ಹಾಸನ: ಅನೈಸರ್ಗಿಕ ಲೈಂಗಿಕ ದೌರ್ಜನ್ಯ ಆರೋಪದಲ್ಲಿ ವಿಧಾನಪರಿಷತ್ ಸದಸ್ಯ ಡಾ.ಸೂರಜ್ ರೇವಣ್ಣ (Dr. Suraj Revanna) ವಿರುದ್ಧ ಕೇಸ್ ದಾಖಲಾಗಿದೆ.
ಸಂತ್ರಸ್ತ ನೀಡಿದ ದೂರು ಆಧರಿಸಿ ಹೊಳೆನರಸೀಪುರ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಸೆಕ್ಷನ್ 377 (ಅಸ್ವಾಭಾವಿಕ ಅಪರಾಧ), 342 (ತಪ್ಪಾದ ಬಂಧನಕ್ಕೆ ಶಿಕ್ಷೆ ) ಹಾಗೂ 506 ( ಬೆದರಿಕೆ) ಯಡಿ ಕೇಸ್ ದಾಖಲು ಮಾಡಲಾಗಿದೆ. ಇದನ್ನೂ ಓದಿ: ವೆಬ್ ಆಪ್ ಬಳಸಿ ಮಾತನಾಡಿರೋ ಆರೋಪಿಗಳು- ರಿಮ್ಯಾಂಡ್ ಕಾಪಿಯಲ್ಲಿ ಸ್ಫೋಟಕ ಅಂಶ ಬಯಲು
ಶುಕ್ರವಾರ ಡಿಜಿ ಕಛೇರಿಯಲ್ಲಿ ಸಂತ್ರಸ್ತ ದೂರು ನೀಡಿದ್ದ. ಅಲ್ಲದೇ ಹಾಸನ ಎಸ್‌ಪಿಗೂ ದೂರಿನ ಪ್ರತಿ ಮೇಲ್ ಮಾಡಿದ್ದ. ಇದೀಗ ಮೇಲ್ ಆಧರಿಸಿ ಸಂತ್ರಸ್ತನನ್ನ ಕರೆಸಿ ಮಾಹಿತಿ ಪಡೆದು ಪೊಲೀಸರು ಕೇಸ್ ದಾಖಲಿಸಿಕೊಂಡಿದ್ದಾರೆ.
ಸಂತ್ರಸ್ತ ದೂರು: ಸೂರಜ್ ರೇವಣ್ಣ ನನಗೆ ಚುನಾವಣೆ ಸಂದರ್ಭದಲ್ಲಿ ಪರಿಚಯವಾಗಿದ್ರು. ನಾನು ಅವರ ತಮ್ಮ ಪ್ರಜ್ವಲ್ ರೇವಣ್ಣ ಪರ ಕೆಲಸ ಮಾಡಿದ್ದೇನೆ. ಆ ಸಂದರ್ಭ ನನ್ನ ನಂಬರ್‍ನ್ನ ಸೂರಜ್ ತೆಗೆದುಕೊಂಡಿದ್ದರು. ಜೂ.14 ರಂದು ಸೂರಜ್ ನನಗೆ ಮೆಸೇಜ್ ಮಾಡಿದ್ದರು. ಮೆಸೇಜ್‍ನಲ್ಲಿ ನನ್ನ ಬಗ್ಗೆ ಎಲ್ಲಾ ಮಾಹಿತಿ ಪಡೆದಿದ್ದರು. ನಂತರ ಜೂ.16 ರಂದು ಹೊಳೆನರಸೀಪುರ ತಾಲೂಕಿನ, ಗನ್ನೀಕಡ ತೋಟಕ್ಕೆ ಸಂಜೆ ಬರಲು ಹೇಳಿದ್ದರು. ನಾನು ಹೋದ ಸಂದರ್ಭ ಮನೆಯಲ್ಲಿ ಒಬ್ಬರೇ ಇದ್ದರು. ನನಗೆ ಇಷ್ಟವಿಲ್ಲದಿದ್ದರೂ ಲೈಂಗಿಕ ಕಿರುಕುಳ ನೀಡಿದ್ದಾರೆ. ಆ ಸಂದರ್ಭ ನನಗೆ ಪುರುಷರನ್ನು ಕಂಡರೆ ಆಸಕ್ತಿ ಮಹಿಳೆಯರನ್ನು ಕಂಡರೆ ಆಸಕ್ತಿ ಇಲ್ಲ ಎಂದು ಹೇಳಿ ನನ್ನ ಮೇಲೆ ದೌರ್ಜನ್ಯ ಎಸಗಿದ್ದಾರೆ ಎಂದು ದೂರಿನಲ್ಲಿ ತಿಳಿಸಿರುವುದಾಗಿ ತಿಳಿದು ಬಂದಿದೆ.