ಹೈದರಾಬಾದ್: ನಗರದ ಕುಕಟ್‌ಪಲ್ಲಿ ಹೌಸಿಂಗ್ ಬೋರ್ಡ್ ಕಾಲೋನಿಯಲ್ಲಿರುವ ಶಿವ ಪಾರ್ವತಿ ಥಿಯೇಟರ್‌ನಲ್ಲಿ ಭಾನುವಾರ ಸಂಜೆ ಭಾರಿ ಅಗ್ನಿ ಅವಘಡ ಸಂಭವಿಸಿದೆ.
ಅಗ್ನಿ ಅವಘಡದಿಂದಾಗಿ ಚಿತ್ರಮಂದಿರದಲ್ಲಿದ್ದ ಪೀಠೋಪಕರಣಗಳು ಸುಟ್ಟು ಬೂದಿಯಾಗಿದೆ ಹಾಗೂ ಥಿಯೇಟರ್‌ನ ಮೇಲ್ಛಾವಣಿ ಕುಸಿದಿದೆ. ಅದೃಷ್ಟವಶಾತ್ ಬೆಂಕಿ ಹೊತ್ತಿಕೊಂಡ ಸಂದರ್ಭದಲ್ಲಿ ಸ್ಥಳದಲ್ಲಿ ಯಾರೂ ಇಲ್ಲದಿದ್ದರಿಂದ ಯಾವುದೇ ಪ್ರಾಣಹಾನಿಯಾಗಿಲ್ಲ. ಇದನ್ನೂ ಓದಿ: ನಿಲ್ದಾಣದಲ್ಲಿ ಎಮರ್ಜೆನ್ಸಿ ಬ್ರೇಕ್ ಹಾಕಿದ ಲೊಕೊ ಪೈಲಟ್- ಕೆಲವೇ ಸೆಕೆಂಡ್‍ಗಳಲ್ಲಿ ವ್ಯಕ್ತಿ ಬಚಾವ್
ಚಿತ್ರಮಂದಿರದೊಳಗೆ ಬೆಂಕಿ ಕಾಣಿಸಿಕೊಂಡಾಗ ಭದ್ರತಾ ಸಿಬ್ಬಂದಿ ಅಗ್ನಿಶಾಮಕ ದಳಕ್ಕೆ ಕರೆ ಮಾಡಿದ್ದಾರೆ. ತಕ್ಷಣ ಅಲ್ಲಿಗೆ ಧಾವಿಸಿದ ಮೂರು ಅಗ್ನಿಶಾಮಕ ವಾಹನಗಳು ಬೆಂಕಿ ನಂದಿಸುವ ಕೆಲಸ ಮಾಡಿದೆ.
ಅಗ್ನಿಶಾಮಕದಳ ಚಿತ್ರಮಂದಿರಕ್ಕೆ ಹತ್ತಿಕೊಂಡಿದ್ದ ಬೆಂಕಿಯನ್ನು ನಂದಿಸಲು 3 ಗಂಟೆಗಳ ಕಾಲ ತೆಗೆದುಕೊಂಡಿದೆ. ಬೆಂಕಿ ಅವಘಡಕ್ಕೆ ಮುಖ್ಯ ಕಾರಣ ಏನು ಎಂಬುದನ್ನು ತಿಳಿಯಲು ಪೊಲೀಸರು ತನಿಖೆ ನಡೆಸುತ್ತಿದ್ದಾರೆ. ಇದನ್ನೂ ಓದಿ: ಕುಡಿದ ಮತ್ತಿನಲ್ಲಿ 6 ಬೈಕ್, 9 ಮಂದಿಗೆ ಗುದ್ದಿದ ಕಾರು ಚಾಲಕ