ಚಿಕ್ಕಮಗಳೂರು: ಆಕಸ್ಮಿಕ ಬೆಂಕಿ ಬಿದ್ದು ಹತ್ತಾರು ಎಕರೆ ಅರಣ್ಯ (Forest) ಬೆಂಕಿಗಾಹುತಿಯಾಗಿರುವ ಘಟನೆ ಜಿಲ್ಲೆಯ ಮೂಡಿಗೆರೆ ತಾಲೂಕಿನ ಕೊಟ್ಟಿಗೆಹಾರ ಸಮೀಪದ ಚಾರ್ಮಾಡಿ ಘಾಟಿಯಲ್ಲಿ (Charmadi Ghat) ನಡೆದಿದೆ.
ಚಾರ್ಮಾಡಿ ಘಾಟಿಯ ಆಲೆಖಾನ್ ಹೊರಟ್ಟಿ ಸಮೀಪದ ಮಲಯಮಾರುತ ಸಮೀಪದ ಬಳಿ ಗುಡ್ಡಕ್ಕೆ ಆಕಸ್ಮಿಕ ಬೆಂಕಿ (Fire) ಬಿದ್ದು ಹತ್ತಾರು ಎಕರೆ ಅರಣ್ಯ ಸುಟ್ಟುಕರಕಾಲಾಗಿದೆ. ಅರಣ್ಯ ಪ್ರದೇಶಕ್ಕೆ ಬೆಂಕಿ ಬೀಳುತ್ತಿದ್ದಂತೆ ಎಚ್ಚೆತ್ತುಕೊಂಡ ಅರಣ್ಯ ಇಲಾಖೆ ಸಿಬ್ಬಂದಿ ಕೂಡಲೇ ಕಾರ್ಯಾಚರಣೆ ನಡೆಸಿ ಬೆಂಕಿಯನ್ನು ನಂದಿಸಿದ್ದಾರೆ.
Advertisement
ಅರಣ್ಯಕ್ಕೆ ಆಕಸ್ಮಿಕವಾಗಿ ಬೆಂಕಿ ಬಿತ್ತೋ ಅಥವಾ ಯಾರಾದರೂ ಬೆಂಕಿ ಹಾಕಿದ್ದಾರೋ ತಿಳಿದಿಲ್ಲ. ಆದರೆ ಗಾಳಿ ಹಾಗೂ ಬಿಸಿಲಿನ ಝಳಕ್ಕೆ ಒಣಗಿದ್ದ ಗುಡ್ಡದ ಮರಗಿಡಗಳು ಹಾಗೂ ಹುಲ್ಲು ಹೊತ್ತಿ ಉರಿದಿದೆ. ಬೇಸಿಗೆಯಾದ್ದರಿಂದ ಬಿಸಿಲ ಧಗೆಗೆ ಬೆಂಕಿಯ ಜ್ವಾಲೆ ಹೆಚ್ಚಿದ್ದರಿಂದ ಅರಣ್ಯ ಅಧಿಕಾರಿಗಳು ಹಾಗೂ ಅಗ್ನಿಶಾಮಕ ಸಿಬ್ಬಂದಿಗಳು ಬೆಂಕಿಯನ್ನು ನಂದಿಸಲು ಹರಸಾಹಸಪಟ್ಟಿದ್ದಾರೆ. ಇದನ್ನೂ ಓದಿ: ಹೈಕೋರ್ಟ್‌ನ ನಿವೃತ್ತ ನ್ಯಾಯಾಧೀಶ ಶುಕ್ಲಾ ವಿರುದ್ಧ ಭ್ರಷ್ಟಾಚಾರ ಕೇಸ್ ದಾಖಲಿಸಿದ ಸಿಬಿಐ
Advertisement
Advertisement
ಕಾರ್ಯಾಚರಣೆಯಲ್ಲಿ ಉಪವಲಯ ಅರಣ್ಯಾಧಿಕಾರಿ ಬಸವರಾಜು, ಅರಣ್ಯ ರಕ್ಷಕ ಪರಮೇಶ್, ಅಭಿಷೇಕ್, ಸಿಬ್ಬಂದಿ ದಿನೇಶ್, ವೀರಪ್ಪಗೌಡ ಇದ್ದರು.
Advertisement
ಚಾರ್ಮಾಡಿ ಘಾಟಿ ದಟ್ಟ ಕಾನನದ ಬೆಟ್ಟಗುಡ್ಡಗಳಿಂದ ಕೂಡಿರುವ ಪ್ರದೇಶ. ಇಲ್ಲಿ ಗುಡ್ಡದ ತುದಿ ಅಥವಾ ಗುಡ್ಡದಲ್ಲಿ ಬೆಂಕಿ ಬಿದ್ದರೆ ನಂದಿಸುವುದು ಬಹಳ ಕಷ್ಟ. ಸ್ಥಳಕ್ಕೆ ಹೋಗುವಷ್ಟರಲ್ಲಿ ನೂರಾರು ಎಕರೆ ಅರಣ್ಯ ಸುಟ್ಟು ಕರಕಲಾಗುತ್ತದೆ. ಹಾಗಾಗಿ ಅರಣ್ಯ ಇಲಾಖೆ ಸಿಬ್ಬಂದಿ ಕೂಡ ಚಾಮಾಡಿಘಾಟಿಯನ್ನು ಕಣ್ಣಲ್ಲಿ ಕಣ್ಣಿಟ್ಟು ಕಾಪಾಡುತ್ತಾರೆ. ಆದರೂ ಕೆಲವೊಮ್ಮೆ ಅಲ್ಲಲ್ಲಿ ಬೆಂಕಿ ಬಿದ್ದು ಅರಣ್ಯ ನಾಶವಾಗುತ್ತಿದೆ.
LIVE TV
[brid partner=56869869 player=32851 video=960834 autoplay=true]
Join our Whatsapp group by clicking the below link
https://chat.whatsapp.com/E6YVEDajTzH06LOh77r25k