ಆನೇಕಲ್: ಬೆಂಗಳೂರು (Bengaluru) ಹೊರವಲಯದ ಆನೇಕಲ್‌ನ (Anekal) ಎಲೆಕ್ಟ್ರಾನಿಕ್ ಸಿಟಿಯ (Electronic City) ಮೊದಲನೇ ಹಂತದಲ್ಲಿರುವ ಬಯೋಇನ್ನೊವೇಟಿವ್ ಸೆಂಟರ್‌ನಲ್ಲಿ(Bio Innovative Centre) ಅಗ್ನಿ ಅವಘಡ ಸಂಭವಿಸಿದೆ.ಇದನ್ನೂ ಓದಿ: ಮಹಾಕುಂಭಮೇಳ: ಸಂಕ್ರಾಂತಿಯಂದು ಸಂಗಮದಲ್ಲಿ ‘ಅಮೃತ ಸ್ನಾನ’ ಮಾಡಿದ 1 ಕೋಟಿ ಭಕ್ತರು
ಮಂಗಳವಾರ ಬೆಳಗ್ಗೆ 4:40ರ ಸುಮಾರಿಗೆ ಈ ಅವಘಡ ಸಂಭವಿಸಿದ್ದು, ಬಯೋಇನ್ನೋವೇಟಿವ್ ರಿಸರ್ಚ್ ಸೆಂಟರ್ ಜಿ+2 ಕಟ್ಟಡದ 2ನೇ ಮಹಡಿಯಲ್ಲಿ ಬೆಂಕಿ ಕಾಣಿಸಿಕೊಂಡಿದೆ. ಬೆಂಕಿ ಕಾಣಿಸಿಕೊಳ್ಳುತ್ತಿದ್ದಂತೆ ಉದ್ಯೋಗಿಗಳು ಹೊರಗೆ ಓಡಿ ಬಂದಿದ್ದು, ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ.
ಸ್ಥಳಕ್ಕೆ ಎಲೆಕ್ಟ್ರಾನಿಕ್ ಸಿಟಿ ಅಗ್ನಿಶಾಮಕ ಠಾಣೆ ಸಿಬ್ಬಂದಿ ದೌಡಾಯಿಸಿದ್ದು, ಬೆಂಕಿಯನ್ನು ಸಂಪೂರ್ಣವಾಗಿ ನಂದಿಸಿದ್ದಾರೆ. ಎಲೆಕ್ಟ್ರಾನಿಕ್ ಸಿಟಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.ಇದನ್ನೂ ಓದಿ: ಎಲ್ಲಾ ಹೀರೋಗೂ ಒಂದು ಟೈಮ್‌ಲೈನ್ ಇರುತ್ತದೆ: ರಿಟೈರ್‌ಮೆಂಟ್ ಬಗ್ಗೆ ಸುದೀಪ್ ಮಾತು