ರಾಯಚೂರು: ಜಿಲ್ಲೆಯ ಯರಮರಸ್ ಬಳಿಯ ವೈಟಿಪಿಎಸ್ (YTPS) ವಿದ್ಯುತ್ ಕೇಂದ್ರದಲ್ಲಿ ಬೆಂಕಿ ಅವಘಡ ಸಂಭವಿಸಿದ್ದು, ಬೆಂಕಿ ಕೆನ್ನಾಲಿಗೆಗೆ ಕೋಟ್ಯಂತರ ರೂ. ಮೌಲ್ಯದ ಯಂತ್ರಗಳು ಸುಟ್ಟು ಭಸ್ಮವಾಗಿದೆ.
ಕಲ್ಲಿದ್ದಲು ಸಾಗಣೆ ವೇಳೆ ಬೆಂಕಿ ಕಾಣಿಸಿಕೊಂಡು ಕನ್ವೇರ್ ಬೆಲ್ಟ್ ಸುಟ್ಟಿದೆ. ಪರಿಣಾಮ ಕೋಟ್ಯಂತರ ರೂ. ಮೌಲ್ಯದ ಯಂತ್ರಗಳು ಸುಟ್ಟು ಕರಕಲಾಗಿವೆ. ಬೆಂಕಿ ಕಾಣಿಸಿಕೊಂಡ ಕೂಡಲೇ ಎಚ್ಚೆತ್ತ ಸಿಬ್ಬಂದಿ ಹೊರಗೆ ಬಂದಿದ್ದರಿಂದ, ಕಾರ್ಮಿಕರು ಪ್ರಾಣಾಪಾಯದಿಂದ ಪಾರಾಗಿದ್ದಾರೆ.ಇದನ್ನೂ ಓದಿ: ದಾವಣಗೆರೆ | ಇಬ್ಬರು ಬೈಕ್ ಕಳ್ಳರ ಬಂಧನ – 16.52 ಲಕ್ಷ ಮೌಲ್ಯದ 30 ಬೈಕ್ ವಶಕ್ಕೆ
ಬೆಂಕಿ ದುರಂತಕ್ಕೆ ವೈಟಿಪಿಎಸ್ ಅಧಿಕಾರಿಗಳ ನಿರ್ಲಕ್ಷ್ಯವೇ ಕಾರಣ ಎಂದು ಕಾರ್ಮಿಕರು ಆರೋಪಿಸಿದ್ದು, ನಿರ್ಲಕ್ಷ್ಯ ತೋರಿರುವ ಅಧಿಕಾರಿಗಳ ವಿರುದ್ಧ ಕ್ರಮ ಕೈಗೊಳ್ಳುವಂತೆ ಆಗ್ರಹಿಸಿದ್ದಾರೆ.

