ಮೈಸೂರು: ಮೈಸೂರು ಸಂಸದ ಪ್ರತಾಪ್ ಸಿಂಹ (Pratap Simha) ವಿರುದ್ಧ ಎಫ್‍ಐಆರ್ ದಾಖಲಾಗಿದೆ.
ಮುಖ್ಯಮಂತ್ರಿ ಸಿದ್ದರಾಮಯ್ಯ (Siddaramaiah) ಬಗ್ಗೆ ಅವಹೇಳನಕಾರಿ ಹೇಳಿಕೆ ನೀಡಿರುವ ಆರೋಪದ ಹಿನ್ನೆಲೆಯಲ್ಲಿ ಮೈಸೂರಿನ ದೇವರಾಜ ಪೊಲೀಸ್ ಠಾಣೆಯಲ್ಲಿ ಎಫ್‍ಐಆರ್ ದಾಖಲಾಗಿದೆ. ಮೈಸೂರು ಕಾಂಗ್ರೆಸ್ ಜಿಲ್ಲಾಧ್ಯಕ್ಷ ಡಾ.ಬಿ.ಜೆ. ವಿಜಯಕುಮಾರ್ ಅವರು ಪ್ರತಾಪ್ ಸಿಂಹ ವಿರುದ್ಧ ದೂರು ನೀಡಿದ್ದರು. ಸದ್ಯ ಈ ದೂರಿನನ್ವಯ ಪೊಲೀಸರು ಸಂಸದರ ವಿರುದ್ಧ ಎಫ್‍ಐಆರ್ (FIR) ದಾಖಲಿಸಿಕೊಂಡಿದ್ದಾರೆ.
Advertisement
Advertisement
ಸಿಂಹ ಹೇಳಿದ್ದೇನು..?: ಮಂಗಳವಾರ ಮೈಸೂರಿನಲ್ಲಿ ಮಾತನಾಡಿದ್ದ ಸಂಸದರು, ಮುಖ್ಯಮಂತ್ರಿಗಳ ವಿರುದ್ಧ ವಾಗ್ದಾಳಿಗಳನ್ನು ನಡೆಸಿದ್ದರು. ಸಿದ್ದರಾಮಯ್ಯ ಅವರೇ ನಿಮಗೆ ನಿಜವಾಗಲೂ ತಾಖತ್, ಧಮ್ ಇದ್ದರೆ ಅಭಿವೃದ್ಧಿ ಇಟ್ಟುಕೊಂಡು ರಾಜಕಾರಣ ಮಾಡಿ. ಆದರೆ ಈ ರೀತಿಯಾಗಿ ದ್ವೇಷದ ರಾಜಕಾರಣ ಮಾಡಬೇಡಿ ಎಂದು ಗರಂ ಆಗಿದ್ದರು.
Advertisement
Advertisement
ಸಿದ್ದರಾಮಯ್ಯ ಅವರು ಅಭದ್ರತೆಯಿಂದ ನನ್ನ ಮೇಲೆ ವೈಯಕ್ತಿಕ ದಾಳಿ ಮಾಡುತ್ತಿದ್ದಾರೆ. ರಾಜ್ಯದಲ್ಲಿ 28 ಜನ ಸಂಸದರು ಇದ್ದಾರೆ. ಆದರೆ ಪ್ರತಾಪ್ ಸಿಂಹನ ಮಾತ್ರ ಟಾರ್ಗೆಟ್ ಮಾಡುತ್ತಾರೆ ಏಕೆ?. ನಾನು ಸೋಮಾರಿ ಸಿದ್ದನ ರೀತಿ ಸುಮ್ಮನೆ ಕುಳಿತುಕೊಂಡು ಜಾತಿ ರಾಜಕಾರಣ ಮಾಡಿಲ್ಲ. ಅಭಿವೃದ್ಧಿ ರಾಜಕಾರಣ ಮಾಡುತ್ತಿದ್ದೇನೆ. ಹೀಗಾಗಿ ನಾನೇ ಟಾರ್ಗೆಟ್ ಎಂದು ಕಿಡಿಕಾರಿದ್ದರು.