ಗಣೇಶ ವಿಸರ್ಜನೆ ಮೆರವಣಿಗೆ ವೇಳೆ ಪ್ರಚೋದನಕಾರಿ ಹೇಳಿಕೆ – ಪ್ರತಾಪ್ ಸಿಂಹ ವಿರುದ್ಧ ಎಫ್‌ಐಆರ್

Public TV
1 Min Read
pratap simha 1

– ನ್ಯೂಕ್ಲಿಯರ್ ಬಾಂಬ್ ಮಾಡಿದ ಹಿಂದೂಗಳಿಗೆ ಪೆಟ್ರೋಲ್ ಬಾಂಬ್ ಮಾಡೋಕೆ ಬರಲ್ವಾ ಎಂದಿದ್ದ ಮಾಜಿ ಸಂಸದ

ಯಾದಗಿರಿ: ಗಣೇಶ ವಿಸರ್ಜನೆ ಶೋಭಾಯಾತ್ರೆ ಮೆರವಣಿಗೆ ವೇಳೆ ಪ್ರಚೋದನಕಾರಿ ಹೇಳಿಕೆ ನೀಡಿದ ಆರೋಪದಡಿ ಮಾಜಿ ಸಂಸದ ಪ್ರತಾಪ್ ಸಿಂಹ (Pratap Simha) ವಿರುದ್ಧ ಪ್ರಕರಣ ದಾಖಲಾಗಿದೆ.

ಸೆ.21 ರಂದು ಹಿಂದೂ ಮಹಾಗಣಪತಿ ವಿಸರ್ಜನೆ ಶೋಭಾಯಾತ್ರೆಯಲ್ಲಿ ಪ್ರತಾಪ್ ಸಿಂಹ ಭಾಗವಹಿಸಿದ್ದರು. ಮುಸ್ಲಿಮರ ಕುರಿತು ಪ್ರಚೋದನಕಾರಿ ಹೇಳಿಕೆ ನೀಡಿದ್ದರು. ಇದನ್ನೂ ಓದಿ: ಪಿಜಿ ಮುಂದೆ ನಿಲ್ಲಿಸಿದ್ದ ಬೈಕ್‌ಗೆ ಬೆಂಕಿ ಹಚ್ಚಿದ್ದ ಆರೋಪಿ ಅರೆಸ್ಟ್

shahapur police station

ಗಣೇಶ ವಿಸರ್ಜನೆ ವೇಳೆ ಎಲ್ಲಾ ಕಡೆ ಕಲ್ಲು ತೂರುವ ಪ್ರವೃತ್ತಿ ಕಾಣಸ್ತಾ ಇದೆ. ಕಲ್ಲು ಹೊಡೆಯುವ ಪ್ರವೃತ್ತಿ ಮುಸ್ಲಿಮರಿಗೆ ಯಾಕೆ ಬರುತ್ತೆ? ಹಿಂದೂಗಳು ಕೈಯಲ್ಲಿ ಕಲ್ಲು ಹೀಡಿದುಕೊಂಡರೆ ನಿಮ್ಮ ಕಥೆ ಏನು ಆಗುತ್ತೆ? ನ್ಯೂಕ್ಲಿಯರ್ ಬಾಂಬ್ ಮಾಡಿದ ಹಿಂದೂಗಳಿಗೆ ಪೆಟ್ರೋಲ್ ಬಾಂಬ್ ಮಾಡೋಕೆ ಬರಲ್ವಾ ಎಂದು ಪ್ರತಾಪ್ ಸಿಂಹ ಮಾತನಾಡಿದ್ದರು.

ಟಾಂಗಾಗಳು, ಗುಜರಿಗಳು ಮಾಡುವ ಕೆಲಸವನ್ನು ಕ್ಷಣ ಮಾತ್ರದಲ್ಲಿ ಹಿಂದೂಗಳಿಗೆ ಮಾಡಲು ಬರುತ್ತದೆ ಎಂದಿದ್ದರು. ಧಾರ್ಮಿಕ ನಂಬಿಕೆಗಳಿಗೆ ಅವಮಾನಗೊಳಿಸಿ ದ್ವೇಷ ಭಾವನೆಯಿಂದ ಮಾತನಾಡಿದ್ದಾರೆ ಎಂದು ಆರೋಪಿಸಿ ಶಹಾಪುರ ಠಾಣೆಯಲ್ಲಿ ಕೇಸ್ ದಾಖಲು ಮಾಡಲಾಗಿದೆ. ಇದನ್ನೂ ಓದಿ: ಹುಬ್ಬಳ್ಳಿ ಆಸ್ಪತ್ರೆಯಲ್ಲಿ ಗಣೇಶ ಪ್ರತಿಷ್ಠಾಪಿಸಿದ ಸಿಬ್ಬಂದಿಗೆ ನೋಟಿಸ್ – ಅಧೀಕ್ಷಕರ ವಿರುದ್ಧ ಹಿಂದೂ ಸಂಘಟನೆಗಳು ಕಿಡಿ

ಶಹಾಪುರ ಪಿಎಸ್‌ಐ ಡಿ.ವಿ.ನಾಯಕ ಅವರಿಂದ ಸ್ವಕೃತ ದೂರು ದಾಖಲಾಗಿದೆ. ಬಿಎನ್‌ಎಸ್ ಕಾಯ್ದೆಯಡಿ 299, 192 ಕಾಯ್ದೆಯಡಿ ಮಾಜಿ ಸಂಸದ ಪ್ರತಾಪ್ ಸಿಂಹ ಸೇರಿ 5 ಜನರ ವಿರುದ್ಧ ಕೇಸ್ ದಾಖಲಿಸಲಾಗಿದೆ.

Share This Article