ಬೆಂಗಳೂರು: ಕಾಂಗ್ರೆಸ್ ಮುಖಂಡ ಮನೆ ಮುಂದೆ ಪ್ರತಿಭಟನೆ ಮಾಡಿದ ಪ್ರತಿಭಟನಕಾರರ ಮೇಲೆ ಎಫ್‍ಐಆರ್ ದಾಖಲಿಸಲಾಗಿದೆ.
ಇದೇ ತಿಂಗಳ 14 ರಂದು ಕೆಪಿಸಿಸಿ ರಾಜ್ಯಾಧ್ಯಕ್ಷ ಡಿ.ಕೆ. ಶಿವಕುಮಾರ್ ಹಾಗೂ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಮನೆ ಮುಂದೆ ಪ್ರತಿಭಟನೆ ಮಾಡಲಾಗಿತ್ತು. ಗೋವಾ ಕಾಂಗ್ರೆಸ್ ಗೋವಾ ಚುನಾವಣಾ ಪ್ರಣಾಳಿಕೆಯಲ್ಲಿ ಮಹಾದಾಯಿ ನೀರು ಕರ್ನಾಟಕಕ್ಕೆ ಕೊಡದೇ ಇರುವ ಬಗ್ಗೆ ಪ್ರಸ್ತಾಪ ಮಾಡಲಾಗಿತ್ತು. ಇದಕ್ಕೆ ಕರ್ನಾಟಕ ಕಾಂಗ್ರೆಸ್ ನಾಯಕರಾದ ಡಿ.ಕೆ.ಶಿವಕುಮಾರ್ ಹಾಗೂ ಸಿದ್ದರಾಮಯ್ಯ ಮನೆ ಮುಂದೆ ಕರ್ನಾಟಕ ರಾಜ್ಯ ಕಾರ್ಮಿಕ ಪರಿಷತ್ ರಾಜ್ಯಾಧ್ಯಕ್ಷ ಡಾ. ರವಿಶೆಟ್ಟಿ ಬೆಂದೂರು, ನಾಗಮಂಗಲದ ಕುಮಾರ್, ಕೆ.ಎನ್. ಕುಮಾರ್ ನೇತೃತ್ವದಲ್ಲಿ ಪ್ರತಿಭಟನೆ ಮಾಡಲಾಗಿತ್ತು. ಇದನ್ನೂ ಓದಿ: ಬೊಮ್ಮಾಯಿ ಹೇಳಿದ್ದೆ ವೇದ ವಾಕ್ಯನಾ? ಬೊಮ್ಮಾಯಿಗಿಂತ ಹಿರಿಯ ನಾನು: ಸಿದ್ದರಾಮಯ್ಯ
Advertisement
Advertisement
ಪ್ರತಿಭಟನಕಾರರು ಪ್ರತಿಭಟನೆಗೆ ಅನುಮತಿ ಇಲ್ಲದೇ ಕಾಂಗ್ರೆಸ್ ನಾಯಕರ ಮನೆ ಮುಂದೆ ಏಕಾಏಕಿ ಪ್ರತಿಭಟನೆ ಮಾಡಿದ್ದರಿಂದ ಸಾರ್ವಜನಿಕರಿಗೆ ತೊಂದರೆ ಉಂಟು ಮಾಡಿರುವ ಆರೋಪದ ಮೇಲೆ ದೂರು ದಾಖಲಾಗಿದೆ. ಸದಾಶಿವ ನಗರದ ಮುಖ್ಯ ಪೇದೆ ಮಂಜುನಾಥ್ ಕೊಟ್ಟ ದೂರಿನ ಆಧಾರದ ಮೇಲೆ ಒಟ್ಟು ಆರು ಮಂದಿಯ ವಿರುದ್ಧ ಎಫ್‍ಐಆರ್ ದಾಖಲಾಗಿದೆ. ಇದನ್ನೂ ಓದಿ: ಹಿಜಬ್-ಕೇಸರಿ ವಿವಾದ ಬೆನ್ನಲ್ಲೇ ಶುರುವಾಯ್ತು ಸಿಂಧೂರ ಚಳುವಳಿ