ಮಂಗಳೂರು: ಮಾಜಿ ಶಾಸಕ ಮೊಯಿದ್ದೀನ್ ಬಾವ ಅವರ ತಮ್ಮ ಮುಮ್ತಾಜ್ ಅಲಿ (Mumtaz Ali) ಅವರ ಮೃತದೇಹ ಪತ್ತೆಯಾಗಿದ್ದು, ಆರು ಜನರ ಮೇಲೆ ಎಫ್‌ಐಆರ್ ದಾಖಲಾಗಿದೆ. ಎಫ್‌ಐಆರ್ ದಾಖಲಾದ ಬೆನ್ನಲ್ಲೆ ಮುಮ್ತಾಜ್ ಅಲಿ ಅವರು ಹನಿಟ್ರ್ಯಾಪ್‌ಗೆ (Honeytrap) ಬಲಿಯಾಗಿದ್ರಾ ಎಂಬ ಪ್ರಶ್ನೆ ಎದ್ದಿದೆ.
ಮಾಜಿ ಶಾಸಕ ಮೊಯಿದ್ದೀನ್ ಬಾವಾ ತಮ್ಮ ಮುಮ್ತಾಜ್ ಅಲಿ ಅವರು ಭಾನುವಾರ ಬೆಳಗ್ಗೆಯಿಂದ ಕಾಣೆಯಾಗಿದ್ದರು. ನಾಪತ್ತೆಯಾಗಿದ್ದ ಹಿನ್ನೆಲೆ ಮುಮ್ತಾಜ್ ಆಲಿ ಸಹೋದರ ಹೈದರ್ ದೂರು ಕಾವೂರು ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದರು. ಮಹಿಳೆಯನ್ನು ಬಳಸಿಕೊಂಡು ದುರುದ್ದೇಶದಿಂದ ಆತ್ಮಹತ್ಯೆ ಪ್ರಚೋದಿಸಿರುವುದಾಗಿ ದೂರು ನೀಡಿದ್ದಾರೆ.
Advertisement
ದೂರಿನಲ್ಲಿ ಏನಿತ್ತು?
ಸಹೋದರ ಮುಮ್ತಾಜ್ ಆಲಿ ಸಮಾಜದ ಗೌರವಾನ್ವಿತ ವ್ಯಕ್ತಿಯಾಗಿದ್ದಾರೆ. ಅವರ ಗೌರವ ಹಾಳು ಮಾಡಲು ಮಹಿಳೆಯ ಬಳಸಿಕೊಂಡು ಷಡ್ಯಂತ್ರ ಮಾಡಿದ್ದಾರೆ. ರೆಹಮತ್ ಅಕ್ರಮ ಸಂಬಂಧ ಇದೆ ಎಂದು ಸುಳ್ಳು ಪ್ರಚಾರದ ಬೆದರಿಕೆ ಹಾಕಿದ್ದಾರೆ. 2024ರ ಜುಲೈನಿಂದ ಈವರೆಗೆ 50 ಲಕ್ಷ ರೂ. ವಸೂಲಿ ಮಾಡಿದ್ದಾರೆ. 25 ಲಕ್ಷ ರೂ. ಹಣವನ್ನು ಚೆಕ್ ಮೂಲಕವೂ ಮಹಿಳೆ ಹಣ ಪಡೆದಿದ್ದಾಳೆ.ಇದನ್ನೂ ಓದಿ: ಮಕ್ಕಳ ಕಳ್ಳಿಯೆಂದು ಮಾನಸಿಕ ಅಸ್ವಸ್ಥೆಗೆ ಥಳಿತ: ಪೊಲೀಸರಿಂದ ಮಹಿಳೆಯ ರಕ್ಷಣೆ
Advertisement
Advertisement
ಸತ್ತಾರ್ ಎಂಬಾತ ಮುಮ್ತಾಜ್ ಆಲಿಯ ರಾಜಕೀಯ ವಿರೋಧಿಯಾಗಿದ್ದಾನೆ. ಜೀವ ಬೆದರಿಕೆ ಜೊತೆಗೆ ಮುಮ್ತಾಜ್ ಅಲಿ ಕುಟುಂಬಕ್ಕೂ ಬೆದರಿಸಿದ್ದರು. ಹೀಗಾಗಿಯೇ ನಾನು ಅಲ್ಲಾಹುನ ಕಡೆಗೆ ಹೋಗುತ್ತಿದ್ದೇನೆ ಎಂದು ಆಡಿಯೋ ಮೆಸೇಜ್ ಹಾಕಿ ಸಹೋದರ ಮುಮ್ತಾಜ್ ಆಲಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ದೂರಿನಲ್ಲಿ ಆರೋಪಿಸಿದ್ದರು.
