ಮಾಜಿ ಸಚಿವ ಕೃಷ್ಣಯ್ಯ ಶೆಟ್ಟಿ ಮೇಲೆ FIR ದಾಖಲು

Public TV
1 Min Read
krishnaiah shetty

ಬೆಂಗಳೂರು: ಮಾಜಿ ಸಚಿವ ಕೃಷ್ಣಯ್ಯ ಶೆಟ್ಟಿ (Krishnaiah Shetty) ವಿರುದ್ಧ ಮಲ್ಲೇಶ್ವರಂ ಪೊಲೀಸ್ ಠಾಣೆಯಲ್ಲಿ (Malleswaram Police Station) ಎಫ್‍ಐಆರ್ ದಾಖಲಾಗಿದೆ.

ಗಾಂಧಿನಗರ ಕ್ಷೇತ್ರದ ಹೆಸರು ಮತ್ತು ಕೃಷ್ಣಯ್ಯ ಶೆಟ್ಟಿ ಹೆಸರಲ್ಲಿ ಫುಡ್ ಕಿಟ್ (Food Kit) ತಯಾರಿ ಮಾಡಲಾಗುತ್ತಿತ್ತು. ಈ ವೇಳೆ ಖಚಿತ ಮಾಹಿತಿ ಆಧರಿಸಿ ಚುನಾವಣಾ ಅಧಿಕಾರಿಗಳು ಹಾಗೂ ಪೊಲೀಸರು ದಾಳಿ ಮಾಡಿದ್ದಾರೆ. ಅಷ್ಟೇ ಅಲ್ಲದೇ ಅಕ್ಕಿ, ಬೆಳೆ, ಬೆಲ್ಲ, ಡ್ರೈಫ್ರೂಟ್ಸ್, ಅಡುಗೆ ಎಣ್ಣೆ ಸೇರಿದಂತೆ ಗೃಹ ಬಳಕೆ ದಿನಸಿ ವಶಕ್ಕೆ ಪಡೆದಿದ್ದಾರೆ. ದಾಳಿ ವೇಳೆ ಸುಮಾರು ಏಳೆಂಟು ಲಕ್ಷಕ್ಕೂ ಅಧಿಕ ಮೌಲ್ಯದ ವಸ್ತುಗಳು ಪತ್ತೆಯಾಗಿತ್ತು. ಇದನ್ನೂ ಓದಿ: ಸೆಖೆ ಅಂತಾ ಮನೆ ಮಹಡಿ ಮೇಲೆ ಹೋಗಿ ಮಲಗುವ ಮುನ್ನ ಎಚ್ಚರ!

ಕೃಷ್ಣಯ್ಯ ಶೆಟ್ಟಿ ಅವರು ಗಾಂಧಿನಗರದ ಬಿಜೆಪಿ ಟಿಕೆಟ್ ಆಕಾಂಕ್ಷಿಯಾಗಿದ್ದಾರೆ. ಚುನಾವಣಾ ಅಧಿಕಾರಿ ಲಕ್ಷ್ಮಣ್ ನೀಡಿದ ದೂರಿನನ್ವಯ FIR ದಾಖಲಾಗಿದೆ. ಸದ್ಯ ಪ್ರಕರಣ ದಾಖಲಿಸಿಕೊಂಡು ಕೃಷ್ಣಯ್ಯ ಶೆಟ್ಟಿಗೆ ನೊಟೀಸ್ ನೀಡಲು ಪೊಲೀಸರು ಮುಂದಾಗಿದ್ದಾರೆ. ಇದನ್ನೂ ಓದಿ: ಬಿಸಿಲ ಬೇಗೆಗೆ ಕಂಗೆಟ್ಟ ಕರುನಾಡಿಗರು- ರಾಜ್ಯಕ್ಕೆ ಮತ್ತೆ ಹೀಟ್ ವೇವ್ ಆತಂಕ

Share This Article