ಮಂಗಳೂರು: ಆರ್‌ಎಸ್‌ಎಸ್ (RSS) ಮುಖಂಡ ಕಲ್ಲಡ್ಕ ಪ್ರಭಾಕರ್ ಭಟ್ (Kalladka Prabhakar Bhat) ವಿರುದ್ಧ ಮತ್ತೆ ಎಫ್‌ಐಆರ್ ದಾಖಲಾಗಿದೆ.
ಖಾಸಗಿ ಕಾಲೇಜು ಕಾರ್ಯಕ್ರಮದಲ್ಲಿ ಪ್ರಚೋದನಾಕಾರಿ ಭಾಷಣ ಆರೋಪದಡಿ ಪುತ್ತೂರಿನಲ್ಲಿ ಕೇಸ್ ದಾಖಲಾಗಿದೆ. ಸಾಮಾಜಿಕ ಸಾಮರಸ್ಯಕ್ಕೆ ಧಕ್ಕೆ ಹಾಗೂ ಹಿಂಸೆಗೆ ಪ್ರಚೋದನೆ ನೀಡಿದ ಆರೋಪದಡಿ ಪುತ್ತೂರು ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಇದನ್ನೂ ಓದಿ: ವಾಲ್ಮೀಕಿ ಹಗರಣ | ಮಾಜಿ ಸಚಿವ ಬಿ.ನಾಗೇಂದ್ರಗೆ ಮತ್ತೆ ಸಂಕಷ್ಟ – ಜಾಮೀನು ರದ್ದು ಕೋರಿ ಹೈಕೋರ್ಟ್‌ಗೆ ಸಿಬಿಐ ಅರ್ಜಿ
ಪ್ರಭಾಕರ್ ಭಟ್ ವಿರುದ್ಧ ಪುತ್ತೂರು ನಿವಾಸಿ ಕಾಂಗ್ರೆಸ್ ಮುಖಂಡ ಅಮಳ ರಾಮಚಂದ್ರ ದೂರು ನೀಡಿದ್ದರು. ಮಾನವ ಬಂಧುತ್ವ ವೇದಿಕೆ ನೇತೃತ್ವದಲ್ಲಿ ದೂರು ನೀಡಲಾಗಿತ್ತು. ಭಾಷಣ ಪ್ರಸಾರ ಮಾಡಿದ ‘ವಿಕಸನ ಟಿವಿ’ ಯೂಟ್ಯೂಬ್ ಚಾನಲ್ ಹಾಗೂ ಕಾರ್ಯಕ್ರಮ ಆಯೋಜಕರ ವಿರುದ್ಧವೂ ಕೇಸ್ ದಾಖಲಿಸಲಾಗಿದೆ.
ಜನವರಿ 12 ರಂದು ನಡೆದಿದ್ದ ಕಾರ್ಯಕ್ರಮದಲ್ಲಿ ವಿದ್ಯಾರ್ಥಿಗಳು ಹಾಗೂ ಪೋಷಕರ ಎದುರು ವಿವಾದಾತ್ಮಕ ಭಾಷಣ ಮಾಡಲಾಗಿತ್ತು ಎಂದು ಆರೋಪಿಸಲಾಗಿದೆ. ಭಾರತೀಯ ನ್ಯಾಯ ಸಂಹಿತೆ (ಬಿಎನ್‌ಎಸ್) ಅಡಿ ವಿವಿಧ ಗಂಭೀರ ಸೆಕ್ಷನ್‌ಗಳ ಮೂಲಕ ದಾಖಲಾದ ಎಫ್‌ಐಆರ್, ಬಿಎಮ್‌ಎಸ್‌ಎಸ್ 196, 299, 302, 353(2), 3(5) ಸೆಕ್ಷನ್ ಅಡಿ ಪ್ರಕರಣ ದಾಖಲಾಗಿದೆ. ಇದನ್ನೂ ಓದಿ: ಮುಡಾ ಹಗರಣ – ಇಂದು ಸಿಎಂ ಸಿದ್ದರಾಮಯ್ಯಗೆ ಬಿಗ್ ಡೇ

