ಚಿಕ್ಕೋಡಿ: ಬೆಳಗಾವಿ (Belagavi) ಜಿಲ್ಲೆಯ ನಿಪ್ಪಾಣಿ ಪಟ್ಟಣದ ಹೊರವಲಯದಲ್ಲಿರುವ ಹಾಲಸಿದ್ದನಾಥ ಸಹಕಾರಿ ಸಕ್ಕರೆ ಕಾರ್ಖಾನೆಯಲ್ಲಿ (Sugar Factory) ಅಗ್ನಿ (Fire) ಅವಘಡ ಸಂಭವಿಸಿದೆ.
ಬಾಯ್ಲರ್‌ನಲ್ಲಿ ಕಾಣಿಸಿಕೊಂಡ ಆಕಸ್ಮಿಕ ಬೆಂಕಿ ಕ್ಷಣಾರ್ಧದಲ್ಲಿ ಕಾರ್ಖಾನೆಗೆ ವ್ಯಾಪಕವಾಗಿ ಹರಡಿದೆ. ಬೆಂಕಿಯಿಂದ 24 ಟನ್ ಸಾಮರ್ಥ್ಯದ ಬಾಯ್ಲರ್ (Factory Boiler) ಹೊತ್ತಿ ಉರಿದಿದೆ. ಇದನ್ನೂ ಓದಿ: ಚಲಿಸುತ್ತಿದ್ದ ರೈಲಿಗೆ ತಲೆಕೊಟ್ಟು ಎಎಸ್‌ಐ ಮಗಳು ಆತ್ಮಹತ್ಯೆ
ಘಟನೆಯಲ್ಲಿ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ. ಅಂದಾಜು 5 ಕೋಟಿ ರೂ. ಮೌಲ್ಯದ ಆಸ್ತಿ ಬೆಂಕಿಗಾಹುತಿಯಾಗಿದೆ. ಕಾರ್ಖಾನೆಯಲ್ಲಿನ ಅಗ್ನಿ ನಂದಿಸಲು ಸ್ಥಳದಲ್ಲಿ 9 ಅಗ್ನಿಶಾಮಕ ವಾಹನ ನಿಯೋಜಿಸಲಾಗಿತ್ತು. ನಿಪ್ಪಾಣಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.