ಅಯೋಧ್ಯೆ ನದಿಯಲ್ಲಿ ಪತ್ನಿಗೆ ಕಿಸ್ ಕೊಟ್ಟ ಪತಿಗೆ ಥಳಿಸಿದ್ದ 12 ಮಂದಿ ವಿರುದ್ಧ FIR

Public TV
1 Min Read
ayodhya river 1

ಲಕ್ನೋ: ಉತ್ತರ ಪ್ರದೇಶದ ಅಯೋಧ್ಯೆಯಲ್ಲಿನ ಸರಯೂ ನದಿಯಲ್ಲಿ ಸ್ನಾನ ಮಾಡುವ ವೇಳೆ ಪತ್ನಿಗೆ ಮುತ್ತು ಕೊಟ್ಟಿದ್ದ ಪತಿಯನ್ನು ಸಾರ್ವಜನಿಕರು ನಿಂದಿಸಿ ಹಿಗ್ಗಾಮುಗ್ಗಾ ಥಳಿಸಿದ್ದರು. ಈ ವೀಡಿಯೋ ವೈರಲ್ ಆದ ಒಂದು ದಿನದ ಬಳಿಕ ವ್ಯಕ್ತಿ ಮೇಲೆ ಹಲ್ಲೆಗೈದಿದ್ದದವರ ವಿರುದ್ಧ ಪೊಲೀಸರು ಎಫ್‍ಐಆರ್ ದಾಖಲಿಸಿದ್ದಾರೆ.

Ayodhya River

ವೈರಲ್ ಆದ ವೀಡಿಯೋದಲ್ಲಿ ವ್ಯಕ್ತಿಯನ್ನು ಆತನ ಹೆಂಡತಿಯಿಂದ ಸುತ್ತಮುತ್ತಲಿನ ಜನ ಥಳಿಸುತ್ತಿದ್ದರೆ, ಪತಿಯನ್ನು ರಕ್ಷಿಸಲು ಪತ್ನಿ ಪ್ರಯತ್ನಿಸುತ್ತಿರುವುದನ್ನು ಕಾಣಬಹುದಾಗಿದೆ. ಅಯೋಧ್ಯೆಯಲ್ಲಿ ಇಂತಹ ಅಸಹ್ಯವನ್ನು ಸಹಿಸುವುದಿಲ್ಲ ಎಂದು ಒಬ್ಬ ವ್ಯಕ್ತಿ ಹೇಳುತ್ತಿರುವುದನ್ನು ವೀಡಿಯೋದಲ್ಲಿ ನೋಡಬಹುದಾಗಿದೆ. ಈ ವೀಡಿಯೋ ವೈರಲ್ ಆದ ಬಳಿಕ ಅಯೋಧ್ಯೆ ಪೊಲೀಸ್ ಠಾಣೆಯಲ್ಲಿ ವ್ಯಕ್ತಿ ಮೇಲೆ ಹಲ್ಲೆ ನಡೆಸಿದವರ ವಿರುದ್ಧ ಎಫ್‍ಐಆರ್ ದಾಖಲಿಸಲಾಗಿದೆ.

ಭಾರತೀಯ ದಂಡ ಸಂಹಿತೆಯ ಸೆಕ್ಷನ್ 147 (ಗಲಭೆ),323 (ಸ್ವಯಂಪ್ರೇರಿತವಾಗಿ ನೋವುಂಟುಮಾಡುವುದು) ಮತ್ತು 504 (ಶಾಂತಿ ಭಂಗವನ್ನು ಪ್ರಚೋದಿಸುವ ಉದ್ದೇಶದಿಂದ ಅವಮಾನ) ಅಡಿಯಲ್ಲಿ 10 ರಿಂದ 12 ಅಪರಿಚಿತ ವ್ಯಕ್ತಿಗಳ ವಿರುದ್ಧ ಪ್ರಕರಣ ದಾಖಲಿಸಲಾಗಿದೆ. ವೀಡಿಯೋ ಗಮನಕ್ಕೆ ಬಂದ ನಂತರ ನಾವು ಆರೋಪಿಗಳು ಹಾಗೂ ವ್ಯಕ್ತಿಯ ಗುರುತನ್ನು ಪತ್ತೆಹಚ್ಚಲು ಪ್ರಯತ್ನಿಸುತ್ತಿದ್ದೇವೆ ಎಂದು ಹೇಳಿದ್ದಾರೆ. ಇದನ್ನೂ ಓದಿ:  ಅಯೋಧ್ಯೆ ನದಿಯಲ್ಲಿ ಪತ್ನಿಗೆ ಕಿಸ್‌ ಮಾಡಿದ ಪತಿಯನ್ನೇ ಥಳಿಸಿದ ಸಾರ್ವಜನಿಕರು… Video Viral

‘ಸರಯೂ’ ಗಂಗೆಯ ಏಳು ಉಪನದಿಗಳಲ್ಲಿ ಒಂದಾಗಿದೆ. ಇದನ್ನು ಹಿಂದೂಗಳು ಪವಿತ್ರವೆಂದು ಪರಿಗಣಿಸುತ್ತಾರೆ. ಶ್ರೀರಾಮನ ಜನ್ಮಸ್ಥಳವಾದ ಅಯೋಧ್ಯೆಯು ಸರಯೂ ನದಿಯ ದಡದಲ್ಲಿದೆ. ಇದನ್ನೂ ಓದಿ: ಜೆಪಿ ನಡ್ಡಾ ನಿವಾಸಕ್ಕೆ ಬೆಂಕಿ ಹಚ್ಚಲು ಯತ್ನಿಸಿದ ನಾಲ್ವರು ಕಾಂಗ್ರೆಸ್ ಕಾರ್ಯಕರ್ತರ ಬಂಧನ

Live Tv

Share This Article
Leave a Comment

Leave a Reply

Your email address will not be published. Required fields are marked *