Advertisement
ದೂರು ನೀಡಿದ ಬೆನ್ನಲ್ಲೆ ಮಹಿಳೆ ರೆಹಮತ್ ಜೊತೆ ಅಬ್ದುಲ್ ಸತ್ತಾರ್, ಶಫಿ, ಮುಸ್ತಾಫ, ಶೋಯೆಬ್ ಹಾಗೂ ಸಿರಾಜ್ ವಿರುದ್ಧ ಮಂಗಳೂರಿನ ಕಾವೂರು ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದೆ.
ಎಫ್‌ಐಆರ್ ದಾಖಲಾಗಿದ್ದ ಆರು ಜನರ ಪೈಕಿ ಮೂವರನ್ನು ಪೊಲೀಸರು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ. ಮಹಿಳೆ ನಾಪತ್ತೆಯಾಗಿದ್ದು, ಕೇರಳದಲ್ಲಿ ಆಕೆಯ ಲೊಕೇಷನ್ ಪತ್ತೆಯಾಗಿದೆ. ಅಲ್ಲಿಗೆ ತೆರಳಿ ಮೊಬೈಲ್ ಸ್ವಿಚ್ ಆಫ್ ಮಾಡಿದ್ದಾಳೆ. ಮುಮ್ತಾಜ್ ಅಲಿ ನಾಪತ್ತೆ ಹಿಂದೆ ಆಕೆಯ ಕೈವಾಡ ಇದೆ ಎನ್ನುವುದು ತಿಳಿದುಬಂದಿದ್ದು, ತನಿಖೆ ನಡೆಯುತ್ತಿದೆ.
ಏನಿದು ಪ್ರಕರಣ?
ಮಾಜಿ ಶಾಸಕ ಮೊಯಿದ್ದೀನ್ ಬಾವಾ ತಮ್ಮ ಮುಮ್ತಾಜ್ ಅಲಿ ಅವರು ಭಾನುವಾರ ಬೆಳಗ್ಗೆಯಿಂದ ಕಾಣೆಯಾಗಿದ್ದರು. ಮಂಗಳೂರಿನ ಕೂಳೂರು ಫಲ್ಗುಣಿ ನದಿ ಸೇತುವೆ ಮೇಲೆ ಅವರ ಕಾರು ನಿನ್ನೆ ಪತ್ತೆಯಾಗಿತ್ತು. ಇದರಿಂದ ಸೇತುವೆಯಿಂದ ನದಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿರುವ ಶಂಕೆ ವ್ಯಕ್ತವಾಗಿತ್ತು. ಶಂಕೆಯಿದ ಭಾನುವಾರ ಬೆಳಗ್ಗೆಯಿಂದ ಕೋಸ್ಟ್ ಗಾರ್ಡ್, ಎನ್‌ಡಿಆರ್‌ಎಫ್, ಎಸ್‌ಡಿಆರ್‌ಎಫ್, ಅಗ್ನಿಶಾಮಕ ದಳ, ಸ್ಥಳೀಯ ಮುಳುಗು ತಜ್ಞರಿಂದ ಶೋಧ ಕಾರ್ಯಚರಣೆ ನಡೆದಿತ್ತು.
ಸೋಮವಾರ ಬೆಳಗ್ಗೆ ಸತತ 30 ಗಂಟೆಗಳ ಕಾರ್ಯಾಚರಣೆ ಬಳಿಕ ಸಿಕ್ಕ ಮುಮ್ತಾಜ್ ಅಲಿ ಮೃತದೇಹ ಪತ್ತೆಯಾಗಿದೆ. ವಿನೋದ್ ರಾಜ್, ಸಿರಾಜ್ ಕೂಳೂರು, ಲಾರೆನ್ಸ್ ಹಾಗೂ ಡೇವಿಡ್ ತಂಡ ನದಿಯ ಮಧ್ಯೆ ಶೋಧ ಕಾರ್ಯ ನಡೆಸುತ್ತಿರುವಾಗ ಶವ ಪತ್ತೆಯಾಗಿದೆ. ಕೂಳೂರು ಸೇತುವೆಯಿಂದ 200 ಮೀಟರ್ ದೂರದಲ್ಲಿ ಮೃತದೇಹ ಪತ್ತೆಯಾಗಿದೆ. ಮೃತದೇಹ ಕಂಡ ಮಾಜಿ ಶಾಸಕ ಮೊಯಿದ್ದೀನ್ ಬಾವ ಕಣ್ಣೀರಿಟ್ಟಿದ್ದಾರೆ. ಇದನ್ನೂ ಓದಿ: ವರದಕ್ಷಿಣೆ ತರದ್ದಕ್ಕೆ ಗೃಹಿಣಿಯ ಕತ್ತು ಹಿಸುಕಿ ಕೊಲೆ