ಬೆಂಗಳೂರು: ರಾಜ್ಯದಲ್ಲಿರುವ ಕಾಂಗ್ರೆಸ್ ಸರ್ಕಾರದ (Congress Government) ವಿರುದ್ಧ ಪೋಸ್ಟರ್ (Poster) ಅಂಟಿಸಿ ಅಭಿಯಾನ ನಡೆಸಿದ್ದವರ ವಿರುದ್ಧ ಎಫ್‌ಐಆರ್ ದಾಖಲಿಸಲಾಗಿದೆ.
ಕಳೆದ ಮೂರು ದಿನದ ಹಿಂದೆ ಜೆಡಿಎಸ್ ಪಕ್ಷದಿಂದ ಸರ್ಕಾರದ ವಿರುದ್ಧ “ಸಾಕಪ್ಪ ಸಾಕು ಕಾಂಗ್ರೆಸ್ ಸರ್ಕಾರ” ಎಂಬ ಹೆಸರಿನಲ್ಲಿ ಪೋಸ್ಟ್ ಅಂಟಿಸಿ ಸರ್ಕಾರವನ್ನು ಟೀಕಿಸಲಾಗಿತ್ತು
ನಗರದ ಮಹಾರಾಣಿ ಕಾಲೇಜು ಬಸ್ ನಿಲ್ದಾಣ, ಕೆ.ಆರ್ ಸರ್ಕಲ್ ಸೇರಿ ವಿವಿಧ ಕಡೆ ಪೋಸ್ಟರ್ ಅಂಟಿಸಿ, ಕ್ಯೂ ಆರ್ ಕೋಡ್ ಸ್ಕ್ಯಾನ್ ಅಳವಡಿಕೆ ಮಾಡಲಾಗಿತ್ತು. ಇದನ್ನೂ ಓದಿ: ಮದುವೆಯಾಗಲು ಬಂದ ಪ್ರೇಮಿಗಳಿಗೆ ಗೂಸಾ – ರಕ್ತ ಸುರಿಯುತ್ತಿದ್ದರೂ ಪ್ರಿಯಕರನತ್ತ ಕೈ ಸನ್ನೆ ಮಾಡಿದ ಯುವತಿ
ಯಾವುದೇ ಅನುಮತಿ ಪಡೆಯದೇ ಪೋಸ್ಟರ್‌ಗಳನ್ನು ಅಂಟಿಸಿದ್ದ ಹಿನ್ನೆಲೆಯಲ್ಲಿ ಹಲಸೂರು ಪೊಲೀಸ್ ಠಾಣೆಯಲ್ಲಿ (Halasuru Police Station) ಈ ಸಂಬಂಧ ಎಫ್ ಐಆರ್ ದಾಖಲಿಸಲಾಗಿದೆ. ಇದನ್ನೂ ಓದಿ: ಯತ್ನಾಳ್ ಬೆನ್ನುಬಿದ್ದು ಪೀಠ ಕಳೆದುಕೊಳ್ತಾರ ಜಯಮೃತ್ಯುಂಜಯ ಶ್ರೀ?
ಬೆಲೆ ಏರಿಕೆ, ಭ್ರಷ್ಟಾಚಾರ, ಆರೋಪದಲ್ಲಿ ಜೆಡಿಎಸ್ ಪಕ್ಷ “ಸಾಕಪ್ಪ ಸಾಕು ಕಾಂಗ್ರೆಸ್ ಸರ್ಕಾರ” ಹೆಸರಿನಲ್ಲಿ ಅಭಿಯಾನ ನಡೆಸುತ್ತಿದೆ.