ಮುಂಬೈ: ನ್ಯೂ ಗ್ಲೋಬಲ್ ಇಂಡಿಯಾ ಲಿಮಿಟೆಡ್‌ನ ಚೆಕ್ ಬೌನ್ಸ್ ಪ್ರಕರಣಕ್ಕೆ ಸಂಬಂಧಿಸಿದಂತೆ ಟೀಂ ಇಂಡಿಯಾದ ಮಾಜಿ ನಾಯಕ ಮಹೇಂದ್ರ ಸಿಂಗ್ ಧೋನಿ ಸೇರಿದಂತೆ 8 ಮಂದಿ ವಿರುದ್ಧ ಎಫ್‌ಐಆರ್ ದಾಖಲಾಗಿದೆ.
`ನ್ಯೂ ಗ್ಲೋಬಲ್ ಪ್ರೊಡ್ಯೂಸ್ ಇಂಡಿಯಾ ಲಿಮಿಟೆಡ್’ ನಿಂದ ಪಡೆದ 30 ಲಕ್ಷ ರೂಪಾಯಿ ಮೌಲ್ಯದ ಚೆಕ್ ಬೌನ್ಸ್ ಆಗಿದೆ ಎಂದು ಆರೋಪಿಸಿರುವ ಎಸ್‌ಕೆ ಎಂಟರ್‌ಪ್ರೈಸಸ್ ಹೆಸರಿನ ಕಂಪನಿಯು ಬೇಗುಸರಾಯ್‌ನ ಸಿಜೆಎಂ ನ್ಯಾಯಾಲಯದಲ್ಲಿ ಎಫ್‌ಐಆರ್ ದಾಖಲಿಸಿದೆ. ಅಂದಹಾಗೆ ಎಂಎಸ್ ಧೋನಿ ಈ ಉತ್ಪನ್ನವನ್ನು ಪ್ರಚಾರ ಮಾಡಿದ್ದರು. ಈ ಹಿನ್ನೆಲೆಯಲ್ಲಿ ಅವರ ವಿರುದ್ಧವೂ ಪ್ರಕರಣ ದಾಖಲಾಗಿದೆ ಎಂದು ಸುದ್ದಿ ಮಾಧ್ಯಮಗಳು ವರದಿ ಮಾಡಿವೆ. ಇದನ್ನೂ ಓದಿ: ಬಿಸಿಸಿಐ ಅಧ್ಯಕ್ಷ ಸ್ಥಾನಕ್ಕೆ ಗಂಗೂಲಿ ರಾಜೀನಾಮೆ ನೀಡಿಲ್ಲ: ಜಯ್ ಶಾ ಸ್ಪಷ್ಟನೆ
Advertisement
Advertisement
ಪ್ರಕರಣದ ವಿಚಾರಣೆ ನಡೆಸಿದ್ದ ನ್ಯಾಯಾಲಯವು ಪ್ರಕರಣವನ್ನು ಜುಡಿಷಿಯಲ್ ಮ್ಯಾಜಿಸ್ಟ್ರೇಟ್ ಅಜಯ್ ಕುಮಾರ್ ಮಿಶ್ರಾ ಅವರಿಗೆ ಕಳುಹಿಸಿದೆ. ಈ ಹಿನ್ನೆಲೆಯಲ್ಲಿ ಈ ಪ್ರಕರಣದ ಮುಂದಿನ ವಿಚಾರಣೆ ಜೂನ್ 28 ರಂದು ನಡೆಯಲಿದೆ. ಇದನ್ನೂ ಓದಿ: ಹಾಕಿ ಏಷ್ಯಾ ಕಪ್ 2022: ಭಾರತಕ್ಕೆ ಕಂಚಿನ ಪದಕ
Advertisement
ಏನಿದು ಘಟನೆ?: ನ್ಯೂ ಗ್ಲೋಬಲ್ ಪ್ರೊಡ್ಯೂಸ್ ಇಂಡಿಯಾ ಲಿಮಿಟೆಡ್‌ನಿಂದ 30 ಲಕ್ಷ ರೂ. ಮೌಲ್ಯದ ರಸಗೊಬ್ಬರದ ಆದೇಶವನ್ನು ಎಸ್‌ಕೆ ಎಂಟರ್‌ಪ್ರೈಸ್ ಸ್ವೀಕರಿಸಿತ್ತು. ಅದರಂತೆ ಎಸ್‌ಕೆ ಎಂಟರ್‌ಪ್ರೈಸಸ್ ರಸಗೊಬ್ಬರನ್ನು ನೀಡಿತ್ತು. ಆದರೆ ಡೀಲರ್ ಈ ಹಿಂದಿನ ಒಪ್ಪಂದಕ್ಕೆ ಬದ್ಧವಾಗಿದರ ಕಾರಣ ಸಾಕಷ್ಟು ಉತ್ಪನ್ನಗಳು ಮಾರಾಟವಾಗದೆ ಹಾಗೆಯೇ ಉಳಿದಿದ್ದವು. ನಂತರ ಕಂಪನಿ ಅವುಗಳನ್ನು ಹಿಂದಕ್ಕೆ ಪಡೆದು, ಏಜೆನ್ಸಿ ಮೂಲಕ 30 ಲಕ್ಷ ರೂ. ಚೆಕ್ ಅನ್ನು ನೀಡಿತ್ತು. ಆದರೆ ಚೆಕ್ ಅನ್ನು ಬ್ಯಾಂಕ್‌ಗೆ ಹಾಕಿದ ಬಳಿಕ ಬೌನ್ಸ್ ಆಗಿರುವುದು ಬೆಳಕಿಗೆ ಬಂದಿದೆ.
Advertisement
ಈ ಸಂಬಂಧ ಗ್ಲೋಬಲ್ ಇಂಡಿಯಾ ಕಂಪನಿಗೆ ನೋಟಿಸ್ ನೀಡಲಾದರೂ ಯಾವುದೇ ಪ್ರತಿಕ್ರಿಯೆ ಸ್ವೀಕರಿಸದ ಹಿನ್ನೆಲೆಯಲ್ಲಿ ಎಸ್‌ಕೆ ಎಂಟರ್‌ಪ್ರೈಸಸ್‌ನ ಮಾಲೀಕ ನೀರಜ್ ಕುಮಾರ್ ನಿರಾಲಾ ಅವರು ಸಂಬಂಧಿಸಿದ ಉತ್ಪನ್ನವನ್ನು ಪ್ರಚಾರ ಮಾಡಿದ ಎಂ.ಎಸ್.ಧೋನಿ ಮತ್ತು ಇತರ 7 ಮಂದಿ ವಿರುದ್ಧ ಎಫ್‌ಐಆರ್ ದಾಖಲಿಸಿದ್ದಾರೆ.