ಬೆಂಗಳೂರು: ಮುಖ್ಯಮಂತ್ರಿ ನಿವಾಸಕ್ಕೆ ಮುತ್ತಿಗೆ ಹಾಕಲು ಯತ್ನಿಸಿದ್ದ ಕಾಂಗ್ರೆಸ್ ನಾಯಕರ ವಿರುದ್ಧ ಹೈಗ್ರೌಂಡ್ಸ್ ಪೊಲೀಸರು ಎಫ್‍ಐಆರ್ ದಾಖಲಿಸಿಕೊಂಡಿದ್ದಾರೆ.
ಮಾಜಿ ಸಚಿವ ಕೆ.ಎಸ್. ಈಶ್ವರಪ್ಪ ವಿರುದ್ಧ ಏಪ್ರಿಲ್ 14 ರಂದು ಕಾಂಗ್ರೆಸ್ ನಾಯಕರು ಪ್ರತಿಭಟನೆ ನಡೆಸಿದ್ದರು. ಈ ವೇಳೆ ಮುಖ್ಯಮಂತ್ರಿ ನಿವಾಸಕ್ಕೆ ಮುತ್ತಿಗೆ ಹಾಕಲು ಪ್ರಯತ್ನಿಸಿದ್ದರು. ಈ ಹಿನ್ನೆಲೆಯಲ್ಲಿ ವಿಪಕ್ಷ ನಾಯಕ ಸಿದ್ದರಾಮಯ್ಯ, ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್, ರಣದೀಪ್ ಸಿಂಗ್ ಸುರ್ಜೇವಾಲಾ ಸೇರಿದಂತೆ ಒಟ್ಟು 36 ಮಂದಿ ವಿರುದ್ಧ ಎಫ್‍ಐಆರ್ ದಾಖಲಾಗಿದೆ.
Advertisement
Advertisement
ಅನುಮತಿ ಇಲ್ಲದೆ, ಅಕ್ರಮ ಕೂಟ ಸೇರಿ, ಸಂಚಾರಕ್ಕೆ ಅಡ್ಡಪಡಿಸಿದ್ದ ಕಾಂಗ್ರಸ್ ನಾಯಕರು ರೇಸ್ ಕೋರ್ಸ್ ರಸ್ತೆಯ ರೇಸ್ ವ್ಯೂ ಹೋಟೆಲ್ ಬಳಿ ಪ್ರತಿಭಟನೆ ನಡೆಸಿದ್ದರು. ಈ ಹಿನ್ನೆಲೆಯಲ್ಲಿ ಹೈ ಗ್ರೌಂಡ್ಸ್ ಠಾಣೆಯಲ್ಲಿ ಐಪಿಸಿ 143, 341 ಅಡಿಯಲ್ಲಿ ಎಫ್‍ಐಆರ್ ದಾಖಲಿಸಲಾಗಿದೆ. ಇದನ್ನೂ ಓದಿ: ಹಂಪಿಯಲ್ಲಿ ಕನ್ನಡದಲ್ಲಿ ಮಾತನಾಡುವ ಮೂಲಕ ಪ್ರಚಾರ ಆರಂಭಿಸಿದ ಜೆಪಿ ನಡ್ಡಾ
Advertisement
Advertisement
ಸಚಿವ ಕೆ.ಎಸ್. ಈಶ್ವರಪ್ಪ ವಿರುದ್ಧ 40 ಪರ್ಸೆಂಟೇಜ್ ಕಮಿಷನ್ ಆರೋಪ ಮಾಡಿದ್ದ ಬೆಳಗಾವಿ ಬಿಜೆಪಿ ಕಾರ್ಯಕರ್ತ ಹಾಗೂ ಗುತ್ತಿಗೆದಾರ ಸಂತೋಷ್ ಪಾಟೀಲ್ ಆತ್ಮಹತ್ಯೆ ಮಾಡಿದ್ದರು. ಆತ್ಮಹತ್ಯೆಗೆ ಈಶ್ವರಪ್ಪ ಕಾರಣ. ಹೀಗಾಗಿ ಈಶ್ವರಪ್ಪನವರನ್ನು ಬಂಧಿಸಬೇಕು ಎಂದು ಒತ್ತಾಯಿಸಿ ಪ್ರತಿಭಟನೆ ನಡೆಸಿದ್ದರು. ಇದನ್ನೂ ಓದಿ: ಹನುಮಜಯಂತಿ ವೇಳೆ ಹಿಂಸಾಚಾರ – 4 ರಾಜ್ಯಗಳ 140 ಪುಂಡರು ಅರೆಸ್ಟ್