್ ಪೊಲೀಸ್ ಠಾಣೆಯಲ್ಲಿ ಐಪಿಸಿ ಸೆಕ್ಷನ್ 295 ಎ (ಧಾರ್ಮಿಕ ಭಾವನೆಗೆ ಧಕ್ಕೆ) ಹಾಗೂ 153 ಎ (ಗುಂಪುಗಳ ನಡುವೆ ದ್ವೇಷಕ್ಕೆ ಉತ್ತೇಜನ) ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ. ಪ್ರಿಯಾಂಕ್ ಖರ್ಗೆ ಜೊತೆ ಉದಯನಿಧಿ ವಿರುದ್ಧವೂ ಪ್ರಕರಣ ದಾಖಲಾಗಿದೆ.
ಪ್ರಿಯಾಂಕ್ ಖರ್ಗೆ ಹೇಳಿದ್ದೇನು..?: ಬೆಂಗಳೂರಿನಲ್ಲಿ ನಡೆದ ಟೆಕ್ ಸಮ್ಮಿಟ್ 2023 ಹಿನ್ನೆಲೆಯಲ್ಲಿ ಖಾಸಗಿ ಹೋಟೆಲ್‍ನಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ್ದ ಪ್ರಿಯಾಂಕ್ ಖರ್ಗೆ, ಉದಯನಿಧಿ ಸ್ಟಾಲಿನ್ ಯಾವ ಸಂದರ್ಭದಲ್ಲಿ ಆ ಹೇಳಿಕೆ ಕೊಟ್ಟಿದ್ದಾರೋ ಗೊತ್ತಿಲ್ಲ. ಯಾವ ಧರ್ಮದಲ್ಲಿ ಸಾಮಾಜಿಕ ಸಮಾನತೆ, ಆರ್ಥಿಕ ಸಮಾನತೆ ಇಲ್ಲವೋ, ಯಾವ ಧರ್ಮದಲ್ಲಿ ಮನುಷ್ಯರ ನಡುವೆ ಭೇದ-ಭಾವ ಇರುತ್ತದೆಯೋ ಅದು ಧರ್ಮವೇ ಅಲ್ಲ ಎಂದಿದ್ದರು.
ನಾವೆಲ್ಲರೂ ಸಂವಿಧಾನದ ಅಡಿಯಲ್ಲಿ ಇದ್ದೇವೆ. ಸಂವಿಧಾನವೇ ನಮ್ಮ ಧರ್ಮ, ಬುದ್ಧ, ಬಸವ ಹಾಕಿಕೊಟ್ಟಿರುವುದನ್ನ ಅನುಸರಿಸುತ್ತೇವೆ. ನನ್ನ ವೈಯಕ್ತಿಕ ಅಭಿಪ್ರಾಯ ಹೇಳುವುದಾದರೆ ಸಂವಿಧಾನವೇ ನಮ್ಮ ಧರ್ಮ ಆಗಬೇಕು ಎಂದು ಹೇಳಿದ್ದರು.
Web Stories
[web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]