ನವದೆಹಲಿ: ಸಂಸತ್‌ನ ಹೊರಗೆ ಪ್ರತಿಭಟನೆ ಸಂದರ್ಭದಲ್ಲಿ ಬಿಜೆಪಿಯ ಇಬ್ಬರು ಸಂಸದರು ಗಾಯಗೊಂಡ ಪ್ರಕರಣಕ್ಕೆ ಸಂಬಂಧಿಸಿದಂತೆ ಲೋಕಸಭೆ ವಿಪಕ್ಷ ನಾಯಕ ರಾಹುಲ್ ಗಾಂಧಿ ವಿರುದ್ಧ ಎಫ್‌ಐಆರ್ ದಾಖಲಾಗಿದೆ.
ಪ್ರತಿಭಟನೆಯ ಸಂದರ್ಭದಲ್ಲಿ ಸಂಸದರಾದ ಪ್ರತಾಪ್ ಸಾರಂಗಿ ಮತ್ತು ಮುಖೇಶ್ ರಜಪೂತ್ ಅವರ ತಲೆಗೆ ಗಾಯಗಳಾಗಿವೆ. ಇಬ್ಬರೂ ನಾಯಕರು ಆಸ್ಪತ್ರೆಯಲ್ಲಿದ್ದಾರೆ. ಬಿಜೆಪಿ ದೂರಿನ ಮೇರೆಗೆ ಕಾಂಗ್ರೆಸ್‌ನ ರಾಹುಲ್ ಗಾಂಧಿ ವಿರುದ್ಧ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ.
Advertisement
Advertisement
ಭಾರತೀಯ ನ್ಯಾಯ ಸಂಹಿತೆಯ ವಿವಿಧ ವಿಭಾಗಗಳ ಅಡಿಯಲ್ಲಿ ರಾಹುಲ್ ಗಾಂಧಿ ವಿರುದ್ಧ ಕೇಸ್ ದಾಖಲಾಗಿದೆ. ಸ್ವಯಂಪ್ರೇರಣೆಯಿಂದ ಘೋರವಾದ ಗಾಯವನ್ನು ಉಂಟುಮಾಡುವುದು, ಜೀವಕ್ಕೆ ಅಥವಾ ಇತರರ ವೈಯಕ್ತಿಕ ಸುರಕ್ಷತೆಗೆ ಅಪಾಯವನ್ನುಂಟು ಮಾಡುವ ಕ್ರಿಯೆ, ಕ್ರಿಮಿನಲ್ ಬಲದ ಬಳಕೆ, ಕ್ರಿಮಿನಲ್ ಬೆದರಿಕೆ ಮೊದಲಾದ ಸೆಕ್ಷನ್‌ಗಳಡಿ ಪ್ರಕರಣ ದಾಖಲಿಸಲಾಗಿದೆ.
Advertisement
ಇಂದು ಕೇಂದ್ರದ ಮಾಜಿ ಸಚಿವ ಮತ್ತು ಬಿಜೆಪಿ ಸಂಸದ ಅನುರಾಗ್ ಠಾಕೂರ್, ಸಂಸದರಾದ ಬಾನ್ಸುರಿ ಸ್ವರಾಜ್ ಮತ್ತು ಹೇಮಂಗ್ ಜೋಶಿ ಅವರು ದೂರು ದಾಖಲಿಸಿದ್ದಾರೆ. ಅವರು ಇತರ ವಿಷಯಗಳ ಜೊತೆಗೆ ಕೊಲೆ ಯತ್ನದ ಆರೋಪ ಮಾಡಿದ್ದಾರೆ.
Advertisement
ಇಂದು ನಾವು ರಾಹುಲ್ ಗಾಂಧಿ ವಿರುದ್ಧ ಹಲ್ಲೆಗೆ ಸಂಬಂಧ ದೂರು ದಾಖಲಿಸಿದ್ದೇವೆ. ಸಂಸತ್ ಭವನದ ಮಕರ ದ್ವಾರದ ಹೊರಗೆ ಎನ್‌ಡಿಎ ಸಂಸದರು ಶಾಂತಿಯುತವಾಗಿ ಪ್ರತಿಭಟನೆ ನಡೆಸುತ್ತಿದ್ದಾಗ ನಡೆದ ಘಟನೆಯನ್ನು ವಿವರವಾಗಿ ಪ್ರಸ್ತಾಪಿಸಿದ್ದೇವೆ. ರಾಹುಲ್ ಗಾಂಧಿ ತಳ್ಳಿದ್ದರಿಂದ ಇಬ್ಬರು ಬಿಜೆಪಿ ಸಂಸದರು ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿದ್ದಾರೆ ಎಂದು ಅನುರಾಗ್ ಠಾಕೂರ್ ಸುದ್ದಿಗಾರರಿಗೆ ತಿಳಿಸಿದ್ದಾರೆ.