ಬೆಂಗಳೂರು: ವಿಶೇಷ ತನಿಖಾ ತಂಡದಲ್ಲಿರುವ ಎಡಿಜಿಪಿ ಚಂದ್ರಶೇಖರ್ಗೆ ಬೆದರಿಕೆ ಆರೋಪದ ಹಿನ್ನೆಲೆ ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ (H.D.Kumaraswamy) ಮತ್ತು ಅವರ ಪುತ್ರ ನಿಖಿಲ್ ಕುಮಾರಸ್ವಾಮಿ ವಿರುದ್ಧ ಎಫ್ಐಆರ್ ದಾಖಲಾಗಿದೆ.
ಸಂಜಯನಗರ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ. ಬೆದರಿಕೆ ಹಾಕಿದ್ದಾರೆಂದು ಸುಳ್ಳು ಆರೋಪ ಮಾಡಿರುವ ಹಿನ್ನೆಲೆ, ಹೆಚ್.ಡಿ.ಕುಮಾರಸ್ವಾಮಿ, ನಿಖಿಲ್ ಕುಮಾರಸ್ವಾಮಿ, ಅವರ ಅಪ್ತ ಸುರೇಶ್ ಬಾಬು ಮೇಲೆ ದೂರು ದಾಖಲಾಗಿತ್ತು. ಇದನ್ನೂ ಓದಿ: ಚಾಮರಾಜನಗರ| ‘ಮಿಸ್ಟರ್ ಬಿಆರ್ಟಿ’ ಎಂದೇ ಹೆಸರಾಗಿದ್ದ ವಕ್ರದಂತ ಹೊಂದಿದ್ದ ಕಾಡಾನೆ ಸಾವು
Advertisement
Advertisement
ಪತ್ರಿಕಾಗೋಷ್ಠಿ ನಡೆಸಿ ಸುಳ್ಳು ಆರೋಪ ಮಾಡಿರುವುದಾಗಿ ದೂರು ನೀಡಲಾಗಿತ್ತು. ಎಸ್ಐಟಿಯಲ್ಲಿ ಕೇಂದ್ರ ಸಚಿವ ಕುಮಾರಸ್ವಾಮಿ ವಿರುದ್ಧ ಹೆಚ್ಚಿನ ಸಾಕ್ಷ್ಯಾಧಾರ ಕಲೆ ಹಾಕಲಾಗುತ್ತಿದೆ. ಸಾಕ್ಷ್ಯಾಧಾರ ಇರುವ ಹಿನ್ನೆಲೆ ರಾಜ್ಯಾಪಾಲರ ಅನುಮತಿ ಕೋರಿ ಪತ್ರ ಬರೆಯಲಾಗಿತ್ತು.
Advertisement
ಇದೇ ವಿಚಾರವಾಗಿ ಸುಳ್ಳು ಆರೋಪ ಮಾಡಿ ಬೆದರಿಕೆ ಹಾಕಿರುವುದಾಗಿ ದೂರು ನೀಡಲಾಗಿತ್ತು. ದೂರಿನ ಹಿನ್ನೆಲೆ ಹೆಚ್ಡಿಕೆ, ನಿಖಿಲ್ ಹಾಗೂ ಆಪ್ತ ಸುರೇಶ್ ವಿರುದ್ಧ ಎಫ್ಐಆರ್ ದಾಖಲಾಗಿದೆ. ಈ ಹಿಂದೆ ಪೊಲೀಸರು ಎನ್ಸಿಆರ್ ದಾಖಲಿಸಿದ್ದರು.
Advertisement
ಈ ವಿಚಾರವಾಗಿ ಎಡಿಜಿಪಿ ಕೋರ್ಟ್ನ ಮೊರೆ ಹೋಗಿದ್ದರು. ಕೋರ್ಟ್ ಸೂಚನೆಯ ಮೇರೆಗೆ ಎಫ್ಐಆರ್ ದಾಖಲಾಗಿದೆ. ಇದನ್ನೂ ಓದಿ: ಚನ್ನಪಟ್ಟಣ ಫಲಿತಾಂಶದ ನಂತರ ಜೆಡಿಎಸ್, ಬಿಜೆಪಿ ಜೊತೆ ಮರ್ಜ್ ಆಗಬಹುದು: ಡಿಕೆಶಿ