ಬೆಂಗಳೂರು: ನಗರದ ಕೋಣನಕುಂಟೆ ಕ್ರಾಸ್ ಬಳಿಯ ಗಾರ್ಮೆಂಟ್ಸ್ ನಲ್ಲಿ ರಾತ್ರಿ ಭಾರೀ ಅಗ್ನಿ ಅವಘಡ ಸಂಭವಿಸಿದೆ.
ಮೆಟ್ರೋ ಹಿಂಭಾಗದಲ್ಲಿರುವ ಲೊವೆಬಲ್ ಲಾಂಜರಿ ಗಾರ್ಮೆಂಟ್ಸ್ ನಲ್ಲಿ ಶಾರ್ಟ್ ಸರ್ಕ್ಯೂ ಟ್‍ನಿಂದ ಬೆಂಕಿಹೊತ್ತಿಕೊಂಡು ನಾಲ್ಕು ಅಂತಸ್ತಿನ ಕಟ್ಟಡಕ್ಕೆ ಬೆಂಕಿ ಆವರಿಸಿಕೊಂಡಿತ್ತು.
ಸುಮಾರು 300ಕ್ಕೂ ಹೆಚ್ಚು ಮಂದಿ ಕೆಲಸ ನಿರ್ವಹಿಸುತ್ತಿರುವ ಈ ಗಾರ್ಮೆಂಟ್ಸ್ ನಲ್ಲಿ ಬೆಂಕಿಹೊತ್ತಿಕೊಂಡಾಗ ಅದೃಷ್ಟವಶಾತ್ ಯಾರು ಇಲ್ಲದಿದ್ದರಿಂದ ಯಾವುದೇ ಸಾವು ನೋವು ಸಂಭವಿಸಲಿಲ್ಲ. ಆದ್ರೆ ಲಕ್ಷಾಂತರ ರೂಪಾಯಿ ಮೌಲ್ಯದ ವಸ್ತುಗಳು ಬೆಂಕಿಗಾಹುತಿಯಾಗಿದೆ.
ಸ್ಥಳಕ್ಕೆ ಧಾವಿಸಿದ 14ಕ್ಕೂ ಹೆಚ್ಚು ಅಗ್ನಿಶಾಮಕ ವಾಹನಗಳು ಕಾರ್ಯಾಚರಣೆ ನಡೆಸಿ ಬೆಂಕಿ ನಂದಿಸಲು ಹರಸಾಹಸ ಪಟ್ಟವು. ಅಶೋಕ್ ರೆಡ್ಡಿ ಎಂಬವ್ರಿಗೆ ಈ ಗಾರ್ಮೆಂಟ್ಸ್ ಸೇರಿದೆ ಅಂತ ತಿಳಿದುಬಂದಿದೆ.
https://www.youtube.com/watch?v=DJtNliKAIns&feature=youtu.be