ಬೆಂಗಳೂರು: ಕುಂಬಳಗೋಡು ಇಂಡಸ್ಟ್ರಿಯಲ್ ಏರಿಯಾದಲ್ಲಿರುವ ಕೆಮಿಕಲ್ ಫ್ಯಾಕ್ಟರಿಯಲ್ಲಿ ಬೆಂಕಿ ಅವಘಡ ಸಂಭವಿಸಿದೆ. ಘಟನೆಯಲ್ಲಿ ಸೋನಿಯಾ ಕೆಮಿಕಲ್ ಫ್ಯಾಕ್ಟರಿ ಸಂಪೂರ್ಣವಾಗಿ ಸುಟ್ಟು ಕರಕಲಾಗಿದೆ.
Advertisement
ಲಕ್ಷಾಂತರ ರೂಪಾಯಿ ಮೌಲ್ಯದ ವಸ್ತುಗಳು ಬೆಂಕಿಗಾಹುತಿ ಆಗಿದೆ. ಅದೃಷ್ಟವಶಾತ್ ಯಾವುದೇ ಪ್ರಾಣ ಹಾನಿ ಸಂಭವಿಸಿಲ್ಲ. ಸುಮಾರು 8 ಅಗ್ನಿಶಾಮಕದಳದ ಸಿಬ್ಬಂದಿ ಬೆಂಕಿ ನಂದಿಸುವಲ್ಲಿ ಯಶಸ್ವಿಯಾದರು. ಸೋನಿಯಾ ಇಂಡಸ್ಟ್ರೀಸ್‍ನಲ್ಲಿ ಬ್ಯಾಟರಿಗೆ ಬಳಸುವ ಆಸಿರ್ ಸಂಗ್ರಹಿಸಲಾಗಿತ್ತು ಎನ್ನಲಾಗಿದೆ.
Advertisement
Advertisement
ಇತ್ತ ಸಿಲಿಕಾನ್ ಸಿಟಿಯಲ್ಲಿ ಮತ್ತೊಂದು ಸಿಲಿಂಡರ್ ಸ್ಫೋಟ ಪ್ರಕರಣ ದಾಖಲಾಗಿದೆ. ಗ್ಯಾಸ್ ಸೋರಿಕೆಯಿಂದ ಚಂದ್ರಲೇಔಟ್ ನ ಅತ್ತಿಗುಪ್ಪೆಯಲ್ಲಿನ ಮನೆಯೊಂದರಲ್ಲಿ ಸಿಲಿಂಡರ್ ಬ್ಲಾಸ್ಟ್ ಆಗಿದೆ. ಸ್ಫೋಟದ ದೃಶ್ಯ ಸಿಸಿಟಿವಿಯಲ್ಲಿ ಸೆರೆ ಆಗಿದೆ. ಇದನ್ನೂ ಓದಿ: ಸ್ಕಾರ್ಫ್ ವಿವಾದ, ಕಾಲೇಜಿಗೆ ಕೇಸರಿ ಶಲ್ಯ ಹಾಕಿಕೊಂಡು ಬಂದ ವಿದ್ಯಾರ್ಥಿಗಳು
Advertisement
ಸ್ಫೋಟದ ರಭಸಕ್ಕೆ ಮನೆಯಲ್ಲಿರೋ ವಸ್ತುಗಳು ಚೆಲ್ಲಾಪಿಲ್ಲಿ ಆಗಿದೆ. ಘಟನೆಯಲ್ಲಿ ಮೂರು ಮಕ್ಕಳು ಸೇರಿ ಒಟ್ಟು ಏಳು ಮಂದಿಗೆ ಗಂಭೀರವಾಗಿ ಗಾಯಗಳಾಗಿದೆ. ಸುಕುಮಾರ್(48), ಹರ್ಷಾ(41), ಘನಶ್ರೀ (13), ಹೇಮೇಶ್ವರ್ (7)ರಾಮಕ್ಕ (65), ಅನಿತಾ(31), ರಚನಾ(21) ಇವರನ್ನು ಹೆಚ್ಚಿನ ಚಿಕಿತ್ಸೆಗಾಗಿ ವಿಕ್ಟೋರಿಯಾಗೆ ದಾಖಲಿಸಲಾಗಿದೆ. ಇದನ್ನೂ ಓದಿ: ಹೊಸ ಸಮವಸ್ತ್ರದಲ್ಲಿ ಮಿಂಚಲಿದ್ದಾರೆ ಭಾರತೀಯ ಯೋಧರು – ವಿಶೇಷತೆ ಏನು?