ಕಾರವಾರ: ಮಾಜಿ ಸಂಸದ ಅನಂತ್ ಕುಮಾರ್ ಹೆಗ್ಡೆ(Anantkumar Hegde) ಮನೆಯಲ್ಲಿ ಅಗ್ನಿ ಅವಘಡ ಸಂಭವಿಸಿದೆ.
ಶಿರಸಿಯ KHB ಕಾಲೋನಿಯಲ್ಲಿ ಇರುವ ಮಾಜಿ ಸಂಸದ ಅನಂತಕುಮಾರ್ ಹೆಗಡೆ ಮನೆಯಿದ್ದು, ಮನೆಯ ಮೇಲ್ಭಾಗದ ಜಿಮ್ ಮಾಡುವ ಕೊಠಡಿಯಲ್ಲಿ ಶಾರ್ಟ ಸರ್ಕ್ಯೂಟ್ ನಿಂದ ಬೆಂಕಿಯಾದ ಪರಿಣಾಮ ಚಿಮ್ ಮಾಡುವ ಯಂತ್ರಗಳಿಗೆ ಅಲ್ಪ ಹಾನಿಯಾಗಿದೆ. ಇದನ್ನು ಹೊರತುಪಡಿಸಿದರೇ ಹೊಗೆಯಿಂದ ಗೋಡೆಗಳಿಗೆ ಹಾನಿಯಾಗಿದ್ದು ಅಂದಾಜು 50 ಸಾವಿರದಷ್ಟು ಹಾನಿಯಾಗಿರಬಹುದು ಎಂದು ಅಂದಾಜಿಸಲಾಗಿದೆ.
ಸ್ಥಳಕ್ಕೆ ಆಗಮಿಸಿದ ಅಗ್ನಿಶಾಮಕ ಸಿಬ್ಬಂದಿ ದೌಡಾಯಿಸಿ ಬೆಂಕಿ ನಂದಿಸಿದ್ದು ಯಾವುದೇ ದೊಡ್ಡ ಹಾನಿಯಾಗಿಲ್ಲ ಎಂದು ಜಿಲ್ಲಾ ಅಗ್ನಿಶಾಮಕ ಅಧಿಕಾರಿ ಸುನೀಲ್ ರವರು ಮಾಹಿತಿ ನೀಡಿದ್ದಾರೆ. ಇದನ್ನೂ ಓದಿ: ಉಮಾಪತಿ, ಪ್ರಥಮ್‍ಗೆ ಬೆದರಿಕೆ ಹಾಕಿದ್ದ ದರ್ಶನ್ ಅಭಿಮಾನಿ ಅರೆಸ್ಟ್, ಕ್ಷಮೆ