ರಾಯಚೂರು: ಬೆಂಕಿ (Fire) ಅವಘಡದಿಂದಾಗಿ ಮನೆಯಲ್ಲಿದ್ದ ತಾಯಿ (Mother) ಹಾಗೂ ಇಬ್ಬರು ಮಕ್ಕಳು ಸಜೀವ ದಹನವಾಗಿರುವ ಹೃದಯ ವಿದ್ರಾವಕ ಘಟನೆ ರಾಯಚೂರು (Raichur) ಜಿಲ್ಲೆಯ ಶಕ್ತಿನಗರದಲ್ಲಿ ನಡೆದಿದೆ.
ಶಕ್ತಿನಗರದ ಕೆಪಿಸಿ ಕ್ವಾಟ್ರಸ್‌ನಲ್ಲಿ ಈ ಘಟನೆ ನಡೆದಿದ್ದು, ಮೃತರನ್ನು ಮಂಡ್ಯ (Mandya) ಮೂಲದ ರಂಜಿತಾ(33), ಮಕ್ಕಳಾದ ಮೃದಲ(13), ತಾರುಣ್ಯ(5) ಎಂದು ಗುರುತಿಸಲಾಗಿದೆ. ಮನೆಯಲ್ಲಿ ಅಳವಡಿಸಿದ್ದ ಎಸಿ ಸ್ಫೋಟದಿಂದ (AC Blast) ಬೆಂಕಿ ಹೊತ್ತಿಕೊಂಡಿರುವ ಶಂಕೆ ವ್ಯಕ್ತವಾಗಿದೆ. ಆದ್ರೆ ಘಟನೆಗೆ ಇನ್ನೂ ಸ್ಪಷ್ಟವಾದ ಕಾರಣ ತಿಳಿದುಬಂದಿಲ್ಲ. ಇದನ್ನೂ ಓದಿ: ಈ ಬಾರಿ ಕಿಚಡಿ ಸರ್ಕಾರ ಬರಲ್ಲ, ಬಿಜೆಪಿ ಬಹುಮತದಿಂದ ಅಧಿಕಾರಕ್ಕೆ ಬರಲಿದೆ: ಸುಧಾಕರ್
ಮೃತ ರಂಜಿತಾ ಪತಿ ಸಿದ್ದಲಿಂಗಯ್ಯ ಸ್ವಾಮಿ ಆರ್‌ಟಿಪಿಎಸ್‌ನಲ್ಲಿ ಎಇಇ ಆಗಿ ಕೆಲಸ ಮಾಡುತ್ತಿದ್ದಾರೆ. ಇವರು ಕೆಲಸಕ್ಕೆ ತೆರಳಿದ್ದ ವೇಳೆ ಮನೆಯಲ್ಲಿ ಅವಘಡ ನಡೆದಿದೆ. ಶಕ್ತಿನಗರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ. ಮೃತರ ಸಂಬಂಧಿಕರ ಹೇಳಿಕೆ ಪಡೆದ ಬಳಿಕ ಪ್ರಕರಣ ದಾಖಲಿಸಲು ಪೊಲೀಸರು ಕಾಯುತ್ತಿದ್ದು, ಮೃತ ದೇಹಗಳನ್ನು ಮರಣೋತ್ತರ ಪರೀಕ್ಷೆಗಾಗಿ ಶವಾಗಾರಕ್ಕೆ ರವಾನಿಸಲಾಗಿದೆ. ಇದನ್ನೂ ಓದಿ: ಬೊಮ್ಮಯಿ ಅಂದ್ರೆ ಪೇ ಸಿಎಂ ಎಂದು ಸಣ್ಣ ಮಕ್ಕಳನ್ನು ಕೇಳಿದ್ರೆ ಹೇಳ್ತಾರೆ: ಸುರ್ಜೇವಾಲಾ