Bengaluru City
ಶಾಸಕಿ ಸೌಮ್ಯ ರೆಡ್ಡಿ ವಿರುದ್ಧ ಎಫ್ಐಆರ್ ದಾಖಲು

ಬೆಂಗಳೂರು: ಜಯನಗರದ ಕಾಂಗ್ರೆಸ್ ಶಾಸಕಿ ಸೌಮ್ಯರೆಡ್ಡಿ ವಿರುದ್ಧ ಎಫ್ಐಆರ್ ದಾಖಲಾಗಿದೆ.
ನಗರದ ಉಪ್ಪಾರಪೇಟೆ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದ್ದು, ಕಾಂಗ್ರೆಸ್ ಪ್ರತಿಭಟನೆ ವೇಳೆ ಕರ್ತವ್ಯನಿರತ ಮಹಿಳಾ ಪೊಲೀಸ್ ಸಿಬ್ಬಂದಿ ಮೇಲೆ ಹಲ್ಲೆ ಮಾಡಿದ ಆರೋಪದ ಮೇಲೆ ಎಫ್ಐಆರ್ ದಾಖಲಿಸಲಾಗಿದೆ. ಐಪಿಸಿ ಸೆಕ್ಷನ್ 323(ಸಾರ್ವಜನಿಕವಾಗಿ ನೋವುಂಟು ಮಾಡುವುದು) ಹಾಗೂ 353 (ಕರ್ತವ್ಯನಿರತ ಸಿಬ್ಬಂದಿ ಮೇಲೆ ಹಲ್ಲೆ, ಸರ್ಕಾರಿ ಕೆಲಸಕ್ಕೆ ಅಡ್ಡಿ) ಅಡಿ ಪ್ರಕರಣ ದಾಖಲಿಸಲಾಗಿದೆ.
ಹೋಮ್ ಗಾರ್ಡ್ ಅಂಬಿಕಾ ನೀಡಿದ ದೂರಿನ ಆಧಾರದ ಮೇಲೆ ಶಾಸಕಿಯ ವಿರುದ್ಧ ಎಫ್ಐಆರ್ ದಾಖಲಿಸಲಾಗಿದೆ. ಕರ್ತವ್ಯ ನಿರತವಾಗಿರುವಾಗ ನನ್ನ ಮೇಲೆ ಹಲ್ಲೆ ನಡೆಸಲಾಗಿದೆ ಎಂದು ಮಹಿಳಾ ಗಾರ್ಡ್ ಆರೋಪಿಸಿದ್ದಾರೆ. ಈ ಹಿನ್ನೆಲೆ ಸರ್ಕಾರಿ ಕೆಲಸಕ್ಕೆ ಅಡ್ಡಿ ಪಡಿಸಿದ ಕಾಯ್ದೆಯಡಿ ಎಫ್ಐಆರ್ ದಾಖಲಿಸಲಾಗಿದೆ.
ಕೇಂದ್ರ ಸರ್ಕಾರ ಜಾರಿಗೆ ತಂದಿರುವ ರೈತ ವಿರೋಧಿ ಕಾನೂನುಗಳನ್ನು ಖಂಡಿಸಿ ಜ.20ರಂದು ಕಾಂಗ್ರೆಸ್ ಪ್ರತಿಭಟನೆ ನಡೆಸಿತ್ತು. ರಾಜಭವನ ಮುತ್ತಿಗೆ ಹಾಕುವ ವೇಳೆ ಸೌಮ್ಯ ರೆಡ್ಡಿಯವರು ಮಹಿಳಾ ಪೊಲೀಸ್ ಸಿಬ್ಬಂದಿ ಹೊಡೆದಿದ್ದು ಸುದ್ದಿಯಾಗಿತ್ತು.
