ಬಾಲಿವುಡ್ ನಟ ಸೋನು ಸೂದ್ ವಿರುದ್ಧ FIR ದಾಖಲು

Public TV
2 Min Read
sonu sood

ಮುಂಬೈ: ಬಾಲಿವುಡ್ ನಟ ಸೋನು ಸೂದ್ ಅವರ ಸಹೋದರಿ ಮಾಲವಿಕಾ ಸೂದ್ ಅವರು ಪಂಜಾಬ್ ಚುನಾವಣಾ ಅಭ್ಯರ್ಥಿಯಾಗಿ ಮೊಗದಿಂದ ಸ್ಫರ್ಧೆ ಮಾಡಿದ್ದಾರೆ. ಮತದಾನ ನಡೆಯುವ ಸ್ಥಳಕ್ಕೆ ಸೋನು ಭೇಟಿ ನೀಡಿ ಮತದಾರರನ್ನು ಸೆಳೆಯುವ ಪ್ರಯತ್ನ ಮಾಡುತ್ತಿದ್ದಾರೆ ಎನ್ನುವ ಆರೋಪದ ಮೇಲೆ ಏಫ್‍ಐಆರ್ ದಾಖಲು ಮಾಡಲಾಗಿದೆ.

ಟ್ವೀಟ್‍ನಲ್ಲಿ ಏನಿದೆ?: ಮೊಗಾ ಕ್ಷೇತ್ರದಲ್ಲಿ ಇತರ ಪಕ್ಷಗಳ ಅಭ್ಯರ್ಥಿಗಳು ಮತಗಳನ್ನು ಖರೀದಿಸುತ್ತಿದ್ದಾರೆ. ಚುನಾವಣಾ ಆಯೋಗವು ಈ ಬಗ್ಗೆ ತಕ್ಷಣ ಕ್ರಮ ತೆಗೆದುಕೊಳ್ಳಬೇಕು ಎಂದು ಆರೋಪಿಸಿ ಸೋನು ಸೂದ್ ಟ್ವೀಟ್ ಮಾಡಿ, ಮೊಗಾ ಪೊಲೀಸರ ಜೊತೆಗೆ ರಾಜ್ಯ ಪೊಲೀಸ್ ಮುಖ್ಯಸ್ಥರನ್ನು ಟ್ಯಾಗ್ ಮಾಡಿದ್ದರು.

ಶಿರೋಮಣಿ ಅಕಾಲಿದಳದ ಅಭ್ಯರ್ಥಿ ಬಜಿರ್ಂದರ್ ಸಿಂಗ್, ಅಲಿಯಾಸ್ ಮಖನ್ ಬ್ರಾರ್, ನನ್ನ ವಿರುದ್ಧ ಸುಳ್ಳು ದೂರು ದಾಖಲಿಸಿದ್ದಾರೆ. ಇದು ಕೇವಲ ಪಾರ್ಕಿಂಗ್ ಸಮಸ್ಯೆಯಾಗಿತ್ತು. ವಾಹನವನ್ನು ಸರಿಯಾಗಿ ನಿಲ್ಲಿಸಿರಲಿಲ್ಲ. ಬೇರೆ ಏನೂ ಇರಲಿಲ್ಲ ಎಂದು ಸೋನು ಸೂದ್ ಅವರು ಪ್ರತಿಕ್ರಿಯೆ ನೀಡಿದ್ದಾರೆ.

