ದೆಹಲಿಯ ಕೋಚಿಂಗ್ ಸೆಂಟರ್‌ನಲ್ಲಿ ಭಾರೀ ಬೆಂಕಿ – ಕಿಟಕಿಯಿಂದ ಹಾರಿ ಜೀವ ಉಳಿಸಿಕೊಂಡ ವಿದ್ಯಾರ್ಥಿಗಳು

Public TV
1 Min Read
Delhi Coaching Centre Fire Students Window

ನವದೆಹಲಿ: ಕೋಚಿಂಗ್ ಸೆಂಟರ್ (Coaching Centre) ಒಂದರಲ್ಲಿ ಭಾರೀ ಬೆಂಕಿ (Fire) ಕಾಣಿಸಿಕೊಂಡಿದ್ದು, ವಿದ್ಯಾರ್ಥಿಗಳು (Students) ಕಿಟಕಿಯಿಂದ (Window) ಹಾರಿ ಜೀವ ಉಳಿಸಿಕೊಂಡಿರುವ ಘಟನೆ ದೆಹಲಿಯ (Delhi) ಮುಖರ್ಜಿ ನಗರ ಪ್ರದೇಶದಲ್ಲಿ ನಡೆದಿದೆ.

ನಗರದ ಕೋಚಿಂಗ್ ಇನ್‌ಸ್ಟಿಟ್ಯೂಟ್‌ನಲ್ಲಿ ಗುರುವಾರ ಭಾರೀ ಬೆಂಕಿ ಕಾಣಿಸಿಕೊಂಡಿದೆ. ಮಧ್ಯಾಹ್ನ 12:30ರ ವೇಳೆ ಬೆಂಕಿ ಕಾಣಿಸಿಕೊಂಡಿದ್ದು, 11 ಅಗ್ನಿಶಾಮಕ ವಾಹನಗಳು ಸ್ಥಳಕ್ಕೆ ಧಾವಿಸಿವೆ. ಬೆಂಕಿ ನಂದಿಸಲು ಹಾಗೂ ರಕ್ಷಣಾ ಕಾರ್ಯಗಳನ್ನು ಮುಂದುವರಿಸಲಾಗಿದೆ.

ಘಟನೆಗೆ ಸಂಬಧಿಸಿದಂತೆ ಸಾಮಾಜಿಕ ಜಾಲತಾಣಗಳಲ್ಲಿ ವೀಡಿಯೋಗಳು ಹರಿದಾಡುತ್ತಿವೆ. ಜನರು, ವಿದ್ಯಾರ್ಥಿಗಳನ್ನು ಅಗ್ನಿಶಾಮಕ ಸಿಬ್ಬಂದಿ ಕಿಟಕಿಗಳ ಮೂಲಕ ರಕ್ಷಣೆ ಮಾಡುತ್ತಿರುವುದು ಕಾಣಿಸಿಕೊಂಡಿದೆ. ಜನರು ಹಗ್ಗಗಳನ್ನು ಬಳಸಿ ಬೆಂಕಿಯಿಂದ ತಪ್ಪಿಸಿಕೊಳ್ಳುತ್ತಿರುವುದು ವೀಡಿಯೋದಲ್ಲಿ ಕಂಡುಬಂದಿದೆ. ಸದ್ಯ ಇಲ್ಲಿಯವರೆಗೆ ಯಾವುದೇ ಪ್ರಾಣಹಾನಿ ವರದಿಯಾಗಿಲ್ಲ. ಇದನ್ನೂ ಓದಿ: ಬ್ರಿಜ್ ಭೂಷಣ್ ವಿರುದ್ಧ 1,000 ಪುಟಗಳ ಚಾರ್ಜ್‌ಶೀಟ್ ಸಲ್ಲಿಕೆ – ಪೋಕ್ಸೊ ಕೇಸ್‌ ರದ್ದಿಗೆ ದೆಹಲಿ ಪೊಲೀಸರ ಶಿಫಾರಸ್ಸು

ಕಟ್ಟಡದ ವಿದ್ಯುತ್ ಮೀಟರ್‌ನಿಂದಾಗಿ ಬೆಂಕಿ ಕಾಣಿಸಿಕೊಂಡಿದೆ ಎನ್ನಲಾಗಿದೆ. ಬೆಂಕಿ ಹೊತ್ತಿಕೊಂಡ ಕಟ್ಟಡದಿಂದ ತಪ್ಪಿಸಿಕೊಳ್ಳುತ್ತಿದ್ದಾಗ 4 ವಿದ್ಯಾರ್ಥಿಗಳಿಗೆ ಗಾಯಗಳಾಗಿವೆ. ಸದ್ಯ ಯಾವುದೇ ವ್ಯಕ್ತಿ ಬೆಂಕಿ ತಗುಲಿದ ಕಟ್ಟಡದಲ್ಲಿ ಸಿಲುಕಿಕೊಂಡಿಲ್ಲ ಎಂದು ದೆಹಲಿ ಪೊಲೀಸರು ತಿಳಿಸಿದ್ದಾರೆ. ಇದನ್ನೂ ಓದಿ: KRS ಡ್ಯಾಂ ನೀರಿನ ಮಟ್ಟ 5 ವರ್ಷದಲ್ಲಿ ದಾಖಲೆ ಪ್ರಮಾಣದಲ್ಲಿ ಕುಸಿತ

Share This Article