ಕೋಲ್ಕತ್ತಾ: ತೃಣಮೂಲ ಕಾಂಗ್ರೆಸ್ ಪಕ್ಷದಲ್ಲಿ (TMC) ಒಂದು ಕಡೆ ರಾಜೀನಾಮೆ ಪರ್ವ ಮುಂದುವರಿದಿದೆ. ಘಟಾನುಘಟಿ ನಾಯಕರು ಪಕ್ಷಕ್ಕೆ ರಾಜೀನಾಮೆ ನೀಡುತ್ತಿದ್ದಾರೆ. ಈ ಮಧ್ಯೆ ಮಾಜಿ ಸಿಎಂ ಮಮತಾ ಬ್ಯಾನರ್ಜಿಗೆ (Mamata Banerjee) ಮತ್ತೊಂದು ಶಾಕ್ ಎದುರಾಗಿದೆ.
ಕಳೆದ ಮಾರ್ಚ್ ತಿಂಗಳಲ್ಲಿ ರಾಜಕೀಯ ಭಾಷಣದ ವೇಳೆ ಕೋಮುದ್ವೇಷ ಹರಡುವ ಹೇಳಿಕೆ ನೀಡಿದ್ದರ ಆರೋಪದ ಮೇಲೆ ಮಮತಾ ಬ್ಯಾನರ್ಜಿ ವಿರುದ್ಧ ಪ್ರಕರಣ ದಾಖಲಾಗಿದೆ. ಇದನ್ನೂ ಓದಿ: ಪಶ್ಚಿಮ ಬಂಗಾಳದ ಚುನಾವಣೆಯಲ್ಲಿ ಬಳಸಲಾಗಿದ್ದ 4,000 ಇವಿಎಂ ಭಸ್ಮ – ಅಗ್ನಿ ಅವಘಡದ ಸುತ್ತ ಅನುಮಾನದ ಹುತ್ತ

ರಾಜಕೀಯ ಭಾಷಣದ ವೇಳೆ ದೀದಿ, ʻಒಂದು ನಿರ್ದಿಷ್ಟ ಸಮುದಾಯ ಒಟ್ಟಿಗೆ ಬಂದರೆ ಅದು ಇತರರ ಮೇಲೆ ಅಪಾಯಕಾರಿ ಪರಿಣಾಮ ಬೀರಬಹುದುʼ ಎಂದು ಮಮತಾ ಹೇಳಿದ್ದರು. ಅವರ ಸಾರ್ವಜನಿಕ ಭಾಷಣಗಳನ್ನ ಉಲ್ಲೇಖಿಸಿ, ಕೋಲ್ಕತ್ತಾ ನಿವಾಸಿಯೊಬ್ಬರು ಹರೇ ಸ್ಟ್ರೀಟ್ ಪೊಲೀಸ್ ಠಾಣೆಗೆ ದೂರು ನೀಡಿದ್ದರು. ದೂರಿನ ಅನ್ವಯ ಕೋಲ್ಕತ್ತಾ ಪೊಲೀಸರು ಎಫ್‌ಐಆರ್ ದಾಖಲಿಸಿದ್ದಾರೆ.
ದೂರಿನಲ್ಲಿ ಏನಿದೆ?
ಮಮತಾ ಬ್ಯಾನರ್ಜಿ ಅವರ ಭಾಷಣವು ಕೋಮು ಸಾಮರಸ್ಯವನ್ನು ಕೆಡಿಸುವ ಉದ್ದೇಶ ಹೊಂದಿದೆ. ಅಲ್ಲದೇ ಸಾರ್ವಜನಿಕ ಅಶಾಂತಿಯನ್ನ ಉತ್ತೇಜಿಸುತ್ತದೆ. ಆದ್ದರಿಂದ ಅವರ ವಿರುದ್ಧ ಕ್ರಮ ಕೂಗೊಳ್ಳಬೇಕು ಎಂದು ದೂರಿನಲ್ಲಿ ಒತ್ತಾಯಿಸಿದ್ದಾರೆ. ಇದನ್ನೂ ಓದಿ: ಚುನಾವಣಾ ಪ್ರಕ್ರಿಯೆ ನಡೆಯುತ್ತಿರುವಾಗ ಮಧ್ಯಪ್ರವೇಶಿಸಲು ಸಾಧ್ಯವಿಲ್ಲ- ಕೈ ಅಭ್ಯರ್ಥಿ ಮೀನಾಕ್ಷಿ ನಟರಾಜನ್ ಅರ್ಜಿ ವಜಾ
