ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ಬಿಜೆಪಿ ಶಾಸಕ ಹರೀಶ್ ಪೂಂಜಾ (MLA Harish Poonja) ಅವರ ಮೇಲೆ ಎಫ್‍ಐಆರ್ ದಾಖಲಾಗಿದೆ.
ಅರಣ್ಯಾಧಿಕಾರಿ ಜಯಪ್ರಕಾಶ್ ಕೆಕೆ ದೂರಿನ ಹಿನ್ನೆಲೆಯಲ್ಲಿ ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ (Dharmasthala Police Station) ಪ್ರಕರಣ ದಾಖಲಾಗಿದೆ. ಇದನ್ನೂ ಓದಿ: ಅರಣ್ಯಾಧಿಕಾರಿಗಳ ಎದುರೇ ಮನೆ ನಿರ್ಮಾಣಕ್ಕೆ ಸೂಚನೆ ಕೊಟ್ಟ ಶಾಸಕ
Advertisement
Advertisement
ಕೆಲ ದಿನಗಳ ಹಿಂದೆ ಅಂದರೆ ಅ. 8ರಂದು ಚಾರ್ಮಾಡಿ (Charmadi Ghat) ಅರಣ್ಯದಲ್ಲಿ ಮನೆ ನಿರ್ಮಾಣ-ತೆರವು ಸಂಬಂಧ ಅರಣ್ಯಾಧಿಕಾರಿಗಳು-ಶಾಸಕರ ನಡುವೆ ಭಾರೀ ಜಟಾಪಟಿ ನಡೆದಿತ್ತು. ಈ ವೇಳೆ ಅರಣ್ಯಾಧಿಕಾರಿ ಜಯಪ್ರಕಾಶ್ ಗೆ ‘ಲೋಫರ್ ನನ್ ಮಗ’ ಅಂತಾ ಶಾಸಕರು ಬೈದಿದ್ದಾರೆ ಎಂದು ದೂರು ನೀಡಲಾಗಿತ್ತು.
Advertisement
Advertisement
ಇದರಿಂದ ಬೇಸರಗೊಂಡ ಅರಣ್ಯಾಧಿಕಾರಿ ಶಾಸಕ ಹಾಗೂ ಬೆಂಬಲಿಗರ ವಿರುದ್ಧ ದೂರು ದಾಖಲಿಸಿದ್ದಾರೆ. ಐಪಿಸಿ 1860(ಯು/ಎಸ್-143, 353, 504 (ಶಾಂತಿ ಭಂಗವನ್ನು ಪ್ರಚೋದಿಸುವ ಉದ್ದೇಶದಿಂದ ಉದ್ದೇಶಪೂರ್ವಕ ಅವಮಾನ), 149) ಅಡಿ ಪ್ರಕರಣ ದಾಖಲಾಗಿದೆ. ಸದ್ಯ ಹರೀಶ್ ಪೂಂಜಾ ಅವರು ಬಂಧನದ ಭೀತಿಯಲ್ಲಿದ್ದಾರೆ.
Web Stories