ಬೆಂಗಳೂರು: ನಟ ದುನಿಯಾ ವಿಜಯ್ ಅವರ ಎರಡನೇ ಪತ್ನಿ ಕೀರ್ತಿಗೌಡ ಮೇಲೆ ಹಲ್ಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ನಾಗರತ್ನ ವಿರುದ್ಧ ಎಫ್‍ಐಆರ್ ದಾಖಲಾಗಿದೆ.
ಕೀರ್ತಿಗೌಡ ಅವರು ನೀಡಿದ ದೂರಿನ ಆಧಾರದ ಮೇರೆಗೆ ಗಿರಿನಗರ ಪೊಲೀಸ್ ಠಾಣೆಯಲ್ಲಿ ಐಪಿಸಿ ಸೆಕ್ಷನ್ 326ರ ಅಡಿಯಲ್ಲಿ ಎಫ್‍ಐಆರ್ ದಾಖಲಾಗಿದೆ. ಹಲ್ಲೆ ಮತ್ತು ಅಂಗಾಂಗ ಊನಗೊಳಿಸಿದ ಆರೋಪದಡಿ ಎಫ್‍ಐಆರ್ ದಾಖಲು ಮಾಡಲಾಗಿದೆ.
Advertisement
Advertisement
ಒಮ್ಮೆ ಎಫ್‍ಐಆರ್ ದಾಖಲಾದ ನಂತರ ಹೆಚ್ಚುವರಿ ಸೆಕ್ಷನ್ ಸೇರಿಸಲು ಕೋರ್ಟ್ ಒಪ್ಪಿಗೆಯನ್ನು ಪಡೆಯಬೇಕು. ಈಗಾಗಲೇ ನಾಗರತ್ನ ವಿರುದ್ಧ ಐಪಿಸಿ ಸೆಕ್ಷನ್ 306 ಮತ್ತು 309 ಅಡಿ ಪ್ರಕರಣ ದಾಖಲಾಗಿತ್ತು. ಸಿಸಿಟಿವಿ ದೃಶ್ಯಗಳ ಆಧಾರದ ಮೇಲೆ 326 ಸೆಕ್ಷನ್ ಹಾಕಲು ಪೊಲೀಸರು ನಿರ್ಧಾರ ಮಾಡಿದ್ದು, ಈ ಬಗ್ಗೆ ಕೋರ್ಟ್ ಗೆ ಪೊಲೀಸರು ಮನವಿ ಮಾಡಲಿದ್ದಾರೆ. ಈ ಪ್ರಕರಣಕ್ಕೆ ಐಪಿಸಿ ಸೆಕ್ಷನ್ 236 ಸೇರ್ಪಡೆ ಮಾಡಲು ಪೊಲೀಸರು ತೀರ್ಮಾನ ಮಾಡಿದ್ದಾರೆ.
Advertisement
Advertisement
ಎಫ್‍ಐಆರ್ ದಾಖಲಾದ ಹಿನ್ನೆಲೆಯಲ್ಲಿ ನಾಗರತ್ನ ಮತ್ತು ಮೋನಿಕಾಗೆ ಜೈಲಿಗೆ ಹೋಗಲೇಬೇಕಾದ ಸನ್ನಿವೇಶ್ ಸೃಷ್ಟಿಯಾಗಿದ್ದು, ಯಾವುದೇ ಕ್ಷಣದಲ್ಲಾದರೂ ಮೋನಿಕಾ ಮತ್ತು ನಾಗರತ್ನ ಬಂಧನದ ಸಾಧ್ಯತೆ ಇದೆ. ಇದು ನಾನ್ ಬೇಲಬೆಲ್ ಕೇಸ್ ಆಗಿದ್ದು, ಬಂಧನದ ಬಳಿಕ ಜಾಮೀನಿಗೆ ಅರ್ಜಿ ಸಲ್ಲಿಸಬಹುದು.
ನಾಗರತ್ನರ ಬಂಧನ ಖಚಿತ. ಬಾಗಿಲು ಹಾಕಿಕೊಂಡು ನಾಗರತ್ನ ಮನೆಯಲ್ಲಿ ಕುಳಿತಿದ್ದಾರೆ. ಪೊಲೀಸರು ಮನೆಯ ಮುಂಭಾಗದಲ್ಲಿಯೇ ಕಾಯುತ್ತಿದ್ದರು. ಮನೆಯ ಬಾಗಿಲು ತೆಗೆಯುತ್ತಿದ್ದಂತೆ ಅವರನ್ನು ಬಂಧಿಸಲಾಗುವುದು ಎಂದು ಡಿಸಿಪಿ ಅಣ್ಣಾಮಲೈ ಪಬ್ಲಿಕ್ ಟಿವಿಗೆ ಸ್ಪಷ್ಟನೆ ನೀಡಿದ್ದಾರೆ.
ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv