ಬೆಂಗಳೂರು: ಪೊಲೀಸ್ ಠಾಣೆ ಮುಂದೆ ಪ್ರತಿಭಟನೆ ನಡೆಸಿದ ಹಿನ್ನೆಲೆಯಲ್ಲಿ ಬಿಜೆಪಿ ಮಾಜಿ ಸಂಸದ ಪ್ರತಾಪ್ ಸಿಂಹ (Pratap Simha), ಪುನೀತ್ ಕೆರೆಹಳ್ಳಿ ಸೇರಿದಂತೆ ಹಲವರ ವಿರುದ್ಧ ಎಫ್‌ಐಆರ್ ದಾಖಲಾಗಿದೆ.
ಬಸವೇಶ್ವರ ನಗರ ಪೊಲೀಸ್ ಠಾಣೆ ಮುಂದೆ ಪ್ರತಾಪ್ ಸಿಂಹ ಸೇರಿದಂತೆ ಹಲವು ಬಿಜೆಪಿ ಮುಖಂಡರು ಪ್ರತಿಭಟನೆ ನಡೆಸಿದ್ದರು. ಠಾಣೆ ಮುಂದೆ ಗುಂಪುಗೂಡಿ ಕರ್ತವ್ಯಕ್ಕೆ ಅಡ್ಡಿಪಡಿಸಿದ ಆರೋಪದಲ್ಲಿ ಪ್ರಕರಣ ದಾಖಲಿಸಲಾಗಿದೆ. ಪುನೀತ್ ಕೆರೆಹಳ್ಳಿ ಎ1, ಪ್ರತಾಪ್ ಸಿಂಹ ಎ2 ಆರೋಪಿಗಳು ಎಂದು ಎಫ್‌ಐಆರ್‌ನಲ್ಲಿ ಉಲ್ಲೇಖಿಸಲಾಗಿದೆ. ಇದನ್ನೂ ಓದಿ: ನಮ್ಮ ಸರ್ಕಾರದಲ್ಲಿ ನಾನೇ ನ್ಯಾಯಕ್ಕಾಗಿ ಬೇಡುವ ಪರಿಸ್ಥಿತಿ ಬಂದಿದೆ: ನೇಹಾ ಪ್ರಕರಣದಲ್ಲಿ ತಂದೆ ಅಸಮಾಧಾನ
ಪುನೀತ್ ಕೆರೆಹಳ್ಳಿ ಮೇಲೆ ಪೊಲೀಸರು ದೌರ್ಜನ್ಯ ನಡೆಸಿದ್ದಾರೆ ಎಂದು ಆರೋಪಿಸಿ ಪ್ರತಾಪ್ ಸಿಂಹ, ಶಾಸಕ ಹರೀಶ್ ಪೂಂಜಾ ನೇತೃತ್ವದಲ್ಲಿ ಬಿಜೆಪಿ ಹಾಗೂ ಹಿಂದೂಪರ ಸಂಘಟನೆ ಕಾರ್ಯಕರ್ತರು ಬಸವೇಶ್ವರ ನಗರ ಪೊಲೀಸ್ ಠಾಣೆ ಮುಂದೆ ಇಂದು ಪ್ರತಿಭಟನೆ ನಡೆಸಿದರು.
ಮಾಂಸ ಸಾಗಾಟಕ್ಕೆ ತಡೆ ಪ್ರಕರಣದಲ್ಲಿ ಬಂಧನವಾಗಿದ್ದ ಪುನೀತ್ ಕೆರೆಹಳ್ಳಿಗೆ ಲಾಕಪ್‌ನಲ್ಲಿ ಬಟ್ಟೆ ಬಿಚ್ಚಿಸಿ ಪೊಲೀಸರು ಹಿಂಸೆ ನೀಡಿದ್ದಾರೆ. ಅವರ ವಿರುದ್ಧ ಕ್ರಮಕೈಗೊಳ್ಳಬೇಕು ಎಂದು ಪ್ರತಿಭಟನೆ ವೇಳೆ ಆಗ್ರಹಿಸಿದ್ದರು. ಇದನ್ನೂ ಓದಿ: ಸರ್ಕಾರಿ ಕಾಲೇಜುಗಳಲ್ಲಿ ಓದುವ ಪಿಯುಸಿ ಮಕ್ಕಳಿಗೆ ಉಚಿತ ನೀಟ್ ತರಬೇತಿ: ಮಧು ಬಂಗಾರಪ್ಪ