ಗದಗ: ಜಿಲ್ಲೆಯ ಮುಂಡರಗಿ ತಾಲೂಕಿನ ಔಷಧಿಯ ಸಸ್ಯಕಾಶಿ ಕಪ್ಪತ್ತಗುಡ್ಡ ಬೆಂಕಿಯ ಕೆನ್ನಾಲಿಗೆಯಿಂದ ಧಗ ಧಗಿಸಿದೆ.
ಮುಂಡರಗಿ ತಾಲೂಕಿನ ಕಲಕೇರಿ ಹಾಗೂ ವಿರುಪಾಪೂರ ಗ್ರಾಮದ ಬಳಿ ಬುಧವಾರ ರಾತ್ರಿ ಸುಮಾರು 8 ಗಂಟೆಗೆ ಬೆಂಕಿ ಕಾಣಿಸಿಕೊಂಡಿದೆ. ಸುಮಾರು ಒಂದು ಹೆಕ್ಟರ್‍ಗೂ ಅಧಿಕ ಪ್ರದೇಶದವರೆಗೆ ಬೆಂಕಿ ವ್ಯಾಪಿಸಿದೆ. ಇದರಿಂದ ಅಪಾರ ಪ್ರಮಾಣದ ಆಯುರ್ವೇದ ಔಷಧಿಯ ಸಂಪತ್ತು ಬೆಂಕಿಗೆ ಆಹುತಿಯಾಗಿದೆ.
Advertisement
Advertisement
ಇತ್ತೀಚೆಗಷ್ಟೇ ಕಪ್ಪತ್ತಗುಡ್ಡ ಸಂರಕ್ಷಿತ ಅರಣ್ಯ ಪ್ರದೇಶ ಎಂಬುವುದಾಗಿ ಘೋಷಣೆಯಾಗಿದೆ. ಘೋಷಣೆಯಾದ ಬಳಿಕ ಪದೇ ಪದೇ ಬೆಂಕಿ ಕಾಣಿಸಿಕೊಳ್ಳುತ್ತಿರುವುದು ಈ ಭಾಗದ ಜನರಲ್ಲಿ ಆತಂಕ ಶುರುವಾಗಿದೆ. ಗುಡ್ಡದಲ್ಲಿ ಬೆಂಕಿ ಕಾಣಿಸಿಕೊಂಡ ತಕ್ಷಣವೇ ಗ್ರಾಮಸ್ಥರು ಅರಣ್ಯ ಅಧಿಕಾರಿಗಳಿಗೆ ಮಾಹಿತಿ ತಿಳಿಸಿದ್ರೂ, ಇಲಾಖೆಯ ಸಿಬ್ಬಂದಿ ತಡವಾಗಿ ಬಂದಿದ್ದಾರೆ. ಇದು ಸ್ಥಳೀಯರ ಕೋಪಕ್ಕೆ ಕಾರಣವಾಯಿತು.
Advertisement
Advertisement
ಸ್ಥಳಕ್ಕೆ ಬಂದ ಅಧಿಕಾರಿಗಳು ಗ್ರಾಮಸ್ಥರ ಸಹಾಯದಿಂದ ಬೆಂಕಿ ನಂದಿಸುವಲ್ಲಿ ಯಶ್ವಸಿಯಾಗಿದ್ದಾರೆ. ಕಪ್ಪತಗುಡ್ಡದಲ್ಲಿ ಪದೇ ಪದೇ ಬೆಂಕಿ ಕಾಣಿಸುಕೊಳ್ಳುತ್ತಿರುವುದು ಸಾಕಷ್ಟು ಅನುಮಾನಗಳಿಗೆ ಎಡೆಮಾಡಿಕೊಟ್ಟಿದೆ.