ಬೆಂಗಳೂರು: ನಟ ಯಶ್ (Actor Yash) ಬರ್ತಡೇಗೆ ರಸ್ತೆಯಲ್ಲಿ ಬ್ಯಾನರ್ ಹಾಕಿದ್ದಕ್ಕೆ ವೇಣು ಕ್ರಿಯೇಶನ್ ವಿರುದ್ಧ ಎಫ್‌ಐಆರ್ (FIR) ದಾಖಲಾಗಿದೆ.
ಜ.8ರಂದು ನಟ ಯಶ್ ಹುಟ್ಟುಹಬ್ಬದ (Yash Birthday) ಹಿನ್ನೆಲೆ ಗಾಲ್ಫ್ ಕ್ಲಬ್ ಮುಂದೆ ಅವರ ಮನೆಯ ಎದುರು ಬ್ಯಾನರ್ ಹಾಕಲಾಗಿತ್ತು. ಹುಟ್ಟುಹಬ್ಬ ಶುಭಕೋರಿ ಹಾಕಲಾಗಿದ್ದ ಸಾಕಷ್ಟು ಫ್ಲೆಕ್ಸ್‌ಗಳನ್ನು ಹಾಕಿಸಲಾಗಿತ್ತು. ಈ ಹಿನ್ನೆಲೆ ಜಿಬಿಎ ಅಧಿಕಾರಿಗಳು ದೂರು ದಾಖಲಿಸಿದ್ದಾರೆ. ಇದನ್ನೂ ಓದಿ: ಟೆಕ್ಕಿ ಕೊಲೆ ಕೇಸ್ – ಆರೋಪಿಗೆ ಶರ್ಮಿಳಾ ಮೇಲೆ ಲವ್ ಶುರುವಾಗಿದ್ದು ಹೇಗೆ?
ದೂರಿನಲ್ಲಿ ವೇಣು ಕ್ರಿಯೇಶನ್ ಅವರನ್ನು ಆರೋಪಿತರನ್ನಾಗಿ ಉಲ್ಲೇಖಿಸಿದ್ದು, ದೂರಿನನ್ವಯ ಹೈಗ್ರೌಂಡ್ಸ್ ಪೊಲೀಸ್ ಠಾಣೆಯಲ್ಲಿ (Highgrounds Police Station) ಎಫ್‌ಐಆರ್ ದಾಖಲಾಗಿದೆ.

