ಬೆಂಗಳೂರು: ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ (Rahul Gandhi) ಪರ ರೋಡಿಗಿಳಿದು ಪ್ರತಿಭಟನೆ ನಡೆಸಿದ ರಾಜ್ಯ ಯುವ ಕಾಂಗ್ರೆಸ್ ಅಧ್ಯಕ್ಷ ಮೊಹಮ್ಮದ್ ನಲಪಾಡ್ (Mohammed Nalapad) ವಿರುದ್ಧ ಎಫ್ಐಆರ್ ದಾಖಲಾಗಿದೆ.
ರಾಹುಲ್ ಗಾಂಧಿಯ ಭಾರತ್ ಜೋಡೊ ನ್ಯಾಯ ಯಾತ್ರೆಗೆ (Bharat Jodo Nyay Yatra) ಅಸ್ಸಾಂನಲ್ಲಿ ಅಡ್ಡಿಪಡಿಸಿದ್ದಕ್ಕೆ ರಾಜ್ಯದಲ್ಲಿ ಕಾಂಗ್ರೆಸ್ (Congress) ಪ್ರತಿಭಟನೆ ನಡೆಸಿತ್ತು. ಬೆಂಗಳೂರಿನಲ್ಲೂ ಸಹ ರಾಹುಲ್ ಗಾಂಧಿ ಪರ ಕಾಂಗ್ರೆಸ್ ಯುವ ಘಟಕದ ಅಧ್ಯಕ್ಷ ನಲಪಾಡ್ ಪಂಜಿನ ಮೆರವಣೆಗೆ ನಡೆಸಿ ಪ್ರತಿಭಟಿಸಿದ್ದರು. ಇದನ್ನೂ ಓದಿ: ಕಲಬುರಗಿ ಅಂಬೇಡ್ಕರ್ ಪ್ರತಿಮೆಗೆ ಅವಮಾನ ಮಾಡಿದ ಕೇಸ್ನಲ್ಲಿ ನಾಲ್ವರ ಬಂಧನ: ಪರಮೇಶ್ವರ್
ಸದ್ಯ ಮೆರವಣಿಗೆಯಲ್ಲಿ ಭಾಗಿಯಾಗಿದ್ದ ಕಾಂಗ್ರೆಸ್ ಯುವ ಮುಖಂಡ ಮೊಹಮ್ಮದ್ ನಲಪಾಡ್ ವಿರುದ್ಧ ಹೈಗ್ರೌಂಡ್ಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ. ರಾಹುಲ್ ಗಾಂಧಿ ಹಾಗೂ 25 ಮಂದಿಯ ವಿರುದ್ಧ ಎಫ್ಐಆರ್ ದಾಖಲಾಗಿ ತನಿಖೆ ನಡೆಯುತ್ತಿದೆ.
ಕಾಂಗ್ರೆಸ್ ಭವನದ ಬಳಿ ಅನುಮತಿ ಪಡೆಯದೇ ಗುಂಪುಗೂಡಿ ಪ್ರತಿಭಟನೆ ಮಾಡಿ ಸಾರ್ವಜನಿಕ ಸಂಚಾರಕ್ಕೆ ಅಡ್ಡಿಪಡಿಸಿ, ಅಕ್ರಮ ಜಮಾವಣೆ, ಮೈಕ್ ಮೂಲಕ ಅನ್ಸೌಮೆಂಟ್, ಸಾರ್ವಜನಿಕರಿಗೆ ತೊಂದರೆ ನೀಡಿದ ಆರೋಪದಡಿ ದೂರು ಹೈಗ್ರೌಂಡ್ ಠಾಣೆಯ ಇನ್ಸ್ಪೆಕ್ಟರ್ ಭರತ್ ಸ್ವಯಂ ಪ್ರೇರಿತ ದೂರು ದಾಖಲಿಸಿ, ಎಫ್ಐಆರ್ ಮಾಡಲಾಗಿದೆ. ಇದನ್ನೂ ಓದಿ: 900ಕ್ಕೂ ಹೆಚ್ಚು ಪೊಲೀಸ್ ಸಬ್ ಇನ್ಸ್ಪೆಕ್ಟರ್ ಹುದ್ದೆಗೆ ಶೀಘ್ರವೇ ನೇಮಕಾತಿ ಪ್ರಕ್ರಿಯೆ: ಪರಮೇಶ್ವರ್