-ವ್ಯಾಪಾರಿಗಳ ವಸ್ತು ವಶಪಡಿಸಿಕೊಳ್ಳಲು ಸೂಚನೆ
ಬೆಂಗಳೂರು: ಪುಟ್ಪಾತ್ (Footpath) ತೆರವು ಆದ ಜಾಗದಲ್ಲಿ ಮತ್ತೆ ವ್ಯಾಪಾರ ಮಾಡುವ ವ್ಯಾಪಾರಸ್ಥರ ವಸ್ತುಗಳನ್ನ ವಶಪಡಿಸಿಕೊಂಡು, ಅವರ ಮೇಲೆ ಎಫ್ಐಆರ್ (FIR) ದಾಖಲು ಮಾಡೋದಕ್ಕೆ ಗ್ರೇಟರ್ ಬೆಂಗಳೂರು ಅಭಿವೃದ್ಧಿ (GBA) ಸಚಿವ ಕೃಷ್ಣ ಬೈರೇಗೌಡ (Krishna Byregowda) ಸೂಚನೆ ನೀಡಿದ್ದಾರೆ.
ಬೀದಿಬದಿ ವ್ಯಾಪಾರಿಗಳಿಂದ ಪಾದಚಾರಿ ಮಾರ್ಗಗಳು ಮರು ಒತ್ತುವರಿಯಾಗದಂತೆ ನಿರಂತರವಾಗಿ ನಿಗಾ ವಹಿಸಬೇಕು, ಒಂದು ವೇಳೆ ವ್ಯಾಪಾರಿಗಳು ಒತ್ತುವರಿಗೆ ಮುಂದಾದರೆ ಅವರ ವಸ್ತುಗಳನ್ನು ವಶಕ್ಕೆ ಪಡೆದು ದಂಡ ವಿಧಿಸಬೇಕು ಹಾಗೂ ಎಫ್ಐಆರ್ ದಾಖಲಿಸುವಂತೆ ತಿಳಿಸಿದ್ದಾರೆ. ಇದನ್ನೂ ಓದಿ: ಬೆಂಗಳೂರು | ಫೋನ್ ರಿಸೀವ್ ಮಾಡ್ಲಿಲ್ಲ ಅಂತ ಪತ್ನಿ ಕೊಲೆ; ಕುದಿಯೋ ಎಣ್ಣೆ ಸುರಿದು ಸಾಕ್ಷ್ಯನಾಶಕ್ಕೆ ಯತ್ನ
ಐದೂ ಪಾಲಿಕೆಯ ವ್ಯಾಪ್ತಿಯಲ್ಲಿ ಒಟ್ಟಾರೆಯಾಗಿ 1,373.32 ಕಿ.ಮೀ ರಸ್ತೆಯಲ್ಲಿ ಒತ್ತುವರಿ ತೆರವುಗೊಳಿಸಿ, ಪಾದಾಚಾರಿಗಳ ಸುಗಮ ಸಂಚಾರಕ್ಕೆ ಅನುವು ಮಾಡಿಕೊಡಲಾಗಿದೆ ಎಂದು ಅಧಿಕಾರಿಗಳ ಕಾರ್ಯವನ್ನು ಶ್ಲಾಘಿಸಿದ್ದಾರೆ. ಆದರೆ, ನಗರದ ಹಲವೆಡೆ ಬೀದಿಬದಿ ವ್ಯಾಪಾರಿಗಳನ್ನು ತೆರವುಗೊಳಿಸಿದ್ದರೂ, ಸಹ ಕೆಲವು ಭಾಗಗಳಲ್ಲಿ ವ್ಯಾಪಾರಿಗಳು ಮತ್ತೆ ಒತ್ತುವರಿಗೆ ಮುಂದಾಗಿದ್ದಾರೆ ಎಂಬ ಮಾಹಿತಿಗಳು ಲಭ್ಯವಾಗುತ್ತಿದೆ. ಇದು ನಿಜಕ್ಕೂ ಕಳವಳಕಾರಿಯಾಗಿದ್ದು, ಪ್ರತಿ ನಗರಪಾಲಿಕೆ ವ್ಯಾಪ್ತಿಯಲ್ಲಿ ಪೊಲೀಸ್ ಮತ್ತು ಪಾಲಿಕೆ ಅಧಿಕಾರಿಗಳ ಸಮನ್ವಯದೊಂದಿಗೆ ಜಂಟಿ ಟಾಸ್ಕ್ಫೋರ್ಸ್ ರಚಿಸಬೇಕು ಎಂದಿದ್ದಾರೆ.
ತೆರವುಗೊಳಿಸಿದ ಪಾದಚಾರಿ ಮಾರ್ಗಗಳಲ್ಲಿ ನಿಯಮಿತ ಹಾಗೂ ಅನಿರೀಕ್ಷಿತ ಪರಿಶೀಲನೆ ನಡೆಸಿ, ಮರು ಒತ್ತುವರಿ ಕಂಡುಬಂದ ಕೂಡಲೇ ಸ್ಥಳದಲ್ಲೇ ಕ್ರಮಕೈಗೊಳ್ಳುವ ವ್ಯವಸ್ಥೆ ರೂಪಿಸಬೇಕು. ಜೊತೆಗೆ ಮರು ಒತ್ತುವರಿ ಪ್ರಕರಣಗಳನ್ನು ತಕ್ಷಣ ಗುರುತಿಸಿ, ಫೋಟೋ ಹಾಗೂ ಜಿಯೋ-ಟ್ಯಾಗ್ ಮಾಹಿತಿಯೊಂದಿಗೆ ವರದಿ ಮಾಡುವ ವ್ಯವಸ್ಥೆ ಮಾಡಬೇಕು. ಮಾರ್ಷಲ್ಗಳು ಹಾಗೂ ಬೀಟ್ ಪೊಲೀಸ್ ಸಿಬ್ಬಂದಿ ಜಂಟಿಯಾಗಿ ನಿಯಮಿತವಾಗಿ ಪರಿಶೀಲನೆ ನಡೆಸಬೇಕು. ಮರು ಒತ್ತುವರಿಗೆ ಎಫ್ಐಆರ್, ವಸ್ತುಗಳನ್ನು ವಶಕ್ಕೆ ಪಡೆದು ದಂಡ ಹಾಕೋದಕ್ಕೆ ಸೂಚಿಸಿದ್ದಾರೆ.ಇದನ್ನೂ ಓದಿ: ನಮಾಜ್ ವೇಳೆ ಪಾಕಿಸ್ತಾನದ ಮಸೀದಿಯಲ್ಲಿ ಭಾರೀ ಸ್ಫೋಟ – 16 ಮಂದಿ ದುರ್ಮರಣ

