ಬೆಂಗಳೂರು: ಇಬ್ಬರು ಖಳನಟರು ನೀರಿನಲ್ಲಿ ಮುಳುಗಿ ಸಾವನ್ನಪ್ಪಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಚಿತ್ರನಟ ದುನಿಯಾ ವಿಜಯ್ ಮೇಲೆ ಎಫ್‍ಐಆರ್ ದಾಖಲಾಗಿದೆ.
ಚನ್ನಮ್ಮನಕೆರೆ ಅಚ್ಚುಕಟ್ಟು ಪೊಲೀಸ್ ಠಾಣೆಯಲ್ಲಿ ಪೊಲೀಸರಿಗೆ ಕರ್ತವ್ಯಕ್ಕೆ ಅಡ್ಡಿಪಡಿಸಿದ ಸಂಬಂಧ ನಟ ದುನಿಯಾ ವಿಜಯ್ ಮೇಲೆ ಪ್ರಕರಣ ದಾಖಲಾಗಿದೆ. ಮಾಸ್ತಿಗುಡಿ ಚಿತ್ರಣದ ಸಾವು ಪ್ರಕರಣ ಸಂಬಂಧ ನಿರ್ದೇಶಕನ ಮೇಲೆ ರಾಮನಗರ ಜೆಎಂಎಫ್ ಸಿ ಕೋರ್ಟ್ ನಿಂದ ವಾರೆಂಟ್ ಜಾರಿಯಾಗಿತ್ತು. ಇದನ್ನೂ ಓದಿ: ಮಾಸ್ತಿಗುಡಿ ದುರಂತ- ಬಂಧಿಸಲು ಹೋದ ಪೊಲೀಸರ ಮುಂದೆ ಪರಾರಿಯಾದ ನಿರ್ಮಾಪಕ
Advertisement
Advertisement
ಕೋರ್ಟ್ ತೀರ್ಪಿನಂತೆ ತಾವರೆಕೆರೆ ಪೊಲೀಸರು ವಾರೆಂಟ್ ಹಿಡಿದು ನಿರ್ದೇಶಕ ಸುಂದರ್ ಪಿ ಗೌಡ ಅವರನ್ನು ಬಂಧಿಸಲು ಬುಧವಾರ ತಡರಾತ್ರಿ ಹೋಗಿದ್ದರು. ಸುಂದರ್ ಮನೆ ಚನ್ನಮ್ಮನಕೆರೆ ಅಚ್ಚುಕಟ್ಟು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಇತ್ತು. ಈ ವೇಳೆ ದುನಿಯಾ ವಿಜಯ್ ಎಂಟ್ರಿ ಕೊಟ್ಟು ಸುಂದರ್ ಬಂಧಿಸದಂತೆ ಪೊಲೀಸರನ್ನ ತಡೆದಿದ್ದರು. ಇದೇ ಸಂದರ್ಭದಲ್ಲಿ ಸುಂದರ್ ಗೌಡ ಹಿಂಬಾಗಿಲಿನಿಂದ ಪರಾರಿಯಾಗಿದ್ದರು.
Advertisement
ಸುಂದರ್ ಪಿ ಗೌಡ ತಾಯಿ ಆರೋಗ್ಯದ ಸಮಸ್ಯೆ ಹಿನ್ನೆಲೆ ತಾವೇ ನಾಳೆ ಕರೆತರುವುದಾಗಿ ದುನಿಯಾ ವಿಜಯ್ ಮಧ್ಯಸ್ತಿಕೆ ವಹಿಸಿದ್ದರು. ಅಷ್ಟೇ ಅಲ್ಲದೇ ದುನಿಯ ವಿಜಯ್ ತಾವೇ ಸ್ವತಃ ಸುಂದರ್ ನನ್ನ ಪೊಲೀಸ್ ಠಾಣೆಗೆ ಕರೆತರುವುದಾಗಿ ಪೊಲೀಸರ ಮನವೊಲಿಸುವ ಪ್ರಯತ್ನ ಮಾಡಿದ್ದರು.
Advertisement
ತಾವರೆಕೆರೆ ಹೆಡ್ ಕಾನ್ಸ್ ಟೇಬಲ್ ಗೋವಿಂದರಾಜು ಈ ಬಗ್ಗೆ ದೂರು ನೀಡಿದ್ದರು. ಸದ್ಯ ಈ ಹಿನ್ನೆಲೆಯಲ್ಲಿ ಸಿಕೆ ಅಚ್ಚುಕಟ್ಟು ಠಾಣೆಯಲ್ಲಿ ಐಪಿಸಿ 353 ಅನ್ವಯ ಪ್ರಕರಣ ದಾಖಲಾಗಿದೆ.