ಬೆಂಗಳೂರು: ಅನಧಿಕೃತ ಬ್ಯಾನರ್, ಫ್ಲೆಕ್ಸ್, ಪೋಸ್ಟರ್ಸ್, ಬಂಟಿಂಗ್ಸ್ ಅಳವಡಿಸುವವರ ವಿರುದ್ಧ ಪ್ರಕರಣ ದಾಖಲಿಸಲಾಗುವುದು ಎಂದು ಬಿಬಿಎಂಪಿ ಮುಖ್ಯ ಆಯುಕ್ತ ಗೌರವ್ ಗುಪ್ತ ತಿಳಿಸಿದ್ದಾರೆ.
Advertisement
ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ಅನಧಿಕೃತವಾಗಿ ಬ್ಯಾನರ್, ಫ್ಲೆಕ್ಸ್, ಪೋಸ್ಟರ್ಸ್, ಬಂಟಿಂಗ್ಸ್ ಅಳವಡಿಸುವವರ ವಿರುದ್ಧ ಪೊಲೀಸ್ ಠಾಣೆಯಲ್ಲಿ ದೂರು ನೀಡಿ ಎಫ್‌ಐಆರ್ ದಾಖಲಿಸಲು ಎಲ್ಲಾ ವಲಯದ ಅಧಿಕಾರಿಗಳಿಗೆ ಮುಖ್ಯ ಆಯುಕ್ತರು ಸೂಚನೆ ನೀಡಿದ್ದಾರೆ. ಇದನ್ನೂ ಓದಿ: 9 ಎಫ್‍ಐಆರ್, 7 ಮಂದಿ ಅರೆಸ್ಟ್ – ಶಿವಮೊಗ್ಗ ನಗರದಲ್ಲಿ ಶುಕ್ರವಾರದವರೆಗೆ ನಿಷೇಧಾಜ್ಞೆ
Advertisement
Advertisement
ಪಾಲಿಕೆಯ ಎಲ್ಲಾ 8 ವಲಯಗಳಲ್ಲಿಯೂ ಮುಖ್ಯ ಇಂಜಿನಿಯರ್‌ಗಳ ನೇತೃತ್ವದ ತಂಡವು ಅನಧಿಕೃತವಾಗಿ ಅಳವಡಿಸಿರುವ ಬ್ಯಾನರ್ಸ್, ಫ್ಲೆಕ್ಸ್ , ಪೋಸ್ಟರ್ಸ್, ಬಂಟಿಂಗ್ಸ್‌ಗಳ ತೆರವು ಕಾರ್ಯಾಚರಣೆ ತೀವ್ರಗತಿಯಲ್ಲಿ ನಡೆಯುತ್ತಿದೆ. ನಗರದಲ್ಲಿ ಇನ್ನು ಮುಂದೆ ಅನಧಿಕೃತವಾಗಿ ಫ್ಲೆಕ್ಸ್, ಬ್ಯಾನರ್‌ಗಳನ್ನು ಅಳವಡಿಸುವುದು ಕಂಡುಬಂದಲ್ಲಿ, ಕೂಡಲೇ ತಪ್ಪಿತಸ್ಥರ ವಿರುದ್ಧ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಿಸಲಾಗುವುದು ಎಂದು ಎಚ್ಚರಿಸಿದ್ದಾರೆ. ಇದನ್ನೂ ಓದಿ: ಒಂದು ಟ್ವೀಟ್ ಎಡವಟ್ – ಶೇಷಾದ್ರಿಪುರಂ ಪೊಲೀಸರ ವಶದಲ್ಲಿ ಚೇತನ್