ಚಾಮರಾಜನಗರ: ನಗರದ (Chamarajanagar) ರೈಲ್ವೇ ಬಡಾವಣೆಯ ಮನೆಯೊಂದರಲ್ಲಿ ಅಡುಗೆ ಅನಿಲ ಸೋರಿಕೆಯಾಗಿ ಅಗ್ನಿ ಅವಘಡ (Fire Accident) ಸಂಭವಿಸಿದೆ. ಅವಘಡದಲ್ಲಿ ದಂಪತಿ ಗಂಭೀರವಾಗಿ ಗಾಯಗೊಂಡಿದ್ದಾರೆ.
ಗಾಯಗೊಂಡ ದಂಪತಿಯನ್ನು ಸಿ.ಪರಮೇಶ್ ಮತ್ತು ಮಂಜುಳಾ ಎಂದು ಗುರುತಿಸಲಾಗಿದೆ. ಅನಿಲ ಸೋರಿಯಾಗಿದ್ದರಿಂದ ಮನೆ ತುಂಬಾ ಬೆಂಕಿ ವ್ಯಾಪಿಸಿದೆ. ಪರಿಣಾಮ ಮನೆಯಲ್ಲಿದ್ದ ಪಾತ್ರೆ, ಪಗಡ, ಸ್ಟವ್, ದವಸಧಾನ್ಯ ಸುಟ್ಟು ಭಸ್ಮವಾಗಿದೆ. ಇದನ್ನೂ ಓದಿ: ದೊಡ್ಡಬಳ್ಳಾಪುರ | ಕೇಬಲ್ ಫ್ಯಾಕ್ಟರಿಯಲ್ಲಿ ಅಗ್ನಿ ಅವಘಡ – 15 ಗಂಟೆ ಕಳೆದ್ರೂ ಆರದ ಬೆಂಕಿ
ಗಾಯಗೊಂಡ ದಂಪತಿಗೆ ಜಿಲ್ಲಾಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಚಾಮರಾಜನಗರ ಪಟ್ಟಣ ಠಾಣಾ ವ್ಯಾಪ್ತಿಯಲ್ಲಿ ಈ ಅವಘಡ ಸಂಭವಿಸಿದೆ. ಇದನ್ನೂ ಓದಿ: ಅರುಣಾಚಲ ಪ್ರದೇಶದಲ್ಲಿ ಕಾಡ್ಗಿಚ್ಚು – ಬೆಂಕಿ ನಂದಿಸಲು ಹೆಲಿಕಾಪ್ಟರ್ನಿಂದ 66,000 ಲೀಟರ್ ನೀರು ಚೆಲ್ಲಿದ ವಾಯುಪಡೆ

