ಕೋಲಾರ: ಮಹಿಳೆಯನ್ನು ನಿಂದಿಸಿ ಹಲ್ಲೆ ಮಾಡಿದ ಆರೋಪದಡಿ ಕೋಲಾರ (Kolar) ಜಿಲ್ಲೆಯ ಮುಳಬಾಗಿಲು ಕ್ಷೇತ್ರದ ಕಾಂಗ್ರೆಸ್ (Congress) ಟಿಕೆಟ್ ಆಕಾಂಕ್ಷಿ ವಿರುದ್ಧ ಪೊಲೀಸರು ಎಫ್‌ಐಆರ್ (FIR) ದಾಖಲಿಸಿಕೊಂಡಿದ್ದಾರೆ.
ಮುಳಬಾಗಿಲು (Mulabagilu) ತಾಲೂಕಿನ ಯಲವಳ್ಳಿ ಗ್ರಾಮದ ಸರ್ವೆ ನಂ.65ರಲ್ಲಿ 2 ಎಕರೆ 10 ಗುಂಟೆ ಜಮೀನು ಲಪಟಾಯಿಸಲು ಮುಂದಾಗಿದ್ದ ಕೊತ್ತೂರು ಅಂಜು ಬಾಸ್ ಅಲಿಯಾಸ್ ಆಂಜನೇಯಲು ವಿರುದ್ಧ ಮುಳಬಾಗಿಲು ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಿಸಲಾಗಿದೆ. ಇದನ್ನೂ ಓದಿ: ಏ. 9ಕ್ಕೆ ಮೋದಿ ಬಂಡೀಪುರ ಭೇಟಿ – ಪ್ರವಾಸಿಗರಿಗೆ ಇಂದಿನಿಂದ 4 ದಿನ ಸಫಾರಿ, ರೆಸಾರ್ಟ್ ವಾಸ್ತವ್ಯ ಬಂದ್
Advertisement
Advertisement
ಅಂಜು ಬಾಸ್ ಚಂಗಮ್ಮ ಎಂಬ ಮಹಿಳೆಯ ಬಳಿ ಒಂದು ಎಕರೆ ಕ್ರಯ ಮಾಡಿಸಿಕೊಂಡು 2 ಎಕರೆ ಜಮೀನಿಗೆ ತಂತಿ ಬೇಲಿ ಹಾಕಿಕೊಂಡಿದ್ದರು. ಇದನ್ನು ಪ್ರಶ್ನೆ ಮಾಡಿದ ಮಹಿಳೆಯನ್ನು ಅವಾಚ್ಯ ಶಬ್ದಗಳಿಂದ ನಿಂದಿಸಿ ಬೆಂಬಲಿಗರಿಂದ ಧಮ್ಕಿ ಹಾಕಿಸಿದ್ದರು. ಜಮೀನು ವ್ಯಾಜ್ಯ (Land Litigation) ಹಿನ್ನೆಲೆಯಲ್ಲಿ ಮಹಿಳೆ ಮುಳಬಾಗಿಲು ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದಾರೆ. ಇದನ್ನೂ ಓದಿ: ಕಾಂಗ್ರೆಸ್ ಅಭ್ಯರ್ಥಿಗಳ 2ನೇ ಪಟ್ಟಿ ಇಂದು ರಿಲೀಸ್?
Advertisement
Advertisement
ಮಹಿಳೆ ನೀಡಿರುವ ದೂರಿನ ಅನ್ವಯ ಅಂಜು ಬಾಸ್, ಮುರಳಿ, ಸುರೇಶ್ ಸೇರಿದಂತೆ 4 ಜನರ ವಿರುದ್ಧ ಐಪಿಸಿ (IPC) ಸೆಕ್ಷನ್ 504, 143, 149, 323, 354ರ ಅಡಿಯಲ್ಲಿ ಪೊಲೀಸರು ಪ್ರಕರಣವನ್ನು ದಾಖಲಿಸಿಕೊಂಡಿದ್ದಾರೆ. ಇದನ್ನೂ ಓದಿ: ಕರ್ನಾಟಕದ 865 ಹಳ್ಳಿಗಳಿಗೆ ಆರೋಗ್ಯ ವಿಮೆ – ಮಹಾರಾಷ್ಟ್ರದ ಸರ್ಕಾರದಿಂದ ಆದೇಶ