Sunday, 17th November 2019

Recent News

ದೇವರ ದೀಪ ಹಾಸಿಗೆಗೆ ತಗುಲಿ 8ರ ಬಾಲಕಿ ಸಜೀವ ದಹನ

ಬೆಳಗಾವಿ: ದೇವರ ಮುಂದೆ ಹಚ್ಚಿಟ್ಟಿದ್ದ ದೀಪ ಹಾಸಿಗೆಗೆ ತಗುಲಿ ಬೆಂಕಿ ಹೊತ್ತಿಕೊಂಡ ಪರಿಣಾಮ 8 ವರ್ಷದ ಬಾಲಕಿ ಸಜೀವ ದಹನವಾಗಿರೋ ದುರಂತ ಘಟನೆ ನಗರದ ಅನಗೋಳದಲ್ಲಿ ನಡೆದಿದೆ.

ಅನಗೋಳದ ನಿವಾಸಿ ಕಸ್ತೂರಿ(8) ಮೃತ ದುರ್ದೈವಿ. ಕಳೆದ ರಾತ್ರಿ ಮನೆಯಲ್ಲಿ ಮಲಗಿದ್ದ ಸಂದರ್ಭದಲ್ಲಿ ದೇವರ ಮುಂದೆ ಹಚ್ಚಿಟ್ಟಿದ್ದ ದೀಪ ಹಾಸಿಗೆಗೆ ತಗುಲಿ ಬೆಂಕಿ ಹೊತ್ತಿಕೊಂಡಿದೆ. ಬಳಿಕ ಬೆಂಕಿಯ ಜ್ವಾಲೆ ಇಡೀ ಮನೆಯನ್ನೇ ಆವರಿಸಿ ಹೊತ್ತು ಉರಿದಿದೆ. ಪರಿಣಾಮ ಮನೆಯೊಳಗೆ ಮಲಗಿದ್ದ ಬಾಲಕಿ ಸಜೀವ ದಹನವಾಗಿದ್ದಾಳೆ.

ತಂದೆ ತಾಯಿ ಪ್ರಾಣಾಪಾಯದಿಂದ ಪಾರಾಗಿದ್ದು, ಬೆಂಕಿ ಜೋರಾದ ಕಾರಣಕ್ಕೆ ಮಗಳನ್ನು ರಕ್ಷಿಸಲು ಅವರಿಂದ ಸಾಧ್ಯವಾಗಿಲ್ಲ. ತಕ್ಷಣ ಅಗ್ನಿಶಾಮಕ ದಳಕ್ಕೆ ಸ್ಥಳೀಯರು ಮಾಹಿತಿ ನೀಡಿದ್ದು, ಸಿಬ್ಬಂದಿ ಸ್ಥಳಕ್ಕೆ ಬಂದು ಬೆಂಕಿಯನ್ನು ನಂದಿಸುವ ಮುನ್ನವೇ ಬೆಂಕಿ ಕೆನ್ನಾಲಿಗೆಗೆ ಬಾಲಕಿ ಬಲಿಯಾಗಿದ್ದಾಳೆ.

ಸದ್ಯ ಘಟನೆಯಲ್ಲಿ ಗಾಯಗೊಂಡವರನ್ನು ಖಾಸಗಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿದ್ದು, ಈ ಸಂಬಂಧ ಟಿಳಕವಾಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Leave a Reply

Your email address will not be published. Required fields are marked *