ಬೆಲ್ಟ್ ತಯಾರಿಕಾ ಕಾರ್ಖಾನೆಯಲ್ಲಿ ಬೆಂಕಿ ಅವಘಡ

Public TV
1 Min Read
mandya fire accident

ಮಂಡ್ಯ: ವಿದ್ಯುತ್ ಶಾರ್ಟ್ ಸರ್ಕ್ಯೂಟ್‌ನಿಂದ ಬೆಲ್ಟ್ ತಯಾರಿಕಾ ಕಾರ್ಖಾನೆ (Belt Manufacturing Factory) ಹೊತ್ತಿನ ಉರಿದ ಘಟನೆ ಮಂಡ್ಯ (Mandya) ತಾಲೂಕಿನ ತೂಬಿನಕೆರೆ ಗ್ರಾಮದ ಕೈಗಾರಿಕಾ ಪ್ರದೇಶದಲ್ಲಿ ನಡೆದಿದೆ.

ಬೆಳಗಿನ ಜಾವ 4 ಗಂಟೆ ಸುಮಾರಿಗೆ ಕಾರ್ಖಾನೆಯಲ್ಲಿ ಬೆಂಕಿ (Fire Accident) ಕಾಣಿಸಿಕೊಂಡಿದ್ದು, ಬೆಂಕಿಯ ಕೆನ್ನಾಲಿಗೆಗೆ ಬೆಲ್ಟ್ ಫ್ಯಾಕ್ಟರಿ ಹೊತ್ತಿ ಉರಿದಿದೆ. ಪ್ಲೇಕಾನ್ ಹೆಸರಿನ ಕಾರ್ಖಾನೆಯಲ್ಲಿ ಬೆಂಕಿ ಅವಘಡ ಸಂಭವಿಸಿದೆ. ಘಟನೆಯ ಪರಿಣಾಮ ಇಡೀ ಕಾರ್ಖಾನೆ ಬೆಂಕಿಗೆ ಆಹುತಿಯಾಗಿದೆ. ಇದನ್ನೂ ಓದಿ: ರಾಮೇಶ್ವರಂ ಕೆಫೆ ಬಾಂಬ್‌ ಸ್ಫೋಟ ಸಿಲ್ಲಿ ಪ್ರಕರಣ: ಶರಣ ಪ್ರಕಾಶ್‌ ಪಾಟೀಲ್

ಅಗ್ನಿ ಶಾಮಕ ಸಿಬ್ಬಂದಿಯಿಂದ ಬೆಂಕಿ ನಂದಿಸುವ ಕಾರ್ಯ ಮುಂದುವರೆದಿದೆ. ಮಂಡ್ಯ ಗ್ರಾಮಾಂತರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ. ಇದನ್ನೂ ಓದಿ: ಬೆಂಗಳೂರಿನ ಬಾಂಬರ್‌ ಒಂಟಿ ತೋಳ ಭಯೋತ್ಪಾದಕ!

Share This Article