ಕೋರಮಂಗಲದ ಕಟ್ಟಡದಲ್ಲಿ ಬೆಂಕಿ ಅವಘಡ – ಪ್ರಾಣ ಉಳಿಸಿಕೊಳ್ಳಲು 4ನೇ ಮಹಡಿಯಿಂದ ಜಿಗಿದ

Public TV
1 Min Read
bengaluru koramangala fire

ಬೆಂಗಳೂರು: ಕೋರಮಂಗಲದ (Koramangala) 4 ಅಂತಸ್ತಿನ ಕಟ್ಟಡದಲ್ಲಿ (Building) ಬೆಂಕಿ ಅವಘಡ (Fire Accident) ಸಂಭವಿಸಿದ್ದು, ವ್ಯಕ್ತಿಯೊಬ್ಬ ಜೀವ ಉಳಿಸಿಕೊಳ್ಳಲು ಕಟ್ಟಡದ ಟೆರಿಸ್‌ನಿಂದ ಜಿಗಿದಿರುವ ಆಘಾತಕಾರಿ ಘಟನೆ ನಡೆದಿದೆ.

ಕೋರಮಂಗಲದ ಮಡ್ ಪೈಪ್ ಕಟ್ಟಡದಲ್ಲಿ ಬೆಂಕಿ ಕಾಣಿಸಿಕೊಂಡಿದೆ. ಕಟ್ಟಡಕ್ಕೆ ಬೆಂಕಿ ಹೊತ್ತಿಕೊಂಡು ಧಗಧಗನೆ ಉರಿದಿದೆ. ಈ ವೇಳೆ ಬೆಂಕಿಯ ಕೆನ್ನಾಲಿಗೆಯಿಂದ ತಪ್ಪಿಸಿಕೊಳ್ಳಲು ವ್ಯಕ್ತಿಯೊಬ್ಬ ಕೊನೆಯ ಮಹಡಿಯಿಂದ ಕೆಳಗೆ ಜಿಗಿದಿದ್ದಾನೆ. ಸ್ಥಳೀಯರು ಇದರ ವೀಡಿಯೋ ಚಿತ್ರೀಕರಿಸಿದ್ದಾರೆ. ಇದೀಗ ವ್ಯಕ್ತಿಯ ಸ್ಥಿತಿ ಚಿಂತಾಜನಕವಾಗಿದೆ.

bengaluru koramangala fire 1

ಸಿಲಿಂಡರ್ ಬ್ಲಾಸ್ಟ್ನಿಂದ ಕಟ್ಟಡಕ್ಕೆ ಬೆಂಕಿ ಹೊತ್ತಿಕೊಂಡಿದ್ದು, ಬಿಲ್ಡಿಂಗ್‌ನ ಮೇಲೆ ಇರುವ ಮಳಿಗೆ ಸಂಪೂರ್ಣ ಬೆಂಕಿಗಾಹುತಿಯಾಗಿದೆ. ಅಗ್ನಿ ಅವಘಡವಾದ ಬಳಿಕ 6 ಅಗ್ನಿಶಾಮಕ ವಾಹನಗಳು ಸ್ಥಳಕ್ಕೆ ದೌಡಾಯಿಸಿವೆ. ಬೆಂಕಿ ನಿಯಂತ್ರಿಸಲು ಅಗ್ನಿಶಾಮಕ ದಳದವರು ಹರಸಾಹಸಪಡುತ್ತಿದ್ದಾರೆ. ಇದನ್ನೂ ಓದಿ: ಯಾಕೆ ಚಿರಾಡ್ತೀಯಾ?, ನೀನು ನಾಯಿನಾ, ಹಂದಿನಾ?- ಮಹಿಳೆಗೆ ನಿಂದಿಸಿದ ಪೊಲೀಸ್

ಕಟ್ಟಡದ ಮೇಲ್ಬಾಗದಲ್ಲಿ 5-6 ಸಿಲಿಂಡರ್‌ಗಳನ್ನು ಇಡಲಾಗಿತ್ತು ಎನ್ನಲಾಗಿದೆ. ಬಿಲ್ಡಿಂಗ್ ಹತ್ತಿರವೂ ಸುಳಿಯಲು ಅಸಾಧ್ಯವಾದ ಪರಿಸ್ಥಿತಿ ನಿರ್ಮಾಣವಾಗಿದೆ. ಸ್ಥಳೀಯರು ಅಕ್ಕ-ಪಕ್ಕದ ಬಿಲ್ಡಿಂಗ್‌ಗೆ ಬೆಂಕಿ ಆವರಿಸುವ ಆತಂಕದಲ್ಲಿದ್ದಾರೆ. ಇದನ್ನೂ ಓದಿ: ಗೋವಾದಿಂದ ಟ್ರಾನ್ಸ್‌ಫಾರ್ಮರ್‌ನಲ್ಲಿ ಮದ್ಯ ಸಾಗಾಟ – ಆರೋಪಿ ಅರೆಸ್ಟ್

Web Stories
[web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

Share This Article