ಗಾಂಧೀನಗರ: ಗುಜರಾತ್‌ನ ಅಹಮದಾಬಾದ್ (Ahmedabad Hospital) ನಗರದ 10 ಅಂತಸ್ತಿನ ಆಸ್ಪತ್ರೆಯ ನೆಲಮಾಳಿಗೆಯಲ್ಲಿ ಭಾನುವಾರ ಬೆಂಕಿ ಕಾಣಿಸಿಕೊಂಡಿದ್ದು, ಮುನ್ನೆಚ್ಚರಿಕೆ ಕ್ರಮವಾಗಿ ಸುಮಾರು 125 ರೋಗಿಗಳನ್ನು ಸ್ಥಳಾಂತರಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಇಲ್ಲಿಯವರೆಗೆ ಯಾವುದೇ ಪ್ರಾಣಹಾನಿಯಾಗಿರುವ ಬಗ್ಗೆ ವರದಿಯಾಗಿಲ್ಲ ಎಂದು ಶಾಹಿಬಾಗ್ ಪೊಲೀಸ್ ಠಾಣೆಯ ಇನ್ಸ್‌ಪೆಕ್ಟರ್ ಎಂ.ಡಿ ಚಂಪಾವತ್ ತಿಳಿಸಿದ್ದಾರೆ. ಆಸ್ಪತ್ರೆಯಲ್ಲಿ ನವೀಕರಣ ಕಾರ್ಯ ನಡೆಯುತ್ತಿರುವುದರಿಂದ ನೆಲಮಾಳಿಗೆಯಲ್ಲಿ ಸಂಗ್ರಹಿಸಲಾಗಿದ್ದ ಹಲವಾರು ವಸ್ತುಗಳಿಗೆ ಬೆಂಕಿ ತಗುಲಿ ಭಾರೀ ಹೊಗೆ ಉಂಟಾಯಿತು ಎಂದು ಅಗ್ನಿಶಾಮಕ ಅಧಿಕಾರಿಯೊಬ್ಬರು ಹೇಳಿದ್ದಾರೆ. ಇದನ್ನೂ ಓದಿ: ಶ್ರೀಹರಿಕೋಟಾದಿಂದ ಸಿಂಗಾಪುರದ 7 ಉಪಗ್ರಹಗಳ ಉಡಾವಣೆ – ಯಶಸ್ವಿಯಾಗಿ ಕಕ್ಷೆ ಸೇರಿಸಿದ ISRO ರಾಕೆಟ್
Advertisement
Advertisement
ನಗರದ ಸಾಹಿಬಾಗ್ ಪ್ರದೇಶದಲ್ಲಿರುವ ರಾಜಸ್ಥಾನ ಆಸ್ಪತ್ರೆಯ ನೆಲಮಾಳಿಗೆಯಲ್ಲಿ ಬೆಳಗಿನ ಜಾವ 4:30 ರ ಸುಮಾರಿಗೆ ಬೆಂಕಿ ಕಾಣಿಸಿಕೊಂಡಿತ್ತು. ಅಗ್ನಿಶಾಮಕ ತಂಡಗಳು ಬೆಂಕಿ ನಂದಿಸುವ ಕಾರ್ಯ ನಡೆಸುತ್ತಿವೆ.
Advertisement
Advertisement
ಚಾರಿಟಬಲ್ ಟ್ರಸ್ಟ್‌ಗೆ ಸೇರಿದ ಆಸ್ಪತ್ರೆ ಇದಾಗಿದೆ. ಮುನ್ನೆಚ್ಚರಿಕೆ ಕ್ರಮವಾಗಿ ಸುಮಾರು 125 ರೋಗಿಗಳನ್ನು ವಿವಿಧ ಆಸ್ಪತ್ರೆಗಳಿಗೆ ಸ್ಥಳಾಂತರಿಸಲಾಗಿದೆ ಎಂದು ಪೊಲೀಸ್ ಇನ್ಸ್‌ಪೆಕ್ಟರ್ ತಿಳಿಸಿದ್ದಾರೆ. ಇದನ್ನೂ ಓದಿ: Instagram ಪ್ರಿಯಕರನನ್ನ ಭೇಟಿಯಾಗಲು ಪಾಕಿಸ್ತಾನಕ್ಕೆ ಹೊರಟಿದ್ದ ರಾಜಸ್ಥಾನದ 16ರ ಹುಡುಗಿ ಅರೆಸ್ಟ್
Web Stories