ರಾಯಚೂರು: ನಗರದ ಎಪಿಎಂಸಿಯ (APMC) ಪಟೇಲ್ ಗಂಜ್‌ನಲ್ಲಿ ಅಗ್ನಿ ಅವಘಡ (Fire Accident) ನಡೆದಿದ್ದು ಲಕ್ಷಾಂತರ ರೂಪಾಯಿ ಮೌಲ್ಯದ ವಸ್ತುಗಳು ಬೆಂಕಿಗಾಹುತಿಯಾಗಿವೆ.
ರಾಜು ಪಾಟೀಲ್ ಎಂಬುವವರ ರಾಜರಾಮ್ ಟ್ರೇಡರ್ಸ್ ಗೋದಾಮಿನಲ್ಲಿ ಬೆಂಕಿ ಕಾಣಿಸಿಕೊಂಡಿದ್ದು ಸುಮಾರು 30 ಲಕ್ಷ ರೂಪಾಯಿ ಮೌಲ್ಯದ ಕಿರಾಣಿ ಅಂಗಡಿ ಸಾಮಗ್ರಿಗಳು, ಪೂಜಾ ಸಾಮಗ್ರಿಗಳು ಅಗ್ನಿಗಾಹುತಿಯಾಗಿವೆ. ಡ್ರೈಫ್ರೂಟ್ಸ್, ಒಣ ಕೊಬ್ಬರಿ, ದವಸ ಧಾನ್ಯ ಸೇರಿ ಕಿರಾಣಿ ಅಂಗಡಿ ವಸ್ತುಗಳನ್ನ ಸಂಗ್ರಹಿಸಿಟ್ಟಿದ್ದ ಗೋದಾಮಿನಲ್ಲಿ ಶಾರ್ಟ್ ಸರ್ಕ್ಯೂಟ್ ನಿಂದ ಬೆಂಕಿ ಹೊತ್ತಿಕೊಂಡಿದೆ. ಇದನ್ನೂ ಓದಿ: ಟೀಂ ಇಂಡಿಯಾ ಮಾಜಿ ಕ್ರಿಕೆಟಿಗ ಸೌರವ್ ಗಂಗೂಲಿ, ಪತ್ನಿಗೆ ಕೊಲೆ ಬೆದರಿಕೆ – ತನಿಖೆ ಆರಂಭ

ಅದೃಷ್ಟವಶಾತ್ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ. ಅಗ್ನಿಶಾಮಕದಳ ಸಿಬ್ಬಂದಿ ಬೆಂಕಿ ನಂದಿಸಿದ್ದಾರೆ. ಮಾರ್ಕೆಟ್ ಯಾರ್ಡ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.ಇದನ್ನೂ ಓದಿ: ಕೊಲಂಬಿಯಾದಲ್ಲಿ 7.4 ತೀವ್ರತೆಯ ಪ್ರಬಲ ಭೂಕಂಪ – ಸಾವಿನ ಸಂಖ್ಯೆ 132ಕ್ಕೆ ಏರಿಕೆ

