ಬೆಳಗಾವಿ: ಕೇಂದ್ರ ಸಚಿವ ನಿತಿನ್ ಗಡ್ಕರಿ (Nitin Gadkari) ಕೊಲೆ ಬೆದರಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಎನ್‌ಐಎ (NIA) ಅಧಿಕಾರಿಗಳು ಆರೋಪಿ ವಿರುದ್ಧ ಎಫ್‌ಐಆರ್ (FIR) ದಾಖಲಿಸಿದ್ದಾರೆ.
ಜಯೇಶ್ ಪೂಜಾರಿ ಎಂಬ ಆರೋಪಿ ಕೊಲೆ ಪ್ರಕರಣವೊಂದರಲ್ಲಿ ಬೆಳಗಾವಿಯ (Belagavi) ಹಿಂಡಲಗಾ (Hindalga) ಜೈಲು ಸೇರಿದ್ದ. ಈತ ಮಾ.21ರಂದು ಮಹಾರಾಷ್ಟ್ರದ (Maharashtra) ನಾಗ್ಪುರದಲ್ಲಿರುವ ಸಚಿವರ ಕಚೇರಿಗೆ ಕರೆ ಮಾಡಿ ನಿತಿನ್ ಗಡ್ಕರಿಯವರಿಗೆ ಜೀವ ಬೆದರಿಕೆ ಒಡ್ಡಿದ್ದಾನೆ. ಅಲ್ಲದೇ ಈ ಹಿಂದೆ ಜ.14ರಂದು ಸಚಿವರ ಕಚೇರಿಗೆ ಕರೆ ಮಾಡಿ ಜೀವ ಬೆದರಿಕೆ ಒಡ್ಡುವುದರ ಜೊತೆಗೆ 10 ಕೋಟಿ ರೂ. ಹಣಕ್ಕೆ ಬೇಡಿಕೆ ಇಟ್ಟಿದ್ದ. ಇದನ್ನು ಗಂಭೀರವಾಗಿ ಪರಿಗಣಿಸಿದ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ಮಾಡಿದಾಗ ಬೆಳಗಾವಿ ಜೈಲಿನ ಮಾಹಿತಿ ಬಹಿರಂಗ ಆಗಿತ್ತು. ಇದನ್ನೂ ಓದಿ: ತಿಹಾರ್ ಜೈಲಿನ ಶೌಚಾಲಯದಲ್ಲಿ ಕುಸಿದು ಬಿದ್ದ ಸತ್ಯೇಂದ್ರ ಜೈನ್ – 3 ದಿನದ ಬಳಿಕ ಮತ್ತೆ ಆಸ್ಪತ್ರೆ ದಾಖಲು
ಆರೋಪಿ ತಾನು ದಾವೂದ್ ಇಬ್ರಾಹಿಂ ಗ್ಯಾಂಗ್‌ನ ಸದಸ್ಯ ಎಂದು ನಿತಿನ್ ಗಡ್ಕರಿಯವರಿಗೆ ಕೊಲೆ ಬೆದರಿಕೆ ಹಾಕಿದ್ದ. ಈ ಹಿನ್ನೆಲೆಯಲ್ಲಿ ಎನ್‌ಐಎ ಅಧಿಕಾರಿಗಳು ಈತನ ವಿರುದ್ಧ ಎಫ್‌ಐಆರ್ ದಾಖಲಿಸಿ ತನಿಖೆ ಪ್ರಾರಂಭಿಸಿದ್ದಾರೆ. ಅಲ್ಲದೇ ಬೆಂಗಳೂರಿನ ಎನ್‌ಐಎ ವಿಶೇಷ ನ್ಯಾಯಾಲಯಕ್ಕೆ ಎಫ್‌ಐಆರ್ ಮಾಹಿತಿ ರವಾನಿಸಿದ್ದಾರೆ. ಇದನ್ನೂ ಓದಿ: ಮಂಗಳೂರಿನಲ್ಲಿ ಟೇಕಾಫ್‍ಗೆ ಸಿದ್ಧವಾಗಿದ್ದ ವಿಮಾನಕ್ಕೆ ಹಕ್ಕಿ ಡಿಕ್ಕಿ – ಸಮಯಪ್ರಜ್ಞೆ ಮೆರೆದ ಪೈಲೆಟ್