ನಡೆದಿದ್ದೇನು?: ಸೋನು ಅವರ ಸಹೋದರಿ ಮಾಳವಿಕಾ ಸೂದ್  ಮೊಗಾದಿಂದ ಕಾಂಗ್ರೆಸ್ ಅಭ್ಯರ್ಥಿಯಾಗಿದ್ದರು. ಪಂಜಾಬ್‍ನ ಮೋಗಾ ಜಿಲ್ಲೆಯಲ್ಲಿ ಎಸ್‍ಎಡಿ ಭಾನುವಾರದಂದು ಭಾರತೀಯ ದಂಡ ಸಂಹಿತೆಯ ಸೆಕ್ಷನ್ 188ರ ಅಡಿಯಲ್ಲಿ ಸೋನು ಸೂದ್ ವಿರುದ್ಧ ದೂರು ದಾಖಲಿಸಲಾಗಿದೆ. ನಟ ತನ್ನ ತಾರಾ ವರ್ಚಸ್ಸನ್ನು ಬಳಸಿಕೊಂಡು ಮತದಾರರ ಮೇಲೆ ಪ್ರಭಾವ ಬೀರಲು ಬೂತ್‍ಗಳಿಗೆ ಭೇಟಿ ನೀಡಿದ್ದಾರೆ ಎಂದು ದೂರಿನಲ್ಲಿ ಹೇಳಲಾಗಿತ್ತು. ನಂತರ ಪೊಲೀಸರು ಅವರ ವಾಹನವನ್ನು ವಶಪಡಿಸಿಕೊಂಡು ಮನೆಯೊಳಗೆ ಇರುವಂತೆ ಸೂಚಿಸಿದ್ದರು.

sonu sood sister congress 1

ನೀತಿ ಸಂಹಿತೆಗೆ ಸಂಬಂಧಿಸಿದಂತೆ ಮೊಗಾ ಜಿಲ್ಲೆಯ ಹೆಚ್ಚುವರಿ ಜಿಲ್ಲಾಧಿಕಾರಿಗಳ ಆದೇಶವನ್ನು ಉಲ್ಲಂಘಿಸಿದ್ದಕ್ಕಾಗಿ ಬಾಲಿವುಡ್ ನಟ ಸೋನು ಸೂದ್ ವಿರುದ್ಧ ಪ್ರಕರಣ ದಾಖಲಿಸಲಾಗಿದೆ. ಚುನಾವಣಾ ನಿಯಮಗಳನ್ನು ಉಲ್ಲಂಘಿಸಿ ಮತದಾನದ ದಿನದಂದು, ಕಾಂಗ್ರೆಸ್ ಅಭ್ಯರ್ಥಿಯಾಗಿರುವ ತಮ್ಮ ಸೋದರಿ ಪರ ಸೋನು ಸೂದ್ ಲಂಧೇಕೆ ಗ್ರಾಮದಲ್ಲಿ ಮತ ಪ್ರಚಾರ ಮಾಡುತ್ತಿರುವುದು ಕಂಡುಬಂದಿದೆ ಎಂದು ಆರೋಪಿಸಲಾಗಿದೆ. ಇದನ್ನೂ ಓದಿ: ಪಂಜಾಬ್‌ ಚುನಾವಣೆ – ನಟ ಸೋನು ಸೂದ್‌ ಸಹೋದರಿ ಕಾಂಗ್ರೆಸ್‌ ಸೇರ್ಪಡೆ

sonu sood 1

ಸೋನು ಸೂದ್ ವಿರುದ್ಧ ಪ್ರಚಾರದ ದೂರು ಬಂದಾಗ, ನಟನಿಗೆ ಮನೆಯೊಳಗೆ ಇರಲು ತಿಳಿಸಲಾಗಿತ್ತು. ಅಲ್ಲದೇ ಫ್ಲೈಯಿಂಗ್ ಸ್ಕ್ವಾಡ್ ತಂಡವೊಂದನ್ನು ಅವರ ಮನೆಯ ಹೊರಗೆ ನಿಯೋಜಿಸಲಾಗಿತ್ತು ಎಂದು ಚುನಾವಣಾಧಿಕಾರಿ ಸತ್ವಂತ್ ಸಿಂಗ್ ತಿಳಿಸಿದ್ದಾರೆ.

Share This Article
Leave a Comment

Leave a Reply

Your email address will not be published. Required fields are marked *