ಹಾವೇರಿ: ವಕ್ಫ್ ನೋಟಿಸ್ ನೀಡಿದ ಕಾರಣ ರೈತ ರುದ್ರಪ್ಪ ಆತ್ಮಹತ್ಯೆ ಮಾಡಿಕೊಂಡಿರುವುದಾಗಿ ಪೋಸ್ಟ್ ಹಾಕಿದ್ದ ಸಂಸದ ತೇಜಸ್ವಿ ಸೂರ್ಯ (Tejasvi Surya) ವಿರುದ್ಧ ಹಾವೇರಿ ಸೆನ್ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದೆ.
ಪಹಣಿಯಲ್ಲಿ ವಕ್ಫ್ (Waqf) ಎಂದು ನಮೂದಾದ ಹಿನ್ನೆಲೆ ರೈತ ಆತ್ಮಹತ್ಯೆ ಮಾಡಿಕೊಂಡಿರುವುದಾಗಿ ತೇಜಸ್ವಿ ಸೂರ್ಯ ತಮ್ಮ ಎಕ್ಸ್ ಖಾತೆಯಲ್ಲಿ ಪೋಸ್ಟ್ ಮಾಡಿದ್ದರು. ಇದೀಗ ಸಾಲಬಾಧೆಗೆ ನೊಂದು ರೈತ ಆತ್ಮಹತ್ಯೆ ಮಾಡಿಕೊಂಡಿರುವುದಾಗಿ ಪೊಲೀಸ್ ಇಲಾಖೆ ಹಾಗೂ ಹಾವೇರಿ ಜಿಲ್ಲಾಡಳಿತ ಸ್ಪಷ್ಟನೆ ನೀಡಿದೆ. ಈ ಕಾರಣಕ್ಕೆ ತೇಜಸ್ವಿ ಸೂರ್ಯ ವಿರುದ್ಧ ಹಾವೇರಿ ಸೆನ್ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದೆ. ಇದನ್ನೂ ಓದಿ: ವಕ್ಫ್ ನೋಟಿಸ್‌ನಿಂದಲ್ಲ ಸಾಲಭಾದೆಯಿಂದ ರೈತ ರುದ್ರಪ್ಪ ಆತ್ಮಹತ್ಯೆ – ಹಾವೇರಿ ಜಿಲ್ಲಾಡಳಿತ ಸ್ಪಷ್ಟನೆ
Advertisement
Advertisement
ಮೃತ ರೈತ ರುದ್ರಪ್ಪನ ಕುಟುಂಬಸ್ಥರು ಗುರುವಾರ ಹುಬ್ಬಳ್ಳಿಯಲ್ಲಿ (Hubballi) ವಕ್ಫ್ ಕಾಯಿದೆ ತಿದ್ದುಪಡಿ ಜಂಟಿ ಸದನ ಸಮಿತಿಗೆ ವಕ್ಫ್ ಬೋರ್ಡ್‌ನಿಂದ ಅನ್ಯಾಯ ಆಗಿರೋದಾಗಿ ದೂರು ನೀಡಿದ್ದರು. ಆದರೆ ವಕ್ಫ್ ಎಂದು ನಮೂದಾಗಿದ್ದಕ್ಕೆ ರೈತ ಆತ್ಮಹತ್ಯೆ ಮಾಡಿಕೊಂಡಿಲ್ಲ ಎಂದು ಪೊಲೀಸರು ಹಾಗೂ ಜಿಲ್ಲಾಡಳಿತ ಈಗ ಸ್ಪಷ್ಟನೆ ನೀಡಿದೆ. ಇದನ್ನೂ ಓದಿ: ದೇವಾಲಯಗಳ ಪ್ರಸಾದ ಡೋರ್ ಡೆಲಿವರಿ ಸ್ಕೀಂ ಜಾರಿಗೆ ಮುಂದಾದ ಮುಜರಾಯಿ ಇಲಾಖೆ
Advertisement