ಆಟಿಕೆ ವಸ್ತುಗಳಿದ್ದ ಗೋದಾಮು ಧಗಧಗ – ಕಟ್ಟಡದಲ್ಲಿ ಸಿಲುಕಿದ್ದ ಮಹಿಳೆ ರೆಸ್ಕ್ಯೂ

Public TV
1 Min Read
BENGALURU

ಬೆಂಗಳೂರು: ಸಿಲಿಕಾನ್ ಸಿಟಿಯಲ್ಲಿ ಮತ್ತೊಂದು ಅಗ್ನಿ ಅವಘಡ (Fire Accident) ಸಂಭವಿಸಿದೆ. ಬೆಂಕಿಯ ಕೆನ್ನಾಲಿಗೆಗೆ ಆಟಿಕೆ ವಸ್ತುಗಳಿದ್ದ ಗೋದಾಮು ಧಗಧಗ ಹೊತ್ತಿ ಉರಿದಿದ್ದು, ಕಟ್ಟಡದಲ್ಲಿ ಸಿಲುಕಿದ್ದ ಮಹಿಳೆಯನ್ನು ರಕ್ಷಣೆ ಮಾಡಲಾಗಿದೆ.

ಕುಂಬಾರಪೇಟೆಯಲ್ಲಿ ಭಾನುವಾರ ಮಧ್ಯಾಹ್ನ ಈ ಅಗ್ನಿ ಅವಘಡ ಸಂಭವಿಸಿದ್ದು, ಐದು ಅಂತಸ್ತಿನ ಕಟ್ಟಡದಲ್ಲಿ 3 ಅಂತಸ್ತು ಸಂಪೂರ್ಣವಾಗಿ ಸುಟ್ಟು ಕರಕಲಾಗಿದೆ. ಬೆಂಕಿ ನಂದಿಸಲು ಅಗ್ನಿಶಾಮಕ ಸಿಬ್ಬಂದಿ ಹರಸಾಹಸ ಪಟ್ಟಿದ್ದಾರೆ. ನೀರು ಹಾಕಿದಷ್ಟು ಹೆಚ್ಚಾಗಿ ಬೆಂಕಿ ಉರಿಯುತ್ತಿದೆ. ಇದನ್ನೂ ಓದಿ: World Cup 2023: ನಾವು ಯಾವಾಗಲೂ ನಿಮ್ಮೊಂದಿಗಿರುತ್ತೇವೆ – ಟೀಂ ಇಂಡಿಯಾಕ್ಕೆ ಮೋದಿ ಅಭಯ

ನಿನ್ನೆ ಮಧ್ಯಾಹ್ನ 3 ಗಂಟೆ ಸುಮಾರಿಗೆ ಬೆಂಕಿ ಹೊತ್ತಿಕೊಂಡಿದೆ. ಈ ವೇಳೆ ಗೋಡೌನ್‍ನಿಂದ ಮೇಲಿನ ಕಾರಿಡಾರ್‍ಗೆ ಮಹಿಳೆ ಬಂದಿದ್ದಾರೆ. ಅಷ್ಟರಲ್ಲಾಗಲೇ ಬೆಂಕಿ ಹಂತ ಹಂತವಾಗಿ ಆವರಿಸಿಕೊಳ್ಳುತ್ತಿತ್ತು. ಈ ವೇಳೆ ಸ್ಥಳೀಯರ ಸಹಾಯದಿಂದ ಮಹಿಳೆಯನ್ನು ರಕ್ಷಣೆ ಮಾಡಲಾಗಿದೆ.

ಹೊಗೆ ಮಧ್ಯೆ ಏಣಿ ಏರಿ ಮಹಿಳೆ ಪ್ರಾಣ ಉಳಿಸಿಕೊಂಡಿದ್ದಾರೆ. ಸ್ಥಳೀಯರೆಲ್ಲ ಪಕ್ಕದ ಕಟ್ಟಡದಿಂದ ಏಣಿ ಇಟ್ಟಿದ್ದು, ಅದೇ ಏಣಿ ಏರಿ ಬರುವ ಮೂಲಕ ಮಹಿಳೆ ಭಾರೀ ಅವಘಡದಿಂದ ಪಾರಾಗಿದ್ದಾರೆ. ಕಟ್ಟಡದ ನಾಲ್ಕನೇ ಫ್ಲೋರ್ ನಲ್ಲಿಯೂ ಬೆಂಕಿಯ ಜ್ವಾಲೆ ಆವರಿಸಿದೆ.

Share This Article