ಪ್ರಯಾಗ್‌ರಾಜ್: ಉತ್ತರ ಪ್ರದೇಶದ (Uttar Pradesh) ಪ್ರಯಾಗ್‌ರಾಜ್‌ನಲ್ಲಿ ನಡೆಯುತ್ತಿರುವ ಮಹಾ ಕುಂಭಮೇಳದಲ್ಲಿ ಮತ್ತೊಂದು ಅಗ್ನಿ ಅವಘಡ (Maha Kumbh Fire) ಸಂಭವಿಸಿದೆ.
ಮಹಾಕುಂಭ ನಗರದ (Maha Kumbh Nagar) ಸೆಕ್ಟರ್ 18ರಲ್ಲಿ ಅಗ್ನಿ ಅವಘಡ ಸಂಭವಿಸಿದೆ. ಸದ್ಯ ಯಾವುದೇ ಪ್ರಾಣಹಾನಿಯಾಗಿಲ್ಲ ಎಂದು ತಿಳಿದುಬಂದಿದೆ. ಇದನ್ನೂ ಓದಿ: 2027ಕ್ಕೆ ಚಂದ್ರಯಾನ-4, 2026ಕ್ಕೆ ಗಗನಯಾನ: ಜಿತೇಂದ್ರ ಸಿಂಗ್
Advertisement
Advertisement
ಸೆಕ್ಟರ್ 18ರ ತುಳಸಿ ಚೌರಾಹಾ ಬಳಿಕ ಕ್ಯಾಂಪ್‌ನಲ್ಲಿ ಬೆಂಕಿ ಕಾಣಿಸಿಕೊಂಡಿದೆ. ಕೂಡಲೇ ಸ್ಥಳಕ್ಕೆ ದೌಡಾಯಿಸಿದ ಅಗ್ನಿಶಾಮಕ ಸಿಬ್ಬಂದಿ ಬೆಂಕಿಯನ್ನು ನಿಯಂತ್ರಣಕ್ಕೆ ತರುವಲ್ಲಿ ಯಶಸ್ವಿಯಾಗಿದ್ದಾರೆ ಖಾಕ್ ಚೌಕ್ ಪೊಲೀಸ್ ಠಾಣೆಯ ಇನ್ಸ್‌ಪೆಕ್ಟರ್ ಯೋಗೇಶ್ ಚತುರ್ವೇದಿ ತಿಳಿಸಿದ್ದಾರೆ. ಇದನ್ನೂ ಓದಿ: ಕುಂಭಮೇಳದಲ್ಲಿ ಡಿಕೆಶಿ ಪುತ್ರಿ – ತ್ರಿವೇಣಿ ಸಂಗಮದಲ್ಲಿ ಪುಣ್ಯಸ್ನಾನ ಮಾಡಿದ ಐಶ್ವರ್ಯ
Advertisement
3ನೇ ಅವಘಡ:
ಮಹಾ ಕುಂಭಮೇಳದಲ್ಲಿ 3ನೇ ಬಾರಿಗೆ ಅಗ್ನಿ ಅವಘಡ ಸಂಭವಿಸಿದೆ. ಕಳೆದ ಜನವರಿ 30 ರಂದು ಸಂಭವಿಸಿದ್ದ ಅಗ್ನಿ ಅವಘಡದಲ್ಲಿ ಕನಿಷ್ಠ 15 ಟೆಂಟ್‌ಗಳು ಭಸ್ಮವಾಗಿದ್ದವು. ಇಂದು 3ನೇ ಬಾರಿಗೆ ಅಗ್ನಿ ಅವಘಡ ಸಂಭವಿಸಿದೆ. ಇದನ್ನೂ ಓದಿ: RBI: 5 ವರ್ಷಗಳ ಬಳಿಕ ರೆಪೊ ದರ ಕಡಿತ ಮಾಡಿದ ಆರ್‌ಬಿಐ
Advertisement
39.7 ಕೋಟಿ ಜನರಿಂದ ಪುಣ್ಯಸ್ನಾನ:
ಫೆಬ್ರವರಿ 26ರ ವರೆಗೆ ನಡೆಯಲಿರುವ ಮಹಾ ಕುಂಭಮೇಳದಲ್ಲಿ 15 ಲಕ್ಷ ಮಂದಿ ವಿದೇಶಿಯರು ಸೇರಿದಂತೆ 45 ಕೋಟಿ ಭಕ್ತರು ತ್ರಿವೇಣಿ ಸಂಗಮದಲ್ಲಿ ಪುಣ್ಯಸ್ನಾನ ಮಾಡುವ ನಿರೀಕ್ಷೆ ಹೊಂದಲಾಗಿತ್ತು. ಆದ್ರೆ ಯುಪಿ ಸರ್ಕಾರದ ಅಂಕಿ-ಅಂಶಗಳ ಪ್ರಕಾರ ಈಗಾಗಲೇ, 39.7 ಕೋಟಿ ಭಕ್ತರು ಪುಣ್ಯಸ್ನಾನ ಮಾಡಿದ್ದಾರೆ.